ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈತ್ರಿಕೂಟಗಳಿಗೆ ಬೇಡವಾದ LJD, ಬಿಹಾರ ರಣಕಣದಲ್ಲಿ ಏಕಾಂಗಿ

|
Google Oneindia Kannada News

ಪಾಟ್ನಾ, ಅ. 13: ಒಂದುಕಾಲದಲ್ಲಿ ಬಿಹಾರ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಮಹತ್ವ ಪಡೆದುಕೊಂಡಿದ್ದ ಮಾಜಿ ಕೇಂದ್ರ ಸಚಿವ ಶರದ್ ಯಾದವ್ ಇಂದು ಏಕಾಂಗಿಯಾಗಿದ್ದಾರೆ. ಬಿಹಾರ ಚುನಾವಣೆಯಲ್ಲಿ ಮಹಾಘಟಬಂಧನ್ ಮೈತ್ರಿಕೂಟದಿಂದ ದೂರ ಉಳಿದಿರುವ ಶರದ್ ಅವರ ಲೋಕತಾಂತ್ರಿಕ ಜನತಾ ದಳ ಪ್ರತ್ಯೇಕವಾಗಿ ಕಣಕ್ಕಿಳಿಯುತ್ತಿದೆ.

ಲಾಲೂ ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ(ಆರ್ ಜೆಡಿ) ಜೊತೆ ಸದಾ ಕಾಲ ಮೈತ್ರಿ ಉಳಿಸಿಕೊಂಡಿದ್ದ ಎಲ್ ಜೆಡಿ ಈಗ ಏಕಾಂಗಿಯಾಗಿ ರಣಕ್ಕಿಳಿಯುವುದು ಖಚಿತವಾಗಿದೆ. ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಪೈಕಿ ಲೋಕತಾಂತ್ರಿಕ ಜನತಾ ದಳ ಪಕ್ಷವು 51 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.

ಬಿಹಾರ ಚುನಾವಣೆ: ಬಿಜೆಪಿ ರೆಬೆಲ್‌ಗಳ ಆಶ್ರಯತಾಣವಾದ ಎಲ್‌ಜೆಪಿಬಿಹಾರ ಚುನಾವಣೆ: ಬಿಜೆಪಿ ರೆಬೆಲ್‌ಗಳ ಆಶ್ರಯತಾಣವಾದ ಎಲ್‌ಜೆಪಿ

ಮೊದಲ ಹಂತದ ಕುರ್ತಾ ಕ್ಷೇತ್ರ ಹಾಗೂ ಎರಡು ಹಾಗೂ ಮೂರನೇ ಹಂತದ 50 ಕ್ಷೇತ್ರಗಳಲ್ಲಿ ಎಲ್ ಜೆಡಿ ಸ್ಪರ್ಧಿಸಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಶ್ರೀವಾಸ್ತವ ಹೇಳಿದ್ದಾರೆ.

ಸಮಾಜವಾದಿ ಚಿಂತನೆಯ ಮುಖಂಡ

ಸಮಾಜವಾದಿ ಚಿಂತನೆಯ ಮುಖಂಡ

ಮಧ್ಯಪ್ರದೇಶ ಮೂಲದ ಸಮಾಜವಾದಿ ಚಿಂತನೆಯ ಮುಖಂಡ ಶರದ್ ಯಾದವ್ ಅವರು ಬಿಹಾರದಲ್ಲಿ ಲಾಲೂ ಪ್ರಸಾದ್ ಯಾದವ್ ಅಥವಾ ನಿತೀಶ್ ಕುಮಾರ್ ಅವರ ಬೆಂಬಲಕ್ಕೆ ನಿಂತು ಚುನಾವಣೆಗೆ ಸಹಕಾರ ನೀಡುತ್ತಾ ಬಂದಿದ್ದರು. ಮಂಡಲ್ ಆಯೋಗ ಹೋರಾಟದ ಕಾಲದಿಂದ ಹಿಂದುಳಿದ ವರ್ಗದವರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಕಲ್ಪಿಸುವ ತನಕ ಎಲ್ಲವನ್ನು ಶರದ್ ಯಾದವ್ ಕಂಡಿದ್ದಾರೆ.

2019ರಲ್ಲಿ ಬಿಹಾರದ ಮಾಧೇಪುರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು. 2014ರಲ್ಲಿ ಆರ್ ಜೆಡಿಯ ಪಪ್ಪು ಯಾದವ್ ವಿರುದ್ಧ ರಾಜೇಶ್ ರಂಜನ್(ಜೆಡಿಯು) ಬೆಂಬಲಿಸಿ ಹಿನ್ನಡೆ ಅನುಭವಿಸಿದ್ದರು.

