ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೀಟು ಹಂಚಿಕೆ: ನಡ್ಡಾಗೆ ಮಹತ್ವದ ಸಲಹೆ ಕೊಟ್ಟ ಪಾಸ್ವಾನ್

|
Google Oneindia Kannada News

ಪಾಟ್ನಾ, ಸೆ. 18: ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದಲ್ಲೇ ಚುನಾವಣೆ ಎದುರಿಸಲಿದೆ ಎಂದು ಘೋಷಿಸಿದ ಬಳಿಕ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಹಾರದ ಮತ್ತೊಂದು ಮಿತ್ರಪಕ್ಷದೊಡನೆ ಮಾತುಕತೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಲೋಕಜನ ಶಕ್ತಿ ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರು ಎಲ್ ಜೆಪಿ ಬೇಡಿಕೆಗಳನ್ನು ಜೆಪಿ ನಡ್ಡಾ ಮುಂದಿಟ್ಟಿದ್ದಾರೆ. ಅದರಲ್ಲಿ ಪ್ರಮುಖವಾದದ್ದು, ಬಿಜೆಪಿ ಅಭ್ಯರ್ಥಿಗಳು ಬಿಹಾರದಲ್ಲಿ ಜೆಡಿಯುಗಿಂತ ಕಡಿಮೆ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಹಾಗೂ ಎಲ್ ಜೆಪಿಗೆ ಇನ್ನೂ ಹೆಚ್ಚಿನ ಕ್ಷೇತ್ರಗಳ ಪಾಲು ಸಿಗಬೇಕು ಎಂಬುದು.

ನಿತೀಶ್ ನಾಯಕತ್ವದ ಬಗ್ಗೆ ನಡ್ಡಾ ಘೋಷಣೆ, ಚಿರಾಗ್ ಕಿಡಿನಿತೀಶ್ ನಾಯಕತ್ವದ ಬಗ್ಗೆ ನಡ್ಡಾ ಘೋಷಣೆ, ಚಿರಾಗ್ ಕಿಡಿ

ಸದ್ಯಕ್ಕೆ 143 ಸ್ಥಾನಕ್ಕೆ ಅಭ್ಯರ್ಥಿಗಳು ಸಿದ್ಧ ಎಂದಿರುವ ಎಲ್ ಜೆಪಿ ಈಗ ನಡ್ಡಾ ಮುಂದೆ ಇನ್ನಷ್ಟು ಕ್ಷೇತ್ರಗಳ ಬೇಡಿಕೆ ಇಟ್ಟಿದೆ. ಒಂದು ವೇಳೆ ಜೆಡಿಯುಗೆ ಹೆಚ್ಚಿನ ಸ್ಥಾನಗಳು ಲಭಿಸಿದರೆ, ಜೆಡಿಯು ಅಭ್ಯರ್ಥಿ ವಿರುದ್ಧ ಎಲ್ ಜೆಪಿ ಅಭ್ಯರ್ಥಿಗಳು ಪೈಪೋಟಿಗೆ ನಿಲ್ಲಲಿದ್ದಾರೆ ಎಂದು ಪಾಸ್ವಾನ್ ಸ್ಪಷ್ಟವಾಗಿ ಹೇಳಿದ್ದಾರೆ. ಜೊತೆಗೆ ಜೆಡಿಯುಗಿಂತ ಬಿಜೆಪಿ ಹೆಚ್ಚಿನ ಸ್ಥಾನದಲ್ಲಿ ಸ್ಪರ್ಧಿಸಬಾರದು ಎಂದು ಬೇಡಿಕೆ ಮುಂದಿಟ್ಟಿದ್ದಾರೆ.

ಯುವ ಸಮುದಾಯಕ್ಕೆ ಚಿರಾಗ್ ಭರವಸೆ

ಯುವ ಸಮುದಾಯಕ್ಕೆ ಚಿರಾಗ್ ಭರವಸೆ

ಕೊವಿಡ್ 19 ಹಿನ್ನೆಲೆಯಲ್ಲಿ ಬೇರೆ ರಾಜ್ಯಗಳಿಗೆ ಉದ್ಯೋಗ ಅರಸಿ ವಲಸೆ ಹೋಗಿದ್ದ ಯುವ ಸಮುದಾಯಕ್ಕೆ ಚಿರಾಗ್ ಭರವಸೆ ನೀಡಿದ್ದು, ಎಲ್ಲರೂ ಬಿಹಾರದಲ್ಲೆ ನೆಲೆಗೊಳ್ಳಲು ಸಿದ್ಧ ಎಂದಿದ್ದಾರೆ. ನಿತೀಶ್ ಸರ್ಕಾರ ಸರಿಯಾಗಿ ಕಾಳಜಿ ವಹಿಸಿದ್ದರೆ ಬೇರೆ ರಾಜ್ಯಕ್ಕೆ ವಲಸೆ ಹೋಗುವ ಪ್ರಮೇಯವೇ ಇರುತ್ತಿರಲಿಲ್ಲ ಎಂದು ಚಿರಾಗ್ ಎಲ್ಲರಿಗೂ ಮನದಟ್ಟಾಗುವಂತೆ ಮಾಡಿದ್ದಾರೆ. ದಲಿತ-ಮುಸ್ಲಿಂ ಹಾಗೂ ಶ್ರಮಿಕ ವರ್ಗದವರಿಗೆ ನಿತೀಶ್ ಸರ್ಕಾರದ ಮೇಲೆ ಉದ್ಯೋಗ ಕುರಿತಂತೆ ಇದ್ದ ನಿರೀಕ್ಷೆ ಹುಸಿಯಾಗಿದೆ ಎಂದು ಎಲ್ ಜೆಪಿ ಆರೋಪಿಸಿದೆ.

