ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರದಲ್ಲಿ ಸಿಎಂ ಅಭ್ಯರ್ಥಿ ಸ್ಥಾನಕ್ಕಾಗಿ ಜಿದ್ದಾಜಿದ್ದಿನ ಪೈಪೋಟಿ

|
Google Oneindia Kannada News

ಪಾಟ್ನಾ, ಸಪ್ಟೆಂಬರ್.29: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಎಲ್ ಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಶಾನ್ವಾಜ್ ಅಹ್ಮದ್ ಕೈಫಿ ಹೇಳಿದ್ದಾರೆ.

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(NDA)ದಲ್ಲಿ ಸೀಟು ಹಂಚಿಕೆ ವಿಚಾರ ಚರ್ಚೆ ನಡೆಸುತ್ತಿದ್ದು, ಈ ಬಾರಿ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಲೋಕ ಜನಶಕ್ತಿ ಪಕ್ಷವು 143 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಹಾರದ ಜನರಿಗೆ 10 ಲಕ್ಷ ಸರ್ಕಾರಿ ಉದ್ಯೋಗದ ಆಫರ್!ಬಿಹಾರದ ಜನರಿಗೆ 10 ಲಕ್ಷ ಸರ್ಕಾರಿ ಉದ್ಯೋಗದ ಆಫರ್!

ಲೋಕ ಜನಶಕ್ತಿ ಪಕ್ಷ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರೇ ನಮ್ಮ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದು, ಇದರಲ್ಲಿ ಯಾವುದೇ ಅನುಮಾನವಿಲ್ಲ. ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಕೂಡಾ ಅದನ್ನೇ ಹೇಳುತ್ತಿದ್ದಾರೆ ಎಂದು ಎಲ್ ಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಶಾನ್ವಾಜ್ ಅಹ್ಮದ್ ಕೈಫಿ ತಿಳಿಸಿದ್ದಾರೆ.

Bihar Assembly Polls: Chirag Paswan Definitely The CM Candidate Of LJP, Says Shahnawaz Ahmad Kaifi

ಚಿರಾಗ್ ಪಾಸ್ವಾನ್ ತೀರ್ಮಾನವೇ ಅಂತಿಮ:

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎನ್ನುವುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಲೋಕ ಜನಶಕ್ತಿ ಪಕ್ಷದಿಂದ ಚಿರಾಗ್ ಪಾಸ್ವಾನ್ ಅವರನ್ನೇ ಸಿಎಂ ಅಭ್ಯರ್ಥಿಯಾಗಿ ಘೋಷಿಸುವ ಒತ್ತಾಯ ಕೇಳಿ ಬಂದಿದೆ. ಈ ವಿಚಾರದಲ್ಲಿ ಚಿರಾಗ್ ಪಾಸ್ವಾನ್ ಅವರ ನಿರ್ಧಾರವೇ ಅಂತಿಮವಾಗಲಿದೆ ಎಂದು ಎಲ್ ಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಶಾನ್ವಾಜ್ ಅಹ್ಮದ್ ಕೈಫಿ ತಿಳಿಸಿದ್ದಾರೆ.

ಇತ್ತೀಚಿಗಷ್ಟೇ ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡಿದ್ದರು. ಈ ವೇಳೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಡಳಿತ ವೈಖರಿಯನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ, ಅವರ ನಾಯಕತ್ವದಲ್ಲಿ ಚುನಾವಣೆ ಎದುರಿಸುವುದಾಗಿ ಹೇಳಿದ್ದರು.

3 ಹಂತಗಳಲ್ಲಿ ಬಿಹಾರ ವಿಧಾನಸಭಾ ಚುನಾವಣೆ:

ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್,28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್.03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್.07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್.10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.

English summary
Bihar Assembly Polls: Chirag Paswan Definitely The CM Candidate Of LJP, Says Shahnawaz Ahmad Kaifi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X