• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಹಾರ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

|

ಪಾಟ್ನಾ, ಅ. 7: ಬಿಹಾರ ವಿಧಾನಸಭಾ ಚುನಾವಣೆ 2020ಕ್ಕಾಗಿ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಮೊದಲ ಪಟ್ಟಿಯಲ್ಲಿ 27 ಅಭ್ಯರ್ಥಿಗಳನ್ನು ಹೆಸರಿಸಲಾಗಿದೆ.

ಕ್ರಿಮಿನಲ್ ಹಿನ್ನೆಲೆ ಇಲ್ಲದ ಅಭ್ಯರ್ಥಿಗಳನ್ನು ಮಾತ್ರ ಈ ಬಾರಿ ಚುನಾವಣಾ ಕಣದಲ್ಲಿ ಇಳಿಸಲಾಗುವುದು ಎಂದು ಘೋಷಿಸಿದ್ದ ಕಾಂಗ್ರೆಸ್, ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು, ಅತ್ಯಾಚಾರ ಪ್ರಕರಣ ಎದುರಿಸುತ್ತಿದ್ದ ಮೋಹನ್ ಶ್ರೀವಾಸ್ತವ ಅವರ ಬದಲಿಗೆ ಅಖೌರಿ ಓಂಕಾರ್ ನಾಥ್ ಅವರಿಗೆ ಗಯಾ ಪಟ್ಟಣದ ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಮಿಕ್ಕಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸದಾನಂದ ಸಿಂಗ್ ಅವರ ಪುತ್ರ ಶುಭಾನಂದ ಮುಖೇಶ್ ಅವರನ್ನು ಕಹಲ್ ಗಾಂವ್ ಕ್ಷೇತ್ರದಿಂದ ಕಣಕ್ಕಿಳಿಸಲಾಗುತ್ತಿದೆ.

ಅತ್ಯಾಚಾರಿಗಳಿಗೆ ಪಕ್ಷಗಳು ಟಿಕೆಟ್ ನೀಡಬಾರದು ಹಾಗೂ ಸ್ಪರ್ಧಿಸಲು ಬಿಡಬಾರದು ಎಂದು ಕಾಂಗ್ರೆಸ್ ಮುಖಂಡರಾದ ಸುಷ್ಮಿತಾ ದೇವ್ ಹೇಳಿದ್ದನ್ನು ಇಲ್ಲಿಸ್ಮರಿಸಬಹುದು. ಇಂಥ ಅಭ್ಯರ್ಥಿಗಳ ಆಯ್ಕೆ ವಿರುದ್ಧ ದನಿಯೆತ್ತಲು ವಿಟೋ ಶಕ್ತಿಯನ್ನು ನೀಡಬೇಕು ಎಂದಿದ್ದರು. ಅದರಂತೆ, ಪ್ರಕಾರ ಮೂವರು ಅಭ್ಯರ್ಥಿಗಳ ವಿರುದ್ಧ ಇಂಥ ಪ್ರಕರಣಗಳಿದ್ದು ಅವರ ಹೆಸರನ್ನು ಅಭ್ಯರ್ಥಿಗಳ ಅಂತಿಮ ಪಟ್ಟಿಯಿಂದ ಕೈಬಿಡಲು ಸೋನಿಯಾ ಗಾಂಧಿ ನೇತೃತ್ವದ ಸಮಿತಿ ನಿರ್ಧರಿಸಿದೆ.

ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ನಲ್ಲಿ ಆರ್ ಜೆಡಿ, ಕಾಂಗ್ರೆಸ್ ಅಲ್ಲದೆ ಎಡಪಕ್ಷಗಳಿವೆ, ಕ್ರಮವಾಗಿ 144, 68 ಹಾಗೂ 29 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ. ಕಳೆದ ಬಾರಿ ಕಾಂಗ್ರೆಸ್ 27 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಜೆಪಿ 27 ಹಾಗೂ ಜೆಡಿಯು 115 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿವೆ.

ಬಿಹಾರ ಚುನಾವಣೆ: ಅತ್ಯಾಚಾರ ಆರೋಪಿ ಶಾಸಕರ ಬದಲು ಅವರ ಪತ್ನಿಯರಿಗೆ ಆರ್‌ಜೆಡಿ ಟಿಕೆಟ್

243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.

English summary
The Congress party on Wednesday released a list of 21 candidates for the first phase of upcoming Bihar Assembly Elections. As part of the the Rashtriya Janata Dal (RJD)-led Mahagathbandhan, the Congress will contest on 68 of the 243 seats in the Bihar Assembly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X