• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ನಿತೀಶ್ ಕುಮಾರ್ ಸಂಪುಟಕ್ಕೆ 31 ಸಚಿವರ ಸೇರ್ಪಡೆ

|
Google Oneindia Kannada News

ಪಾಟ್ನಾ, ಆಗಸ್ಟ್ 16: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಎಂಟನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಲವು ದಿನಗಳ ಬಳಿಕ ಮಂಗಳವಾರ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದು, ಮೈತ್ರಿಕೂಟದ ಪಾಲುದಾರ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಗೆ ಹೆಚ್ಚಿನ ಸ್ಥಾನಗಳು ದೊರೆತಿವೆ.

ನಿತೀಶ್ ಕುಮಾರ್ ಸಂಪುಟಕ್ಕೆ ಒಟ್ಟು 31 ಸಚಿವರು ಸೇರ್ಪಡೆಗೊಂಡಿದ್ದಾರೆ. ಆರ್‌ಜೆಡಿಗೆ ಸುಮಾರು 16 ಸಚಿವ ಸ್ಥಾನಗಳು ದೊರೆತಿದ್ದು, ನಂತರದಲ್ಲಿ ಜನತಾ ದಳ (ಯುನೈಟೆಡ್) 11 ಸ್ಥಾನಗಳನ್ನು ಉಳಿಸಿಕೊಂಡಿದೆ.

ಕಾಂಗ್ರೆಸ್‌ನ ಇಬ್ಬರು ಶಾಸಕರು, ಹಿಂದೂಸ್ತಾನಿ ಅವಾಮ್ ಮೋರ್ಚಾದ ಒಬ್ಬ ಶಾಸಕ ಮತ್ತು ಏಕೈಕ ಸ್ವತಂತ್ರ ಶಾಸಕ ಸುಮಿತ್ ಕುಮಾರ್ ಸಿಂಗ್ ಅವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ವಿಜಯ್ ಕುಮಾರ್ ಚೌಧರಿ, ಬಿಜೇಂದ್ರ ಯಾದವ್, ಶ್ರವಣ್ ಕುಮಾರ್, ಅಶೋಕ್ ಚೌಧರಿ, ಲೇಶಿ ಸಿಂಗ್, ಸಂಜಯ್ ಝಾ, ಮದನ್ ಸಾಹ್ನಿ, ಶೀಲಾ ಕುಮಾರಿ, ಮೊಹಮ್ಮದ್ ಜಮಾ ಖಾನ್, ಜಯಂತ್ ರಾಜ್ ಮತ್ತು ಸುನೀಲ್ ಕುಮಾರ್ ಸೇರಿದಂತೆ ನಿತೀಶ್ ಕುಮಾರ್ ಅವರು ತಮ್ಮ ಪಕ್ಷದ ಹೆಚ್ಚಿನ ಮಂತ್ರಿಗಳನ್ನು ಉಳಿಸಿಕೊಂಡಿದ್ದಾರೆ.

ಆರ್‌ಜೆಡಿಯಿಂದ ತೇಜಸ್ವಿ ಯಾದವ್ ಸಹೋದರ ತೇಜ್ ಪ್ರತಾಪ್ ಯಾದವ್, ಸಮೀರ್ ಕುಮಾರ್ ಮಹಾಸೇತ್, ಚಂದ್ರಶೇಖರ್, ಕುಮಾರ್ ಸರ್ವಜೀತ್, ಲಲಿತ್ ಯಾದವ್, ಸುರೇಂದ್ರ ಪ್ರಸಾದ್ ಯಾದವ್ ಮತ್ತು ರಮಾನಂದ್ ಯಾದವ್, ಜಿತೇಂದ್ರ ಕುಮಾರ್ ರೈ, ಅನಿತಾ ದೇವಿ ಮತ್ತು ಸುಧಾಕರ್ ಸಿಂಗ್ ಮತ್ತು ಅಲೋಕ್ ಮೆಹ್ತಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕಾಂಗ್ರೆಸ್ ಶಾಸಕರಾದ ಅಫಕ್ ಆಲಂ ಮತ್ತು ಮುರಾರಿ ಲಾಲ್ ಗೌತಮ್ ಅವರು ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಗೊಂಡರು, ಹಿಂದೂಸ್ತಾನಿ ಅವಾಮ್ ಮೋರ್ಚಾದ ಸಂತೋಷ್ ಸುಮನ್ ಕೂಡ ಪ್ರಮಾಣ ವಚನ ಸ್ವೀಕರಿಸಿದರು.

Bihar Cabinet Expansion: 31 Ministers were Sworn inducted to Nitish Government

ವಿಧಾನಸಭಾ ಬಲದ 243 ಆಧಾರದ ಮೇಲೆ ಬಿಹಾರ ಸಂಪುಟವು ರಾಜ್ಯದ ಮುಖ್ಯಮಂತ್ರಿ ಸೇರಿದಂತೆ 36 ಸಚಿವರನ್ನು ಹೊಂದಬಹುದು. ಮುಂದಿನ ಸಂಪುಟ ವಿಸ್ತರಣೆಗಾಗಿ ಕೆಲವು ಸಚಿವ ಸ್ಥಾನಗಳನ್ನು ಖಾಲಿ ಇಡಲಾಗುವುದು ಎಂದು ಮೂಲಗಳು ತಿಳಿಸಿವೆ.

ನಿತೀಶ್ ಕುಮಾರ್ ಅವರು ಬಿಜೆಪಿಯಿಂದ ಬೇರ್ಪಟ್ಟು ಈ ತಿಂಗಳ ಆರಂಭದಲ್ಲಿ ಆರ್‌ಜೆಡಿ ಮತ್ತು ಇತರ ಪಕ್ಷಗಳೊಂದಿಗೆ ಸರ್ಕಾರ ರಚಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಆರ್‌ಜೆಡಿಯ ತೇಜಸ್ವಿ ಯಾದವ್ ಆಗಸ್ಟ್ 10 ರಂದು ಪ್ರಮಾಣ ವಚನ ಸ್ವೀಕರಿಸಿದರು.

ಬಿಹಾರದ ಮಹಾಮೈತ್ರಿಕೂಟವು 163 ಶಾಸಕರ ಬೆಂಬಲ ಹೊಂದಿದೆ. ಸ್ವತಂತ್ರ ಶಾಸಕ ಸುಮಿತ್ ಕುಮಾರ್ ಸಿಂಗ್ ನಿತೀಶ್ ಕುಮಾರ್ ಅವರಿಗೆ ಬೆಂಬಲ ನೀಡಿದ ನಂತರ ಅದರ ಸಂಖ್ಯೆ 164 ಕ್ಕೆ ಏರಿದೆ. ಹೊಸ ಸರ್ಕಾರ ಆಗಸ್ಟ್ 24 ರಂದು ಬಿಹಾರ ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸುವ ಸಾಧ್ಯತೆಯಿದೆ.

English summary
Bihar Cabinet Expansion: 31 including RJD 16, JDU 11 MLAs took oath as cabinet ministers. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X