ಬಿಹಾರ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಪಾಟ್ನಾ, ಅ. 6: ಭಾರತೀಯ ಜನತಾ ಪಕ್ಷ ಮತ್ತು ಜೆಡಿಯು 50:50 ಅನುಪಾತದಂತೆ ಸೀಟು ಹಂಚಿಕೆ ಮಾಡಿಕೊಂಡು ವಿಧಾನಸಭೆ ಚುನಾವಣೆ ಕಣಕ್ಕಿಳಿಯಲು ಸಜ್ಜಾಗಿರುವುದು ಗೊತ್ತಿರಬಹುದು. ಈ ನಿಟ್ಟಿನಲ್ಲಿ ಮೊದಲ ಹಂತದ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಸಂಜೆ ಬಿಜೆಪಿ ಪ್ರಕಟಿಸಿದೆ.

ಜೆಡಿಯು ಪಡೆದ 122 ವಿಧಾನಸಭಾ ಕ್ಷೇತ್ರಗಳ ಪೈಕಿ ಏಳು ಕ್ಷೇತ್ರಗಳನ್ನು ಜಿತನ್ ರಾಮ್ ಮಾಂಜಿ ನೇತೃತ್ವದ ಹಿಂದೂಸ್ತಾನಿ ಅವಂ ಮೋರ್ಚಾ ಪಕ್ಷಕ್ಕೆ ಬಿಟ್ಟು ಕೊಡಲಾಗಿದೆ. ಬಿಜೆಪಿ ಪಡೆದುಕೊಂಡ 122 ವಿಧಾನಸಭಾ ಕ್ಷೇತ್ರಗಳ ಪೈಕಿ ಕೆಲವು ಕ್ಷೇತ್ರಗಳನ್ನು ವಿಕಾಸಶೀಲ ಇನ್ಸಾನ್ ಪಕ್ಷಕ್ಕೆ ಬಿಟ್ಟುಕೊಡಲಿದೆ ಎಂದು ನಿತೀಶ್ ಕುಮಾರ್ ತಿಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಬಿಜೆಪಿ 121 ಮತ್ತು ಜೆಡಿಯು 122 ಸ್ಥಾನಗಳಿಗೆ ಸ್ಪರ್ಧಿಸಲಿದ್ದು, ಬಿಜೆಪಿ ತನ್ನ 27 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಐವರು ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ. ಇತ್ತೀಚೆಗೆ ಬಿಜೆಪಿ ಸೇರಿದ ಜನಪ್ರಿಯ ಕ್ರೀಡಾಪಟು ಶೂಟರ್ ಶ್ರೇಯಸಿ ಸಿಂಗ್ ಅವರಿಗೆ ಜಮುಯಿ ಕ್ಷೇತ್ರದ ಟಿಕೆಟ್ ಸಿಕ್ಕಿದೆ.

Bihar Assembly Elections 2020: BJP releases first list of 27 candidates

243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್,28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್.03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್.07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್.10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.

2015ರಲ್ಲಿ ರಾಷ್ಟ್ರೀಯ ಜನತಾ ದಳ 80 ಸ್ಥಾನ, ಜನತಾ ದಳ ಯುನೈಟೆಡ್ 71, ಕಾಂಗ್ರೆಸ್ 27 ಗಳಿಸಿದ್ದವು. ಬಿಜೆಪಿ 53 ಸ್ಥಾನ, ಎಲ್ ಜೆಪಿ 2 ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ ಸೆಕ್ಯುಲರ್ 1, ಇತರೆ 10 ಸ್ಥಾನ ಬಿಜೆಪಿ ಶೇ 24ರಷ್ಟು ಮತಗಳಿಕೆ, ಅರ್ ಜೆ ಡಿ ಶೇ 18 ಹಾಗೂ ಜೆಡಿಯು ಶೇ 17ರಷ್ಟು, ಕಾಂಗ್ರೆಸ್ ಶೇ 7, ಎಲ್ ಜೆಪಿ ಶೇ 4.8ರಷ್ಟು ಮತ ಗಳಿಸಿದ್ದವು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+