ಬಿಹಾರ: 30 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟಿಸಿದ ಬಿಜೆಪಿ
ಪಾಟ್ನಾ, ಅ. 11: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿರುಸಿನ ಪ್ರಚಾರ ಕೈಗೊಳ್ಳಲಿರುವ ಸ್ಟಾರ್ ಪ್ರಚಾರಕರನ್ನು ಬಿಜೆಪಿ ಇಂದು ಹೆಸರಿಸಿದೆ. ಪ್ರಧಾನಿ ಮೋದಿ ಸೇರಿದಂತೆ 30 ಮಂದಿ ಸ್ಟಾರ್ ಪ್ರಚಾರಕರಿದ್ದಾರೆ.
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಬಿಹಾರದಲ್ಲಿ ಪಕ್ಷದ ಉಸ್ತುವಾರಿಯಾಗಿ ನೇಮಿಸಲಾಗಿದೆ. ದೇವೇಂದ್ರ ಅವರು ಪ್ರಚಾರಕರಾಗಿ ಕೂಡಾ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಹಾರ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಜಾರ್ಖಂಡ್ ಮಾಜಿ ಸಿಎಂ ರಘುಬರ್ ದಾಸ್ ಅವರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.
ಬಿಹಾರದ ಎರಡನೇ ಹಂತದ ಚುನಾವಣೆಗಾಗಿ 46 ಅಭ್ಯರ್ಥಿಗಳುಳ್ಳ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. 2ನೇ ಹಂತಕ್ಕಾಗಿ ಇಂದು ಪ್ರಕಟವಾದ ಪಟ್ಟಿಯಲ್ಲಿ ಇಬ್ಬರು ಮಹಿಳಾ ಆಕಾಂಕ್ಷಿಗಳಿಗೆ ಟಿಕೆಟ್ ಸಿಕ್ಕಿದೆ. ರೇಣು ದೇವಿ ಅವರು ಬೆಟ್ಟಿಯಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಆಶಾ ಸಿನ್ಹಾ ಅವರು ದನಾಪುರ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಮಿಕ್ಕಂತೆ ಮಿತಿಲೇಶ್ ತಿವಾರಿ ಅವರು ಬೈಕುಂತ್ ಪುರ್ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆ ಮಾಡುತ್ತಿದ್ದಾರೆ.

243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್,28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್.03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್.07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್.10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.
BJP releases a list of 30 star campaigners for upcoming #BiharElections2020
— ANI (@ANI) October 11, 2020
PM Modi, Home Minister Amit Shah, Defence Minister Rajnath Singh, party president JP Nadda, Union Minister Smriti Irani, UP CM Yogi Adityanath, Devendra Fadnavis and other leaders included in the list. pic.twitter.com/iKfGicyFLt
2015ರಲ್ಲಿ ರಾಷ್ಟ್ರೀಯ ಜನತಾ ದಳ 80 ಸ್ಥಾನ, ಜನತಾ ದಳ ಯುನೈಟೆಡ್ 71, ಕಾಂಗ್ರೆಸ್ 27 ಗಳಿಸಿದ್ದವು. ಬಿಜೆಪಿ 53 ಸ್ಥಾನ, ಎಲ್ ಜೆಪಿ 2 ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ ಸೆಕ್ಯುಲರ್ 1, ಇತರೆ 10 ಸ್ಥಾನ ಗಳಿಸಿತ್ತು. ಬಿಜೆಪಿ ಶೇ 24ರಷ್ಟು ಮತಗಳಿಕೆ, ಅರ್ ಜೆ ಡಿ ಶೇ 18 ಹಾಗೂ ಜೆಡಿಯು ಶೇ 17ರಷ್ಟು, ಕಾಂಗ್ರೆಸ್ ಶೇ 7, ಎಲ್ ಜೆಪಿ ಶೇ 4.8ರಷ್ಟು ಮತ ಗಳಿಸಿದ್ದವು.












Click it and Unblock the Notifications