ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೊ ಬಳಸಿಕೊಳ್ಳಬೇಡಿ: ಎಲ್‌ಜೆಪಿಗೆ ಬಿಜೆಪಿ ತಾಕೀತು

|
Google Oneindia Kannada News

ಪಟ್ನಾ, ಅಕ್ಟೋಬರ್ 6: ಬಿಹಾರ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ಲೋಕ ಜನಶಕ್ತಿ ಪಕ್ಷವು (ಎಲ್‌ಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊವನ್ನು ಬಳಸುವುದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ.

ಬಿಹಾರದಲ್ಲಿನ ಎನ್‌ಡಿಎ ಒಕ್ಕೂಟದೊಳಗೆ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ಎಲ್‌ಜೆಪಿ ರಾಷ್ಟ್ರೀಯ ಅಧ್ಯಕ್ಷ ಚಿರಾಗ್ ಪಾಸ್ವಾನ್ ಮಧ್ಯೆ ಜಟಾಪಟಿ ಶುರುವಾಗಿರುವ ಬೆನ್ನಲ್ಲೇ ಜೆಡಿಯುಗೆ ಬೆಂಬಲದ ಸಂಕೇತವಾಗಿ ಬಿಜೆಪಿ ಆಕ್ಷೇಪ ಎತ್ತಿದೆ.

ಬಿಹಾರ ವಿಧಾನಸಭೆ ಚುನಾವಣೆ ಕಣಕ್ಕಿಳಿಯಲು ಶಿವಸೇನೆ ಸಜ್ಜು! ಬಿಹಾರ ವಿಧಾನಸಭೆ ಚುನಾವಣೆ ಕಣಕ್ಕಿಳಿಯಲು ಶಿವಸೇನೆ ಸಜ್ಜು!

ಚುನಾವಣಾ ಪ್ರಚಾರದ ವೇಳೆ ಎಲ್‌ಜೆಪಿಯು ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊ ಹಾಗೂ ಹೆಸರನ್ನು ಬಳಸಿಕೊಳ್ಳುವುದಕ್ಕೆ ತಡೆ ನೀಡುವಂತೆ ಮುಖ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ಪತ್ರ ಬರೆದು ಮನವಿ ಸಲ್ಲಿಸುವ ಸಾಧ್ಯತೆ ಇದೆ.

Bihar Assembly Election 2020: BJP Asks LJP Not To Use PM Modis Photo In Campaign

ಈ ಸಂಬಂಧ ಚುನಾವಣಾ ಆಯೋಗಕ್ಕೆ ಪತ್ರ ನೀಡುವ ಸಾಧ್ಯತೆ ಇದೆ. ಎಲ್‌ಜೆಪಿಯು ಮೈತ್ರಿಕೂಟದೊಳಗೆ ಉಳಿದುಕೊಳ್ಳದ ಕಾರಣದಿಂದ ಅದು ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಫೋಟೊಗಳನ್ನು ಪ್ರದರ್ಶಿಸುವಂತಿಲ್ಲ ಅಥವಾ ಅವರ ಭಾಷಣಗಳನ್ನು ಬಳಸಿಕೊಳ್ಳುವಂತಿಲ್ಲ ಎಂದು ಪಕ್ಷದ ಹಿರಿಯ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ ಬಿಜೆಪಿ ಮುಖಂಡರು ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಸಭೆ ಸಂದರ್ಭದಲ್ಲಿ ಈ ವಿಚಾರ ಚರ್ಚೆಗೆ ಬಂದಿದೆ. ಇದಕ್ಕೂ ಮುನ್ನ ಬಿಜೆಪಿಯ ಉನ್ನತ ನಾಯಕರೊಂದಿಗೆ ಈ ಕುರಿತು ಚರ್ಚಿಸಲಾಗಿತ್ತು ಎಂದು ಜೆಡಿಯು ಮೂಲಗಳು ತಿಳಿಸಿವೆ.

ಎನ್ ಡಿಎ ಮೈತ್ರಿ ಕಡಿದುಕೊಳ್ಳಲು ಕಾರಣ ಬಿಚ್ಚಿಟ್ಟ ಚಿರಾಗ್ ಪಾಸ್ವಾನ್ ಎನ್ ಡಿಎ ಮೈತ್ರಿ ಕಡಿದುಕೊಳ್ಳಲು ಕಾರಣ ಬಿಚ್ಚಿಟ್ಟ ಚಿರಾಗ್ ಪಾಸ್ವಾನ್

ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರ ನೇತೃತ್ವದಲ್ಲಿಯೇ ಎನ್‌ಡಿಎ ಚುನಾವಣೆಗೆ ಇಳಿಯಲಿದೆ ಎಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಜೆಡಿಯುಗೆ ಯಾವುದೇ ಮುಜುಗರ ಉಂಟಾಗುವುದಿಲ್ಲ ಎಂದು ಬಿಜೆಪಿ ಖಾತರಿ ನೀಡಲಿದೆ. ಸಮ್ಮಿಶ್ರ ರಾಜಕಾರಣದ ತತ್ವಗಳಿಗೆ ಬಿಜೆಪಿ ಬದ್ಧವಾಗಿರುತ್ತದೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

ಎಲ್‌ಜೆಪಿಯ ನಿಲುವಿನ ಬಗ್ಗೆ ಪಕ್ಷದಲ್ಲಿ ತೀವ್ರ ಅಸಮಾಧಾನವಿದೆ. ಬಿಹಾರ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ನಿತೀಶ್ ಕುಮಾರ್ ಅವರೇ ಆಗಲಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಕಳೆದ ವರ್ಷವೇ ಪ್ರಕಟಿಸಿದ್ದರು ಎಂದು ಅವರು ಹೇಳಿದ್ದಾರೆ.

English summary
Bihar Assembly Election 2020: BJP has asked LJP not to use PM Narendra Modi's pictures during poll campaign.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X