ಸಿಪಿಐ ನಾಯಕ ಕನ್ಹಯ್ಯ ಕುಮಾರ್ ಹತ್ಯೆಗೆ ಯತ್ನ
Recommended Video
ಪಾಟ್ನಾ, ಫೆಬ್ರವರಿ 5; ಬಿಹಾರದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಹಾಗೂ ಸಿಪಿಐ ಮುಖಂಡ ಕನ್ಹಯ್ಯ ಕುಮಾರ್ ಹತ್ಯೆಗೆ ಯತ್ನ ನಡೆದಿದೆ.
ಬುಧವಾರ ಸಂಜೆ ಬಿಹಾರದ ಸುಪಾಲ್ ಜಿಲ್ಲೆಯ ಸಹಾರಸ್ ನಲ್ಲಿ ಆಯೋಜಿಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟದಲ್ಲಿ ಪಾಲ್ಗೊಳ್ಳಲು ಕನ್ಹಯ್ಯ ತೆರಳುತ್ತಿದ್ದರು. ಈ ವೇಳೆ ಕನ್ಹಯ್ಯ ಗುರಿಯಾಗಿಸಿ ದುಷ್ಕರ್ಮಿಗಳು ಕಲ್ಲು ಹಾಗೂ ಕಬ್ಬಿಣದ ರಾಡುಗಳಿಂದ ವಾಹನಗಳ ಮೇಲೆ ದಾಳಿ ನಡೆಸಿದ್ದಾರೆ. ಆದರೆ, ಪೊಲೀಸರು ಆಗಮಿಸುತ್ತಿದ್ದನ್ನು ಅರಿತ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ದಾಳಿ ನಡೆಸಿದ್ದರಿಂದ ಘಟನೆಯಲ್ಲಿ ಕನ್ಹಯ್ಯ ಕುಮಾರ್ ತಲೆ ಮತ್ತು ಕೈಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಹಲ್ಲೆ ನಡೆಸಿದವರಾರು ಎಂಬುದರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಕೇವಲ ನಾಲ್ಕೇ ದಿನದಲ್ಲಿ ಕನ್ಹಯ್ಯ ಕುಮಾರ್ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ ಎಂದು ಎ ಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಕನ್ಹಯ್ಯ ಹಾಗೂ ಅವರ ತಂಡಕ್ಕೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ ಎಂದು ಸುಪಾಲ್ ಜಿಲ್ಲೆಯ ಎಸ್ ಪಿ ತಿಳಿಸಿದ್ದಾರೆ.

ಕಳೆದ ನಾಲ್ಕು ದಿನಗಳ ಹಿಂದೆ ಬಿಹಾರದ ಚಾಪ್ರಾ ಹಾಗೂ ಕೋವಾಸಿ ಮಾರ್ಗದಲ್ಲಿ ಕನ್ಹಯ್ಯ ಕುಮಾರ್ ಮೇಲೆ ದಾಳಿ ನಡೆದಿತ್ತು. ಪೌರತ್ವ ಕಾಯ್ದೆ ವಿರೋಧಿಸಿ ಹೋರಾಟ ನಡೆಸಿದ್ದ ಪ್ರಸ್ತುತ ಜೆಎನ್‌ಯು ವಿವಿ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷೆ ಮೇಲೂ ಇತ್ತೀಚೆಗೆ ದಾಳಿ ನಡೆದಿತ್ತು.












Click it and Unblock the Notifications