ಬಿಹಾರದಲ್ಲಿ ಬದಲಾವಣೆ ತಂದ ಐಎಎಸ್ ಅಧಿಕಾರಿ ಪತ್ನಿ ಚುನಾವಣಾ ಕಣಕ್ಕೆಬಿಹಾರದಲ್ಲಿ ಬದಲಾವಣೆ ತಂದ ಐಎಎಸ್ ಅಧಿಕಾರಿ ಪತ್ನಿ ಚುನಾವಣಾ ಕಣಕ್ಕೆ

ಮಹಾಘಟಬಂಧನ್ ನಿಂದ ದೂರವಾಗಿರುವ ಎಲ್ ಜೆಡಿ

ಮಹಾಘಟಬಂಧನ್ ನಿಂದ ದೂರವಾಗಿರುವ ಎಲ್ ಜೆಡಿ

ಈ ಬಾರಿ ಆರ್ ಜೆಡಿಯ ತೇಜಸ್ವಿ ಯಾದವ್ ಆಗಲಿ, ಕಾಂಗ್ರೆಸ್ ಮುಖಂಡರಾಗಲಿ ಎಲ್ ಜೆಡಿ ಜೊತೆ ಮೈತ್ರಿ ಬಗ್ಗೆ ಮಾತನಾಡಿಲ್ಲ. ಬಿಜೆಪಿ ಕೋಮುವಾದಿ ಪಕ್ಷ ಎಂದು ಜರೆದಿರುವ ಶರದ್ ಯಾದವ್ ಅವರು ಎನ್ಡಿಎ ಮೈತ್ರಿಕೂಟ ಸೇರುವುದಿಲ್ಲ, ಈ ಬಗ್ಗೆ ಕೆಲ ತಿಂಗಳು ಗಾಳಿಸುದ್ದಿ ಹಬ್ಬಿಸಲಾಗಿತ್ತು. ಶರದ್ ಯಾದವ್ ಅವರಿಗೆ ಆರೋಗ್ಯ ಸರಿ ಇರದ ಕಾರಣ ಬಿಹಾರದಲ್ಲಿ ಚುನಾವಣೆ ಸಂಬಂಧಿಸಿದ ಕಾರ್ಯಗಳು ವಿಳಂಬವಾಗಿವೆ ಎಂದು ಶ್ರೀವಾಸ್ತವ ವಿವರಿಸಿದರು.

ಕೋಮುವಾದಿ ಬಿಜೆಪಿ ಹಾಗೂ ಮಿತ್ರಪಕ್ಷಗಳನ್ನು ಸೋಲಿಸುವತ್ತ ಗಮನ ಹರಿಸಿದೆ ಎಲ್ಲಾ ಪಕ್ಷಗಳು ಮುಖ್ಯಮಂತ್ರಿ ಸ್ಥಾನದ ರೇಸಿನಲ್ಲಿ ತೊಡಗಿಕೊಂಡಿವೆ ಎಂದು ಶ್ರೀವಾಸ್ತವ ಬೇಸರ ವ್ಯಕ್ತಪಡಿಸಿದರು.

ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ

ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ

243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.

ನಿತೀಶ್‌ಗೆ ಸವಾಲು ಹಾಕಿ, ಬಿಹಾರಕ್ಕೆ ಬಂದಿಳಿದ ಯುವತಿ ಪುಷ್ಪಂನಿತೀಶ್‌ಗೆ ಸವಾಲು ಹಾಕಿ, ಬಿಹಾರಕ್ಕೆ ಬಂದಿಳಿದ ಯುವತಿ ಪುಷ್ಪಂ

2015ರಲ್ಲಿ ಬಂದಿದ್ದ ವಿಧಾನಸಭೆ ಫಲಿತಾಂಶ

2015ರಲ್ಲಿ ಬಂದಿದ್ದ ವಿಧಾನಸಭೆ ಫಲಿತಾಂಶ

2015ರಲ್ಲಿ ರಾಷ್ಟ್ರೀಯ ಜನತಾ ದಳ 80 ಸ್ಥಾನ, ಜನತಾ ದಳ ಯುನೈಟೆಡ್ 71, ಕಾಂಗ್ರೆಸ್ 27 ಗಳಿಸಿದ್ದವು. ಬಿಜೆಪಿ 53 ಸ್ಥಾನ, ಎಲ್ ಜೆಪಿ 2 ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ ಸೆಕ್ಯುಲರ್ 1, ಇತರೆ 10 ಸ್ಥಾನ ಗಳಿಸಿದ್ದವು. ಬಿಜೆಪಿ ಶೇ 24ರಷ್ಟು ಮತಗಳಿಕೆ, ಅರ್ ಜೆ ಡಿ ಶೇ 18 ಹಾಗೂ ಜೆಡಿಯು ಶೇ 17ರಷ್ಟು, ಕಾಂಗ್ರೆಸ್ ಶೇ 7, ಎಲ್ ಜೆಪಿ ಶೇ 4.8ರಷ್ಟು ಮತ ಗಳಿಸಿದ್ದವು.

English summary
Bihar assembly Election 2020: After ditched by RJD as well as the Congress to make him part of Grand Alliance, former union minister Sharad Yadav-led Loktantrik Janata Dal (LJD) Monday announced that it will contest 51 out of total 243 assembly seats in Bihar on its own.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X