ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ಗೆ ಕೊರೊನಾ

|
Google Oneindia Kannada News

ಪಾಟ್ನಾ, ಜುಲೈ 26: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ನಾಲ್ಕು ದಿನಗಳಿಂದ ಅವರು ಜ್ವರದಿಂದ ಬಳಲುತ್ತಿದ್ದ ಅವರಿಗೆ ಕೊರೊನಾ ಪರೀಕ್ಷೆ ಮಾಡಲಾಗಿತ್ತು.

ಕಳೆದ ಕೆಲವು ದಿನಗಳಿಂದ ಮುಖ್ಯಮಂತ್ರಿ ನಿತೀಶ್ ಕುಮಾರ್ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ. ಅವರು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಬೀಳ್ಕೊಡುಗೆ ಸಮಾರಂಭ ಮತ್ತು ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣವಚನ ಸಮಾರಂಭದಲ್ಲಿಯೂ ಭಾಗವಹಿಸಿರಲಿಲ್ಲ.

ಇತಿಹಾಸ ಯಾರ್‍ಯಾರೋ ಬದಲಿಸಲು ಹೇಗೆ ಸಾಧ್ಯ?: ನಿತೀಶ್ ಕುಮಾರ್‌ಇತಿಹಾಸ ಯಾರ್‍ಯಾರೋ ಬದಲಿಸಲು ಹೇಗೆ ಸಾಧ್ಯ?: ನಿತೀಶ್ ಕುಮಾರ್‌

ಅಂದಿನಿಂದ ಬಿಜೆಪಿ ಮೈತ್ರಿ ಪಕ್ಷದ ನಿತೀಶ್ ಕುಮಾರ್‌ ಬಿಜೆಪಿಯೊಂದಿಗಿನ ಅಸಮಾಧಾನದಿಂದ ಈ ಕಾರ್ಯಕ್ರಮಗಳಿಗೆ ಹಾಜರಾಗಲಿಲ್ಲ ಎಂಬ ಊಹಾಪೋಹಗಳು ಹರಿದಾಡಿದ್ದವು. ಆದರೆ, ಈಗ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೂ ಕೂಡ ಬಿಜೆಪಿ ಮತ್ತು ಜೆಡಿಯು ನಡುವೆ ಎಲ್ಲವೂ ಸರಿಯಿಲ್ಲ ಎಂಬ ವದಂತಿಗಳಿವೆ.

Bihar Chief Minister Nitish kumar tests positive for corona

ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 14,830 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. 18,159 ಜನರು ಸಾಂಕ್ರಾಮಿಕ ರೋಗದಿಂದ ಚೇತರಿಸಿಕೊಂಡರೆ, 36 ಜನರು ಮೃತಪಟ್ಟಿದ್ದಾರೆ.

ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಏರಿಳಿತ ಕಂಡುಬಂದಿದೆ. ಮೂರು ದಿನಗಳ ಹಿಂದೆ ಹೊಸ ಕೊರೊನಾ ಸೋಂಕಿತರ ಸಂಖ್ಯೆ 21 ಸಾವಿರ ದಾಟಿತ್ತು, ಆದರೆ ಕಳೆದೆರಡು ದಿನಗಳಿಂದ ಸೋಂಕಿತರ ಸಂಖ್ಯೆ ಕಡಿಮೆಯಾಗಲು ಪ್ರಾರಂಭಿಸಿದೆ.

ಮಂಗಳವಾರ ಬೆಳಗ್ಗೆ 8 ಗಂಟೆಗೆ ಕೇಂದ್ರ ಆರೋಗ್ಯ ಸಚಿವಾಲಯವು ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ 14,830 ಹೊಸ ಸೋಂಕಿತರು ಕಂಡುಬಂದರೆ, ಸಕ್ರಿಯ ಪ್ರಕರಣಗಳು 3365 ರಷ್ಟು ಕಡಿಮೆಯಾಗಿ 1,47,512 ರಷ್ಟಿದೆ. ಮೂರು ದಿನಗಳ ಹಿಂದೆ ಅದು ಒಂದೂವರೆ ಲಕ್ಷ ಮೀರಿತ್ತು.

English summary
covid-19 update: Bihar Chief Minister Nitish kumar tests positive for corona. he has been suffering from fever for the past 4 days. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X