Just in:ಉಪರಾಷ್ಟ್ರಪತಿ ಆಗುವ ಆಸೆ; ಬಿಜೆಪಿ ಹೇಳಿಕೆ ಜೋಕ್ ಎಂದ ನಿತೀಶ್
ಪಾಟ್ನಾ, ಆಗಸ್ಟ್ 11: ನಿತೀಶ್ ಕುಮಾರ್ ಅವರನ್ನು ಉಪರಾಷ್ಟ್ರಪತಿ ಮಾಡದ ಕಾರಣ ಬಿಜೆಪಿ ಮತ್ತು ಜೆಡಿ(ಯು) ನಡುವಿನ ಜಟಾಪಟಿಗೆ ಕಾರಣ ಎಂಬ ಬಿಜೆಪಿ ನಾಯಕ ಸುಶೀಲ್ ಮೋದಿ ಅವರ ಹೇಳಿಕೆಯನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರ ತಳ್ಳಿಹಾಕಿದ್ದಾರೆ.
ಈ ಹೇಳಿಕೆ ಸಂಪೂರ್ಣ ಬೋಗಸ್ ಎಂದು ಬಣ್ಣಿಸಿದ ನಿತೀಶ್ ಕುಮಾರ್, "ಇದು ತಮಾಷೆಯೇ? ನನಗೆ ಅಂತಹ ಆಸೆ ಇಲ್ಲ. ನಾವು ರಾಷ್ಟ್ರಪತಿ ಮತ್ತು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳನ್ನು ಬೆಂಬಲಿಸಿದ್ದೇವೆ. ನಾನು ಉಪರಾಷ್ಟ್ರಪತಿಯಾಗಲು ಬಯಸುವುದು ತಮಾಷೆಯಾಗಿದೆ" ಎಂದು ಎಂಟನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ಹೇಳಿದ್ದಾರೆ.
ನಿತೀಶ್ ಕುಮಾರ್ ಅವರನ್ನು ಉಪರಾಷ್ಟ್ರಪತಿ ಮಾಡಬೇಕೆಂದು ಜನತಾ ದಳ (ಯುನೈಟೆಡ್) ನಾಯಕರು ತಮ್ಮ ಬಳಿಗೆ ಬಂದಿದ್ದರು ಎಂದು ಸುಶೀಲ್ ಮೋದಿ ನಿನ್ನೆ ಹೇಳಿದರು. ನಿತೀಶ್ ಕುಮಾರ್ ದೆಹಲಿ ರಾಜಕಾರಣಕ್ಕೆ ಹೋದರೆ ಸುಶೀಲ್ ಮೋದಿ ಬಿಹಾರ ಮುಖ್ಯಮಂತ್ರಿಯಾಗಬಹುದು ಎಂಬ ಯೋಜನೆಯೊಂದಿಗೆ ಬಂದಿದ್ದರು ಎಂದಿದ್ದರು.

'ನಿತೀಶ್ ಕುಮಾರ್ ಅವರನ್ನು ಉಪರಾಷ್ಟ್ರಪತಿ ಮಾಡಿ ಮತ್ತು ಬಿಹಾರದಲ್ಲಿ ನೀವೇ ಆಡಳಿತ ನಡೆಸಬೇಕು' ಎಂದು ಕೆಲವು ಜೆಡಿಯು ಜನರು ಹೇಳಲು ಬಂದಿದ್ದರು ಎಂದು ಮೋದಿ ಸುದ್ದಿಗಾರರಿಗೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, 'ನಾವು ಎರಡು ಚುನಾವಣೆ ಮುಗಿಯುವುದನ್ನು ಕಾಯುತ್ತಿದ್ದೆವು. ಬಳಿಕ ನಾವು ಸಭೆ ನಡೆಸಿದ್ದೇವೆ. ಅವರು ನನ್ನ ಬಗ್ಗೆ ಜಾಸ್ತಿ ಮಾತನಾಡಲಿ, ಆಗ ಅವರಿಗೆ ಸ್ಥಾನ ಸಿಗಬಹುದು' ಎಂದು ಹೇಳಿದ್ದಾರೆ.
ಜೆಡಿಯು ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಲಾಲನ್ ಸಿಂಗ್ ಕೂಡ ನಿನ್ನೆ ಮೋದಿ ಆರೋಪವನ್ನು ತಳ್ಳಿ ಹಾಕಿದ್ದರು.
Recommended Video
ಎನ್‌ಡಿಎ ಮೈತ್ರಿ ಸರ್ಕಾರದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಆರ್‌ಜೆಡಿ, ಕಾಂಗ್ರೆಸ್ ಮತ್ತು ಇತರ ಪಕ್ಷಗಳೊಂದಿಗೆ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ದಿನದ ನಂತರ ನಿತೀಶ್ ಕುಮಾರ್ ಬುಧವಾರ 8ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications