ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲ್‌ಜೆಪಿಗೂ ಬಿಜೆಪಿಗೂ ಸಂಬಂಧವಿಲ್ಲ: ಜಾವಡೇಕರ್

|
Google Oneindia Kannada News

ಪಟ್ನಾ, ಅಕ್ಟೋಬರ್ 17: ಎಲ್‌ಜೆಪಿ ಜತೆಗೆ ಬಿಜೆಪಿಗೆ ಯಾವುದೇ ಸಂಬಂಧ ಇಲ್ಲ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸ್ಪಷ್ಟಪಡಿಸಿದ್ದಾರೆ. ತಮ್ಮ ಮಿತ್ರಪಕ್ಷಗಳಾದ ಜೆಡಿಯು, ಎಚ್‌ಎಎಂ-ಎಸ್ ಮತ್ತು ವಿಐಪಿಗಳು ಜತೆಗೂಡಿ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮುಕ್ಕಾಲು ಭಾಗದ ಸೀಟುಗಳಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಪ್ಪುದಾರಿಗೆ ಎಳೆಯುವಂತಹ ಹೇಳಿಕೆಗಳನ್ನು ನೀಡುವ ಮೂಲಕ ಚಿರಾಗ್ ಪಾಸ್ವಾನ್ ಕೇವಲ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಪ್ರಯತ್ನ ಯಾವುದೇ ಫಲ ನೀಡುವುದಿಲ್ಲ. ನಮಗೆ ಬಿಹಾರದಲ್ಲಿ ಯಾವುದೇ 'ಬಿ ಟೀಮ್' ಇಲ್ಲ ಎಂದು ಜಾವಡೇಕರ್ ಹೇಳಿದ್ದಾರೆ.

'ನಾನು ಮೋದಿಯ ಹನುಮಂತ, ಬೇಕಿದ್ದರೆ ಎದೆ ಸೀಳಿ ತೋರಿಸುತ್ತೇನೆ''ನಾನು ಮೋದಿಯ ಹನುಮಂತ, ಬೇಕಿದ್ದರೆ ಎದೆ ಸೀಳಿ ತೋರಿಸುತ್ತೇನೆ'

ಎಲ್‌ಜೆಪಿ ಮತ್ತು ಬಿಜೆಪಿ ನಡುವಿನ ಹೋರಾಟ ಸ್ನೇಹಪೂರ್ವಕವಾಗಿದೆ. ಬಿಜೆಪಿ ಗೆದ್ದರೆ ನಾವು ಅದನ್ನು ಶ್ಲಾಘಿಸುತ್ತೇವೆ. ಒಂದು ವೇಳೆ ನಾವು ಗೆದ್ದರೆ ಬಿಜೆಪಿಗೆ ಬೆಂಬಲ ನೀಡುತ್ತೇವೆ. ಬಿಹಾರದಲ್ಲಿ ಬಿಜೆಪಿ-ಎಲ್‌ಜೆಪಿ ಸರ್ಕಾರವನ್ನು ನೋಡಲು ಬಯಸುತ್ತಿದ್ದೇವೆ ಎಂದು ಚಿರಾಗ್ ಪಾಸ್ವಾನ್ ಹೇಳಿದ್ದರು.

Bihar Assembly Election 2020: BJP Has No Links With LJP Says Prakash Javadekar

ತಾವು ಪ್ರಧಾನಿ ನರೇಂದ್ರ ಮೋದಿ ಅವರ ಹನುಮಂತ. ಮೋದಿ ಅವರು ತಮ್ಮ ಹೃದಯದಲ್ಲಿ ನೆಲೆಸಿದ್ದಾರೆ. ಬೇಕಿದ್ದರೆ ಎದೆ ಸೀಳಿ ಅವರನ್ನು ತೋರಿಸುತ್ತೇನೆ. ನಾವು ಚುನಾವಣೆಯಲ್ಲಿ ಗೆಲ್ಲಲು ಪ್ರಧಾನಿ ಮೋದಿ ಅವರ ಫೋಟೊಗಳನ್ನು ಬಳಸಿಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಪಾಸ್ವಾನ್ ಹೇಳಿದ್ದರು.

ನನ್ನ ಅಪ್ಪನನ್ನು ನಿತೀಶ್ ಕುಮಾರ್ ಅವಮಾನಿಸಿದ್ದರು: ಚಿರಾಗ್ ಪಾಸ್ವಾನ್ ಕಿಡಿನನ್ನ ಅಪ್ಪನನ್ನು ನಿತೀಶ್ ಕುಮಾರ್ ಅವಮಾನಿಸಿದ್ದರು: ಚಿರಾಗ್ ಪಾಸ್ವಾನ್ ಕಿಡಿ

Recommended Video

ಲಸಿಕೆ ಸಿಗತ್ತೋ ಇಲ್ವೋ ಗೊತ್ತಿಲ್ಲಾ ! ಆದ್ರೆ ಇದು ಮಾತ್ರ Ready ಇರ್ಬೇಕು | Oneindia Kannada

ಆದರೆ ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿಯಿಂದ ಅಂತರ ಕಾಪಾಡಿಕೊಳ್ಳಲು ಬಿಜೆಪಿ ನಿರಂತರವಾಗಿ ಪ್ರಯತ್ನಿಸುತ್ತಿದೆ. ಜನರಲ್ಲಿ ಗೊಂದಲ ಮೂಡಿಸುವ ಮೂಲಕ ಬಿಜೆಪಿಯ ಮತಗಳನ್ನು ತಮ್ಮತ್ತ ಸೆಳೆದುಕೊಳ್ಳಲು ಅವರು ಪ್ರಯತ್ನಿಸುತ್ತಿದ್ದಾರೆ. ಎಲ್‌ಜೆಪಿಗೂ ಬಿಜೆಪಿಗೂ ಯಾವುದೇ ನಂಟು ಇಲ್ಲ ಎಂದು ಬಿಜೆಪಿ ಮುಖಂಡರು ಹೇಳಿಕೆ ನೀಡುತ್ತಿದ್ದಾರೆ.

English summary
Bihar Assembly Election 2020: Union Minister Prakash Javadekar clarified that BJP has no link with LJP, Chirag Paswan is trying to create confusion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X