• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಹಾರದಲ್ಲಿ ಶಿವಸೇನಾ ಪ್ರಚಾರಕ್ಕೆ 20 ಸ್ಟಾರ್ ಪ್ರಚಾರಕರು

|

ಪಾಟ್ನ, ಅ. 10: ಮಹಾರಾಷ್ಟ್ರದ ಆಡಳಿತಾರೂಢ ಪಕ್ಷ ಶಿವಸೇನಾ ಈ ಬಾರಿ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗಿಳಿದಿದೆ. ಪಕ್ಷದ ಪರ ಪ್ರಚಾರಕ್ಕಾಗಿ ಖುದ್ದು ಸಿಎಂ ಉದ್ಧವ್ ಠಾಕ್ರೆ ಕಣಕ್ಕಿಳಿಯುತ್ತಿದ್ದಾರೆ.

ಬಿಹಾರದಲ್ಲಿ ಪ್ರಚಾರಕ್ಕಾಗಿ ಒಟ್ಟು 20 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಶಿವಸೇನಾ ತಯಾರಿಸಿದೆ. ಉದ್ಧವ್ ಠಾಕ್ರೆ, ಅವರ ಪುತ್ರ ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ, ರಾಜ್ಯಸಭಾ ಸಂಸದ ಸಂಜಯ್ ರಾವತ್ ಮುಂತಾದವರು ಸ್ಟಾರ್ ಪ್ರಚಾರಕರಾಗಿದ್ದಾರೆ.

ಬಿಹಾರ ಚುನಾವಣೆ: ಬಿಜೆಪಿ ರೆಬೆಲ್‌ಗಳ ಆಶ್ರಯತಾಣವಾದ ಎಲ್‌ಜೆಪಿ

ಬಿಹಾರದಲ್ಲಿ ಪ್ರಚಾರ ಕಾರ್ಯಕ್ಕೆ ಬೇಕಾದ ಸಿದ್ಧತೆಯನ್ನು ಪರಿಶೀಲಿಸಲು ಮೊದಲಿಗೆ ಸಂಜಯ್ ರಾವತ್ ಬಿಹಾರಕ್ಕೆ ಆಗಮಿಸಲಿದ್ದಾರೆ. ನಂತರ ಉದ್ಧವ್ ಠಾಕ್ರೆ ಹಾಗೂ ಆದಿತ್ಯ ಠಾಕ್ರೆ ಬರಲಿದ್ದಾರೆ. ಸುಮಾರು 50 ಮಂದಿ ಅಭ್ಯರ್ಥಿಗಳನ್ನು ಬಿಹಾರದಲ್ಲಿ ಕಣಕ್ಕಿಳಿಸುವ ಸಾಧ್ಯತೆಯಿದೆ. ಪಕ್ಷದ ಕಾರ್ಯಕರ್ತರು ಈಗಾಗಲೇ ಮನೆ ಮನೆ ಪ್ರಚಾರ ಆರಂಭಿಸಿದ್ದಾರೆ.

243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಅಕ್ಟೋಬರ್ 28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ.

ಎನ್‌ಡಿಎ, ಮಹಾಮೈತ್ರಿಕೂಟಕ್ಕೆ ಮೊದಲ ಹಂತದ ಪರೀಕ್ಷೆ

ನವೆಂಬರ್ 07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.

2015ರಲ್ಲಿ ರಾಷ್ಟ್ರೀಯ ಜನತಾ ದಳ 80 ಸ್ಥಾನ, ಜನತಾ ದಳ ಯುನೈಟೆಡ್ 71, ಕಾಂಗ್ರೆಸ್ 27 ಗಳಿಸಿದ್ದವು. ಬಿಜೆಪಿ 53 ಸ್ಥಾನ, ಎಲ್ ಜೆಪಿ 2 ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ ಸೆಕ್ಯುಲರ್ 1, ಇತರೆ 10 ಸ್ಥಾನ. ಬಿಜೆಪಿ ಶೇ 24ರಷ್ಟು ಮತಗಳಿಕೆ, ಅರ್ ಜೆ ಡಿ ಶೇ 18 ಹಾಗೂ ಜೆಡಿಯು ಶೇ 17ರಷ್ಟು, ಕಾಂಗ್ರೆಸ್ ಶೇ 7, ಎಲ್ ಜೆಪಿ ಶೇ 4.8ರಷ್ಟು ಮತ ಗಳಿಸಿದ್ದವು.

English summary
Bihar assembly election 2020:Shiv Sena names 20 star-campaigners list include Uddhav Thackeray, Aditya, Sanjay Raut among Shiv Sena’s 20 star-campaigners
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X