ಬಿಹಾರ 2ನೇ ಹಂತದಲ್ಲಿ 94 ಕ್ಷೇತ್ರಗಳಿಗೆ ಮತದಾನ: ಇಲ್ಲಿದೆ ವಿವರ

ಪಾಟ್ನಾ, ನವೆಂಬರ್.02: ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಮತದಾನ ಈಗಾಗಲೇ ಪೂರ್ಣಗೊಂಡಿದೆ. ಮಂಗಳವಾರ ಎರಡನೇ ಹಂತದಲ್ಲಿ 17 ಜಿಲ್ಲೆಗಳ 94 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. 2.85 ಕೋಟಿ ಜನ ಮತದಾರರು ಈ ಬಾರಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಬಿಹಾರ ಎರಡನೇ ಹಂತದ ಚುನಾವಣೆಯ ಕಣದಲ್ಲಿ 1463 ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆಯುತ್ತಿದೆ. ಈ ಪೈಕಿ 1316 ಪುರುಷ ಅಭ್ಯರ್ಥಿಗಳಾಗಿದ್ದರೆ, 146 ಮಹಿಳಾ ಅಭ್ಯರ್ಥಿಗಳಾಗಿದ್ದು, ಒಬ್ಬ ತೃತೀಯ ಲಿಂಗಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

2ನೇ ಹಂತದಲ್ಲಿ ಒಟ್ಟು 2,85,50,285 ಮಂದಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದು, 1,50,33,034 ಪುರುಷರು ಮತ್ತು 1,35,16,271 ಮಹಿಳಾ ಮತದಾರರು ಹಾಗೂ 980 ತೃತೀಯ ಲಿಂಗದ ಮತದಾರರು ಮತದಾನ ಮಾಡಲಿದ್ದಾರೆ. ಮೂರನೇ ಹಂತದಲ್ಲಿ 15 ಜಿಲ್ಲೆಗಳ 78 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ನವೆಂಬರ್.10ರಂದು ಎಲ್ಲ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶವು ಹೊರ ಬೀಳಲಿದೆ.

Bihar Assembly Election 2020: Second Phase Voting For 94 Constituency

ಕೊರೊನಾವೈರಸ್ ನಿಯಂತ್ರಣ ಕ್ರಮ:

ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ನಡುವೆ ಸುರಕ್ಷಿತವಾಗಿ ಮತದಾನ ಪ್ರಕ್ರಿಯೆ ನಡೆಸುವುದಕ್ಕೆ ಚುನಾವಣಾ ಆಯೋಗವು ಮಾರ್ಗಸೂಚಿ ಹೊರಡಿಸಿದೆ. ಒಂದು ಮತಗಟ್ಟೆಯಲ್ಲಿ 1600 ರಿಂದ 1000 ಮತದಾರರಿಗೆ ಹಕ್ಕು ಚಲಾಯಿಸುವುದಕ್ಕಷ್ಟೇ ಅನುಮತಿ ನೀಡಲಾಗಿದೆ. 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಪೋಸ್ಟರ್ ಕಾರ್ಡ್ ಮೂಲಕ ಮತದಾನ ಮಾಡುವುದಕ್ಕೆ ಅನುಮತಿ ನೀಡಲಾಗಿದೆ.

ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ ನ್ನು ಸ್ಯಾನಿಟೈಸ್ ಮಾಡುವುದು. ಕಡ್ಡಾಯವಾಗಿ ಮಾಸ್ಕ್ ಧರಿಸವುದು, ಥರ್ಮಲ್ ಸ್ಕ್ಯಾನಿಂಗ್ ಮತ್ತು ಸೋಪು ಮತ್ತು ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ. ಮತದಾನದ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದಕ್ಕೆ ಕಡ್ಡಾಯಗೊಳಿಸಲಾಗಿದೆ.

ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆಯೇ ಮೊದಲ ಹಂತದಲ್ಲಿ ದಾಖಲೆ ಮಟ್ಟದಲ್ಲಿ ಮತದಾನ ನಡೆದಿತ್ತು. ಅಕ್ಟೋಬರ್.28ರಂದು ನಡೆದ ಮತದಾನ ಪ್ರಕ್ರಿಯೆಯಲ್ಲಿ ಶೇ.55.69ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+