• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಹಾರದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಆತ್ಮಹತ್ಯೆ

|

ಪಾಟ್ನಾ, ಅಕ್ಟೋಬರ್ 03: ಬಿಹಾರದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಒಂದೆಡೆ ಹತ್ರಾಸ್ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಈ ಹೊತ್ತಿನಲ್ಲೇ ಮತ್ತೊಂದು ದುರ್ಘಟನೆ ನಡೆದುಹೋಗಿದೆ.

ಹತ್ರಾಸ್ ಅತ್ಯಾಚಾರದ ಬೆನ್ನಲ್ಲೇ ಮಧ್ಯಪ್ರದೇಶದಲ್ಲಿ ಯುವತಿ ಮೇಲೆ ಮೂವರು ಅತ್ಯಾಚಾರ ನಡೆಸಿದ್ದರು.

ಬಿಹಾರ ಯುವತಿ ಪೋಷಕರು ದೂರು ನೀಡಿದ್ದಾರೆ. ರಾಹುಲ್ ಕುಮಾರ್, ಚಿಂಟು ಹಾಗೂ ಚಂದನ್ ಕುಮಾರ್ ಅವರ ಹೆಸರನ್ನು ದೂರಿನಲ್ಲಿ ನೀಡಿದ್ದಾರೆ. ಗಯಾ ಮೆಡಿಕಲ್ ಕಾಲೇಜಿನಲ್ಲಿ ಆಟೊಪ್ಸಿ ನಡೆಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ.

ಉತ್ತರ ಪ್ರದೇಶದಲ್ಲಿ 20 ವರ್ಷದ ದಲಿತ ಯುವತಿ ಮೇಲೆ ನಾಲ್ವರು ಅತ್ಯಾಚಾರ ನಡೆಸಿದ್ದರು. ಹರ್ತಾಸ್ ಸಂತ್ರಸ್ತೆ ಮಂಗಳವಾರ ಮೃತಪಟ್ಟಿದ್ದಾಳೆ.

ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಲು ತಡ ಮಾಡಿದರು, ಮತ್ತು ಕುಟುಂಬದವರನ್ನು ಹೊರಗಿಟ್ಟು ಅಂತ್ಯಕ್ರಿಯೆ ಮಾಡಿರುವುದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿದ್ದು, ಪ್ರಶ್ನೆಗಳು ಹುಟ್ಟಿಕೊಂಡಿವೆ.

English summary
Amid nationwide outage against the alleged gang rape and murder of a 20-year-old woman in Uttar Pradesh's Hathras, a Dalit teenage girl in poll-bound Bihar's Gaya district died by suicide on Friday after allegedly being gang raped by four men, the police said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X