• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾಂಗ್ರೆಸ್‌ಗೆ ಆದಾಯ ತೆರಿಗೆ ಇಲಾಖೆ ನೋಟಿಸ್

|

ಪಟ್ನಾ, ಅಕ್ಟೋಬರ್ 23: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ತನ್ನ ಅಭ್ಯರ್ಥಿಗಳಿಗೆ ವರ್ಗಾವಣೆ ಮಾಡಿದ ಹಣಕಾಸಿನ ವಿವರಗಳನ್ನು ನೀಡುವಂತೆ ಕಾಂಗ್ರೆಸ್‌ಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ.

ಚುನಾವಣಾ ಪ್ರಚಾರಕ್ಕಾಗಿ ಪೂರ್ನಿಯಾಕ್ಕೆ ಶುಕ್ರವಾರ ಬರಬೇಕಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಇಳಿಯಲು ನಿತೀಶ್ ಕುಮಾರ್ ಅವರ ಸರ್ಕಾರ ಅನುಮತಿ ನಿರಾಕರಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ.

ಸಿಎಂ ನಿತೀಶ್ "ಭ್ರಷ್ಟಾಚಾರದ ಭೀಷ್ಮ ಪಿತಾಮಹ" ಎಂದ ತೇಜಸ್ವಿ ಯಾದವ್

ಪಟ್ನಾದಲ್ಲಿರುವ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಭೇಟಿ ನೀಡಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ನೋಟಿಸ್ ನೀಡಿತು. ಕಾಂಗ್ರೆಸ್ ಕಚೇರಿಯ ಕಾಂಪೌಂಡ್ ಹೊರಭಾಗದಲ್ಲಿ ನಿಲ್ಲಿಸಿದ್ದ ವಾಹನವೊಂದರಲ್ಲಿ ಹಣ ಪತ್ತೆಯಾಗಿತ್ತು. ಕಚೇರಿಯ ಆವರಣದ ಹೊರಗೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿತ್ತು. ಆತನಿಂದ 8.5 ಲಕ್ಷ ರೂ. ವಶಪಡಿಸಿಕೊಳ್ಳಲಾಗಿತ್ತು.

ಕೊವಿಡ್-19 ಉಚಿತ ಲಸಿಕೆ ಬಿಹಾರಕ್ಕಷ್ಟೇ ಸೀಮಿತವೇ: ರಾಹುಲ್ ಗಾಂಧಿ

ಐಟಿ ಇಲಾಖೆಯು ನೋಟಿಸ್ ನೀಡಿರುವುದು ಚುನಾವಣೆಯಲ್ಲಿ ಒತ್ತಡ ಹೇರುವ ತಂತ್ರ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಪೌಂಡ್ ಹೊರಭಾಗದಲ್ಲಿ ಇದ್ದ ವಾಹನದಲ್ಲಿ ಹಣ ಪತ್ತೆಯಾಗಿದ್ದಕ್ಕೆ ನಮಗೆ ನೋಟಿಸ್ ನೀಡಲಾಗಿದೆ. ಕಾಂಪೌಂಡ್ ಒಳಗೆ ಹಣ ಸಿಕ್ಕಿಲ್ಲ. ನಾವು ಅವರಿಗೆ ಸಹಕಾರ ನೀಡಲಿದ್ದೇವೆ. ರಕ್ಸೌಲ್‌ನಲ್ಲಿ ಬಿಜೆಪಿ ಅಭ್ಯರ್ಥಿಯಿಂದ 22 ಕೆಜಿ ಚಿನ್ನ ಮತ್ತು 2.5 ಕೆಜಿ ಬೆಳ್ಳಿ ಪತ್ತೆಯಾಗಿತ್ತು. ಐಟಿಯವರು ಎಲ್ಲಿಗೆ ಏಕೆ ಹೋಗಿಲ್ಲ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

English summary
Bihar Assembly Election 2020: IT department issues notice to Congress seeking details of money transfered to candidates.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X