• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಹಾರದ ಬೋಧಗಯಾದಲ್ಲಿ ಬಿಜೆಪಿ ಮೊದಲ ಚುನಾವಣಾ ಪ್ರಚಾರ

|

ಪಾಟ್ನಾ, ಅಕ್ಟೋಬರ್.10: ಬಿಹಾರ ವಿಧಾನಸಭಾ ಚುನಾವಣಾ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಮೊದಲ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಭಾನುವಾರ ಬೋಧಗಯಾದ ಗಾಂಧಿ ಮೈದಾನದಲ್ಲಿ ಮಧ್ಯಾಹ್ನ 2 ಗಂಟೆಗೆ ಸಾರ್ವಜನಿಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕೊರೊನಾವೈರಸ್ ಹರಡುವಿಕೆ ಭೀತಿ ನಡುವೆ ಬೃಹತ್ ಸಮಾರಂಭದ ನಿರ್ವಹಣೆ ಹೊತ್ತಿರುವುದು ಹೆಮ್ಮೆ ಎನ್ನಿಸುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ತರುಣ್ ಚುಂಗ್ ಎಎನ್ಐಗೆ ತಿಳಿಸಿದ್ದಾರೆ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ. ದೇಶದ ಅತಿದೊಡ್ಡ ಪಕ್ಷದ ಮುಖ್ಯಸ್ಥರನ್ನು ನಾವು ನೋಡಿದ್ದೇವೆ. ಸಾಂಕ್ರಾಮಿಕ ಪಿಡುಗಿನ ನಡುವೆ ಸಾರ್ವಜನಿಕರ ಸಂಪರ್ಕಿಸುವ ಉದ್ದೇಶದಿಂದ ನಡೆಸುತ್ತಿರುವ ಬೃಹತ್ ಸಮಾರಂಭದ ಬಗ್ಗೆ ನಮಗೆ ಹೆಮ್ಮೆಯಾಗುತ್ತದೆ" ಎಂದು ಅವರು ತಿಳಿಸಿದ್ದಾರೆ.

ಟಿಕೆಟ್ ರೇಸ್: ಮಾಜಿ ಕಾನ್ಸ್ ಟೇಬಲ್ ಮುಂದೆ ಸೋತ ಮಾಜಿ ಡಿಜಿಪಿ

ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ ಕಾರ್ಯಕರ್ತರನ್ನು ಹುರಿದುಂಬಿಸಲು ಮತ್ತು ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಹಿನ್ನೆಲೆ ಆರೋಗ್ಯದ ಮೇಲೆ ಹೆಚ್ಚು ನಿಗಾ ವಹಿಸಿ ಪ್ರಚಾರ ಕಾರ್ಯಗಳನ್ನು ನಡೆಸುವುದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಕರೆ ಕೊಡಲಿದ್ದಾರೆ ಎಂದು ತಿಳಿದು ಬಂದಿದೆ.

ಸೀಟ್ ವ್ಯವಸ್ಥೆಯಲ್ಲಿ ಸಾಮಾಜಿಕ ಅಂತರ

ಸೀಟ್ ವ್ಯವಸ್ಥೆಯಲ್ಲಿ ಸಾಮಾಜಿಕ ಅಂತರ

ಭಾನುವಾರ ನಡೆಯಲಿರುವ ಬೃಹತ್ ಸಮಾವೇಳದಲ್ಲಿ ಸೀಟ್ ವ್ಯವಸ್ಥೆಯನ್ನು ಸಾಮಾಜಿಕ ಅಂತರಕ್ಕೆ ಅನುಗುಣವಾಗಿ ಇರಿಸಲಾಗಿದೆ ಎಂದು ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಸಂಜಯ್ ಜೈಸ್ವಾಲ್ ತಿಳಿಸಿದ್ದಾರೆ. ಲಕ್ಷಾಂತರ ಜನರು ರ್ಯಾಲಿಯಲ್ಲಿ ಭಾಗವಹಿಸುವವರಿದ್ದರು. ಆದರೆ ನಾವು ಸಾವಿರದ ಸಂಖ್ಯೆಯಲ್ಲಿ ಮಾತ್ರ ಜನರಿಗೆ ಭಾಗವಹಿಸುವುದಕ್ಕೆ ಅವಕಾಶ ನೀಡಿದ್ದೇವೆ. ಇನ್ನೊಂದೆಡೆ ಸಮಾರಂಭವನ್ನು ಕೋಟ್ಯಂತರ ಜನರು ವೀಕ್ಷಿಸುವುದಕ್ಕೆ ಅನುಕೂಲವಾಗುವಂತೆ ಎಲ್ಇಟಿ ಸ್ಕ್ರೀನ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