ಚಿರಾಗ್ ಹಾಗೂ ನಿತೀಶ್ ನಡುವಿನ ತಿಕ್ಕಾಟ

ಚಿರಾಗ್ ಹಾಗೂ ನಿತೀಶ್ ನಡುವಿನ ತಿಕ್ಕಾಟ

ಸೀಟು ಹಂಚಿಕೆ ಹಾಗೂ ಅಭ್ಯರ್ಥಿಗಳನ್ನು ಯಾವ ಕ್ಷೇತ್ರಗಳಲ್ಲಿ ಕಣಕ್ಕಿಳಿಸಬೇಕು ಎಂಬ ಸಮಸ್ಯೆ ಚಿರಾಗ್ ಹಾಗೂ ನಿತೀಶ್ ನಡುವಿನ ತಿಕ್ಕಾಟಕ್ಕೆ ಮೂಲ ಕಾರಣವಾಗಿದೆ. 2010ರ ವಿಧಾನಸಭೆಯಲ್ಲಿ ಇದ್ದ ಸೀಟು ಹಂಚಿಕೆ ಅನುಪಾತದಂತೆ ಈ ಬಾರಿಯೂ ಸೀಟು ಹಂಚಿಕೆಯಾಗಲಿ ಎಂದು ಜೆಡಿಯು ಹಠ ಹಿಡಿದಿದೆ. ಈಗ ಬಿಜೆಪಿ ವರಿಷ್ಠರು ಸೀಟು ಹಂಚಿಕೆ, ಜಾತಿ ಸೆಂಟಿಮೆಂಟು, ಹಿಂದುಳಿದ, ಶೋಷಿತ, ಅಲ್ಪಸಂಖ್ಯಾತರು ಎಲ್ಲರ ಪ್ರಾತಿನಿಧ್ಯ ಪರಿಗಣಿಸಿ ಜೆಡಿಯು ಹಾಗೂ ಎಲ್ ಜೆಪಿ ನಡುವಿನ ಕಿತ್ತಾಟವನ್ನು ಮುಂದಿಟ್ಟುಕೊಂಡು ಸೀಟು ಹಂಚಿಕೆ ಸಾಹಸಕ್ಕೆ ಬಿಜೆಪಿ ಇಳಿದಿದೆ. ಜೆಡಿಯು ವಿರುದ್ಧ 143 ಎಲ್ ಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧ ಚಿರಾಗ್ ಘೋಷಿಸಿದ್ದಾರೆ.

ಎಲ್ ಜೆಪಿ ಜೆಡಿಯು ಮೈತ್ರಿ, ಚಿರಾಗ್ ನಿರ್ಣಯವೇ ಅಂತಿಮ!ಎಲ್ ಜೆಪಿ ಜೆಡಿಯು ಮೈತ್ರಿ, ಚಿರಾಗ್ ನಿರ್ಣಯವೇ ಅಂತಿಮ!

ಎಲ್ ಜೆಪಿ ಅಭಿಮತ

ಎಲ್ ಜೆಪಿ ಅಭಿಮತ

ಕುತ್ತಿಗೆ ತನಕ ನೀರು ಬಂದಿದೆ ತೇಲಿಸುವುದು ಮುಳುಗಿಸುವುದು ನಿರ್ಧರಿಸಬೇಕಿದೆ. ಮೈತ್ರಿಧರ್ಮಕ್ಕೆ ಎಲ್ ಜೆಪಿ ಬದ್ಧವಾಗಿದ್ದು, ಬಿಜೆಪಿ ಜೊತೆ ಜೊತೆಗೆ ಕಣಕ್ಕಿಳಿಯಲಿದೆ. ಜೆಡಿಯು ವಿರುದ್ಧ ಮಾತ್ರ ಬಿಜೆಪಿ ಅಭ್ಯರ್ಥಿಗಳನ್ನು ಇಳಿಸಬೇಕು ಹಾಗೂ ಎಲ್ ಜೆಪಿಗೆ ಹೆಚ್ಚಿನ ಕ್ಷೇತ್ರ ಸಿಗಬೇಕು ಎಂದು ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.

Recommended Video

ಏನು ಇಲ್ಲ ನಮ್ ಕೈಯಲ್ಲಿ ,ಎಲ್ಲಾ ದೊಡ್ಡೋರು decide ಮಾಡ್ಬೇಕು | Oneindia Kannada
ಎಲ್ ಜೆಪಿ ಮೈತ್ರಿ ತೊರೆಯಲು ಬಿಜೆಪಿಗೂ ಸಾಧ್ಯವಿಲ್ಲ

ಎಲ್ ಜೆಪಿ ಮೈತ್ರಿ ತೊರೆಯಲು ಬಿಜೆಪಿಗೂ ಸಾಧ್ಯವಿಲ್ಲ

ಜೆಡಿಯು ವಿರುದ್ಧ ಎಲ್ ಜೆಪಿ ಅಭ್ಯರ್ಥಿ ಕಣಕ್ಕಿಳಿದರೆ ಮೈತ್ರಿ ಹಾಗೂ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ ಎಂಬುದು ಬಿಜೆಪಿಗೂ ಗೊತ್ತಿದ್ದರೂ ನಿತೀಶ್ ರನ್ನೇ ಮುಂದಿಟ್ಟು ಬಿಹಾರ ಯುದ್ಧ ಗೆಲ್ಲಲು ಬಿಜೆಪಿ ