ಬಿಹಾರ ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ ಮತದಾನ: ಇಲ್ಲಿದೆ ವಿವರ

ಪಾಟ್ನಾ, ನವೆಂಬರ್.06: ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರನೇ ಹಾಗೂ ಅಂತಿಮ ಹಂತದಲ್ಲಿ 16 ಜಿಲ್ಲೆಗಳ 78 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಈ ಬಾರಿ 2.35 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಮೂರನೇ ಹಂತದ ಚುನಾವಣೆಯ ಕಣದಲ್ಲಿ 382 ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ 1204 ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆಯುತ್ತಿದೆ. ಈ ಪೈಕಿ 1094 ಪುರುಷ ಅಭ್ಯರ್ಥಿಗಳಾಗಿದ್ದರೆ, 110 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. 3ನೇ ಹಂತದಲ್ಲಿ ಒಟ್ಟು 2,35 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದು, ಈ ಪೈಕಿ 1.23 ಕೋಟಿ ಪುರುಷ ಹಾಗೂ 1.12ರಷ್ಟು ಮಹಿಳಾ ಮತದಾರರಿದ್ದಾರೆ.

ಬಿಹಾರದಲ್ಲಿ ಅಂತಿಮ ಹಂತದ ಚುನಾವಣಾ ಕಣದಲ್ಲಿ ರಾಷ್ಟ್ರೀಯ ಜನತಾ ದಳದ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದೆ. 78 ಕ್ಷೇತ್ರಗಳ ಪೈಕಿ ಆರ್ ಜೆಡಿ 46 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೆ, 42 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಲೋಕಜನಶಕ್ತಿ ಪಕ್ಷವು 2ನೇ ಸ್ಥಾನದಲ್ಲಿದೆ. ಜೆಡಿಯು 37, ಬಿಜೆಪಿ 35, ಎನ್ ಸಿಪಿ 31, ಕಾಂಗ್ರೆಸ್ 25, ರಾಷ್ಟ್ರೀಯ ಲೋಕ ಸಮತಾ ಪಕ್ಷ 23, ಬಹುಜನ ಸಮಾಜವಾದಿ ಪಕ್ಷ 19 ಹಾಗೂ ಸಿಪಿಐ ಪಕ್ಷದ ಇಬ್ಬರು ಅಭ್ಯರ್ಥಿಗಳು ಕಣದಲ್ಲಿ ಸ್ಪರ್ಧಿಸಿದ್ದಾರೆ.

Bihar Assembly Election 2020: Third Phase Voting For 78 Constituency

3ನೇ ಹಂತದಲ್ಲಿ ವಿಶೇಷ ಕ್ಷೇತ್ರಗಳು:

ಗೈಘಟ್ ವಿಧಾನಸಭಾ ಕ್ಷೇತ್ರವೊಂದರಲ್ಲೇ 31 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದು ದಾಖಲೆಯಾಗಿದೆ. ಅತಿಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸಿರುವ ಕ್ಷೇತ್ರ ಎಂದು ಗುರುತಿಸಿಕೊಂಡಿದೆ. ಇನ್ನು, ಢಾಕಾ, ತ್ರಿವೇಣಿಗಂಜ್, ಜೋಕಿಹತ್ ಮತ್ತು ಬಹದ್ದೂರ್ ಗಂಜ್ ನಲ್ಲಿ ಕೇವಲ 9 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಅತಿಕಡಿಮೆ ಅಭ್ಯರ್ಥಿಗಳು ಸ್ಪರ್ಧಿಸಿರುವ ಕ್ಷೇತ್ರಗಳು ಎಂದು ಗುರುತಿಸಲಾಗಿದೆ.

ಕೊವಿಡ್-19 ನಿಯಂತ್ರಣ ಕ್ರಮ:

ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ನಡುವೆ ಸುರಕ್ಷಿತವಾಗಿ ಮತದಾನ ಪ್ರಕ್ರಿಯೆ ನಡೆಸುವುದಕ್ಕೆ ಚುನಾವಣಾ ಆಯೋಗವು ಮಾರ್ಗಸೂಚಿ ಹೊರಡಿಸಿದೆ. ಒಂದು ಮತಗಟ್ಟೆಯಲ್ಲಿ 1600 ರಿಂದ 1000 ಮತದಾರರಿಗೆ ಹಕ್ಕು ಚಲಾಯಿಸುವುದಕ್ಕಷ್ಟೇ ಅನುಮತಿ ನೀಡಲಾಗಿದೆ. 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಪೋಸ್ಟರ್ ಕಾರ್ಡ್ ಮೂಲಕ ಮತದಾನ ಮಾಡುವುದಕ್ಕೆ ಅನುಮತಿ ನೀಡಲಾಗಿದೆ. ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ ನ್ನು ಸ್ಯಾನಿಟೈಸ್ ಮಾಡುವುದು. ಕಡ್ಡಾಯವಾಗಿ ಮಾಸ್ಕ್ ಧರಿಸವುದು, ಥರ್ಮಲ್ ಸ್ಕ್ಯಾನಿಂಗ್ ಮತ್ತು ಸೋಪು ಮತ್ತು ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ. ಮತದಾನದ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದಕ್ಕೆ ಕಡ್ಡಾಯಗೊಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+