"ಬಿಹಾರ ಮೊದಲ ಹಂತದ ಚುನಾವಣೆಯಲ್ಲಿ ಗೆಲುವು ನಮ್ಮದೇ"

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಭರ್ಜರಿ ಗೆಲುವು ಸಾಧಿಸಲಿದೆ. ಮೊದಲ ಹಂತದ ಚುನಾವಣೆಯ ಎಲ್ಲ ಸ್ಥಾನಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಜಯ್ ಜೈಸ್ವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೊರೊನಾವೈರಸ್ ನಿಯಂತ್ರಣಕ್ಕೆ ಮಾರ್ಗಸೂಚಿಗಳು

ಕೊರೊನಾವೈರಸ್ ನಿಯಂತ್ರಣಕ್ಕೆ ಮಾರ್ಗಸೂಚಿಗಳು

ಕೇಂದ್ರ ಗೃಹ ಸಚಿವಾಲಯದ ನಿಯಮದ ಪ್ರಕಾರ, ರಾಜಕೀಯ ಸಭೆ, ಸಮಾರಂಭಗಳಲ್ಲಿ 100 ಜನರು ಭಾಗವಹಿಸುವುದಕ್ಕೆ ಅನುಮತಿ ನೀಡಲಾಗಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಒಟ್ಟು ಸ್ಥಾನಗಳಲ ಶೇ.50ರಷ್ಟು ಜನ ಭಾಗವಹಿಸುವುದಕ್ಕಷ್ಟೇ ಅವಕಾಶ ಕಲ್ಪಿಸಿ ಕೊಡಲಾಗಿದ್ದು, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಕೊವಿಡ್-19 ನಿಯಂತ್ರಣ ಕ್ರಮಗಳನ್ನು ಅನುಸರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಬಿಹಾರದಲ್ಲಿ 3 ಹಂತಗಳಲ್ಲಿ ವಿಧಾನಸಭೆಗೆ ಚುನಾವಣೆ

ಬಿಹಾರದಲ್ಲಿ 3 ಹಂತಗಳಲ್ಲಿ ವಿಧಾನಸಭೆಗೆ ಚುನಾವಣೆ

ಕಳೆದ ಸಪ್ಟೆಂಬರ್.25ರಂದು ಕೇಂದ್ರ ಚುನಾವಣಾ ಆಯೋಗವು ಬಿಹಾರದಲ್ಲಿ ಮೂರು ಹಂತಗಳಲ್ಲಿ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಿಸಿತು. ಅಕ್ಟೋಬರ್.28 ಮೊದಲ ಹಂತದ ಚುನಾವಣೆ, ನವೆಂಬರ್.03 ಎರಡನೇ ಹಂತದ ಚುನಾವಣೆ ಮತ್ತು ನವೆಂಬರ್.07ರಂದು ಮೂರನೇ ಹಂತದ ಚುನಾವಣೆ ನಡೆಯಲಿದೆ. ಖಾಲಿ ಆಗಿರುವ ವಾಲ್ಮೀಕಿ ನಗರ ಲೋಕಸಭಾ ಕ್ಷೇತ್ರಕ್ಕೂ ನವೆಂಬರ್.07ರಂದೇ ಮತದಾನ ನಡೆಯಲಿದೆ.

English summary
Bihar Assembly Election: BJP President J P Nadda To Address First Rally In Bodhgaya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X