ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ಟೋಬರ್ 28 ರಿಂದ ನವೆಂಬರ್ 7ರ ತನಕ ಎಕ್ಸಿಟ್ ಪೋಲ್ ನಿರ್ಬಂಧ

|
Google Oneindia Kannada News

ಪಾಟ್ನಾ, ಅ. 14: ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸುವ ಭರಾಟೆ ಮುಂದುವರೆದಿದೆ. ಈ ನಡುವೆ ಅಕ್ಟೋಬರ್ 3ರಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದ್ದ ಅಧಿಸೂಚನೆಯನ್ನು ಮತ್ತೊಮ್ಮೆ ಮುಂದಿಟ್ಟಿದೆ. ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಎಕ್ಸಿಟ್ ಪೋಲ್ ಪ್ರಸಾರಕ್ಕೆ ಸಿದ್ಧವಾಗಿದ್ದ ಮಾಧ್ಯಮಗಳಿಗೆ ಬ್ರೇಕ್ ಹಾಕಲಾಗಿದೆ.

ಮೈತ್ರಿಕೂಟಗಳಿಗೆ ಬೇಡವಾದ LJD, ಬಿಹಾರ ರಣಕಣದಲ್ಲಿ ಏಕಾಂಗಿಮೈತ್ರಿಕೂಟಗಳಿಗೆ ಬೇಡವಾದ LJD, ಬಿಹಾರ ರಣಕಣದಲ್ಲಿ ಏಕಾಂಗಿ

ಅಕ್ಟೋಬರ್ 28 ರ ಬುಧವಾರ ಸಂಜೆ 6.30 ರಿಂದ ನವೆಂಬರ್ 7ರ ತನಕ ಎಲೆಕ್ಟ್ರಾನಿಕ್ ಮಾಧ್ಯಮಗಳು ಎಕ್ಸಿಟ್ ಪೋಲ್ ಪ್ರಸಾರ ಮಾಡುವಂತಿಲ್ಲ ಎಂದು ನಿರ್ಬಂಧ ವಿಧಿಸಲಾಗಿದೆ. ಇದೇ ನಿಯಮ ಪ್ರಿಂಟ್ ಹಾಗೂ ವೆಬ್ ಮೀಡಿಯಾಗಳಿಗೂ ಅನ್ವಯವಾಗಲಿದ್ದು, ಯಾವ ರೀತಿ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಸಾರ ಮಾಡುವಂತಿಲ್ಲ. ಇದು ಬಿಹಾರದ ವಿಧಾನಸಭೆ ಚುನಾವಣೆ, ಲೋಕಸಭೆ ಉಪ ಚುನಾವಣೆ ಎರಡಕ್ಕೂ ಅನ್ವಯವಾಗಲಿದೆ ಎಂದು ಆಯೋಗ ತಿಳಿಸಿದೆ.

ಬಿಹಾರ ಚುನಾವಣೆ: ಬಿಜೆಪಿ ರೆಬೆಲ್‌ಗಳ ಆಶ್ರಯತಾಣವಾದ ಎಲ್‌ಜೆಪಿಬಿಹಾರ ಚುನಾವಣೆ: ಬಿಜೆಪಿ ರೆಬೆಲ್‌ಗಳ ಆಶ್ರಯತಾಣವಾದ ಎಲ್‌ಜೆಪಿ

Bihar Assembly Elections 2020: Ban on Exit Polls From October 28 to November 7

Recommended Video

Sriramulu ಎರಡು ವರುಷ ಇಂದ ಕೇಳ್ತಿದಿನಿ | Oneindia Kannada

243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.

English summary
There will be a ban on conducting and telecasting exit polls on the Bihar assembly elections from 7 am on October 28 till 6.30 pm on November 7, the Election Commission said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X