ಬಿಹಾರ: ಮೊದಲ ಹಂತದಲ್ಲಿ 71 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ

ಪಾಟ್ನಾ, ಅಕ್ಟೋಬರ್.28: ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್.28ರ ಬುಧವಾರ ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ 2.14 ಕೋಟಿ ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಈ ಪೈಕಿ 1.01 ಕೋಟಿ ಮಹಿಳೆಯರಾಗಿದ್ದು, 599 ತೃತೀಯ ಲಿಂಗದವರು ಸೇರಿದ್ದಾರೆ ಎಂದು ಚುನಾವಣಾ ಆಯೋಗವು ತಿಳಿಸಿದೆ. 71 ವಿಧಾನಸಭಾ ಕ್ಷೇತ್ರಗಳಲ್ಲಿ 952 ಪುರುಷ ಮತ್ತು 114 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸುಮಾರು 2 ಕೋಟಿಗೂ ಅಧಿಕ ಮತದಾರರು ಒಟ್ಟು 1066 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.

ಗಯಾ ವಿಧಾನಸಭಾ ಕ್ಷೇತ್ರದಲ್ಲಿ ಅತಿಹೆಚ್ಚು ಎಂದರೆ 27 ಅಭ್ಯರ್ಥಿಗಳು ಸ್ಪರ್ಧಿಸಿದ್ದರೆ ಕಾಟೋರಿಯಾ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಎಂದರೆ ಐವರು ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ ಎಂಬುದು ಚುನಾವಣಾ ಆಯೋಗವು ನೀಡಿದ ಅಂಕಿ-ಅಂಶಗಳಲ್ಲಿ ಉಲ್ಲೇಖಿಸಲಾಗಿದೆ.

Bihar Assembly Election 2020: First Phase Voting For 71 Constituency

ಕೊರೊನಾವೈರಸ್ ನಿಯಂತ್ರಣ ಕ್ರಮ:

ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ನಡುವೆ ಸುರಕ್ಷಿತವಾಗಿ ಮತದಾನ ಪ್ರಕ್ರಿಯೆ ನಡೆಸುವುದಕ್ಕೆ ಚುನಾವಣಾ ಆಯೋಗವು ಮಾರ್ಗಸೂಚಿ ಹೊರಡಿಸಿದೆ. ಒಂದು ಮತಗಟ್ಟೆಯಲ್ಲಿ 1600 ರಿಂದ 1000 ಮತದಾರರಿಗೆ ಹಕ್ಕು ಚಲಾಯಿಸುವುದಕ್ಕಷ್ಟೇ ಅನುಮತಿ ನೀಡಲಾಗಿದೆ. 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಪೋಸ್ಟರ್ ಕಾರ್ಡ್ ಮೂಲಕ ಮತದಾನ ಮಾಡುವುದಕ್ಕೆ ಅನುಮತಿ ನೀಡಲಾಗಿದೆ. ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ ನ್ನು ಸ್ಯಾನಿಟೈಸ್ ಮಾಡುವುದು. ಕಡ್ಡಾಯವಾಗಿ ಮಾಸ್ಕ್ ಧರಿಸವುದು, ಥರ್ಮಲ್ ಸ್ಕ್ಯಾನಿಂಗ್ ಮತ್ತು ಸೋಪು ಮತ್ತು ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ. ಮತದಾನದ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದಕ್ಕೆ ಕಡ್ಡಾಯಗೊಳಿಸಲಾಗಿದೆ.

ಯಾವ ಪಕ್ಷದಿಂದ ಎಷ್ಟು ಅಭ್ಯರ್ಥಿಗಳು:

71 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಯು 35 ಅಭ್ಯರ್ಥಿಗಳನ್ನು ಹಾಗೂ ಮಿತ್ರಪಕ್ಷ ಬಿಜೆಪಿಯು 29 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಆರ್ ಜೆಡಿಯ 42 ಅಭ್ಯರ್ಥಿಗಳು ಕಣದಲ್ಲಿದ್ದರೆ ಕಾಂಗ್ರೆಸ್ 20 ಕಡೆಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಅದೃಷ್ಟ ಪರೀಕ್ಷೆಗೆ ಇಳಿಸಿದೆ. ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷವು ಜೆಡಿಯು ಅಭ್ಯರ್ಥಿಗಳು ಸ್ಪರ್ಧಿಸಿರುವ 35 ಕ್ಷೇತ್ರಗಳೂ ಸೇರಿದಂತೆ ಒಟ್ಟು 41 ಕಡೆಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+