ಬಿಹಾರ ಸೋಲು: ರಾಜೀನಾಮೆಗೆ ಮುಂದಾದ ಕಾಂಗ್ರೆಸ್ ಮುಖಂಡರು

ನವದೆಹಲಿ, ನವೆಂಬರ್ 19: ಇತ್ತೀಚೆಗಷ್ಟೇ ನಡೆದ ಬಿಹಾರ ವಿಧಾನಸಭಾ ಸೋಲಿನಲ್ಲಿ ಕಾಂಗ್ರೆಸ್ ಸೋಲಿನ ಹಿನ್ನೆಲೆಯಲ್ಲಿ ಅಲ್ಲಿನ ಕಾಂಗ್ರೆಸ್ ಮುಖಂಡರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ತಾರಿಖ್ ಅನ್ವರ್ ಸೇರಿದಂತೆ ಅನೇಕ ಮುಖಂಡರು ಇದೇ ರೀತಿಯ ಮಾತುಗಳನ್ನಾಡಿದ್ದಾರೆ. ಬಿಹಾರದಲ್ಲಿ ಪಕ್ಷದ ಸಾಧನೆ ಕುರಿತು ಸಮಗ್ರ ವಿಮರ್ಶೆ ನಡೆಯಬೇಕು ಎಂದು ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.

ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಸಾಧನೆ ಬಗ್ಗೆ ಸಮಗ್ರ ಪರಿಶೀಲನೆಗೆ ಕರೆ ನೀಡಿರುವ ಕಾಂಗ್ರೆಸ್ ಮುಖಂಡರು, ಹೈ-ಕಮಾಂಡ್‌ನ ನಿರ್ದೇಶನಗಳ ನಂತರ ಈ ಬಗ್ಗೆ ಮತ್ತಷ್ಟು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Bihar Defeat Fallout: State Congress Leaders Offer Resignation

ಬಿಹಾರ ಎಐಸಿಸಿ ಉಸ್ತುವಾರಿ ಶಕ್ತಿಸಿನ್ಹಾ ಗೊಹಿಲ್ ಮತ್ತಿತರ ಮುಖಂಡರು ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ಹೈಕಮಾಂಡ್ ಗೆ ಸಲ್ಲಿಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಮಧನ್ ಮೋಹನ್ ಝಾ ಕೂಡಾ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಆದರೆ, ಹೈ ಕಮಾಂಡ್ ಮುಂದಿನ ನಿರ್ದೇಶನಕ್ಕಾಗಿ ಕಾಯುತ್ತಿದ್ದಾರೆ ಎನ್ನಲಾಗಿದೆ.

ಇದು ಕ್ರಮದ ಸಮಯವಾಗಿದೆ ಎಂದು ಹಿರಿಯ ಮುಖಂಡ ಕಪಿಲ್ ಸಿಬಲ್ ಹೇಳಿರುವಂತೆಯೇ, ಬಿಹಾರ ಚುನಾವಣೆಯಲ್ಲಿನ ಕಳಪೆ ಸಾಧನೆ ಬಗ್ಗೆ ವಿಮರ್ಶೆ ನಡೆಯಬೇಕೆಂದು ಕೆಲ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+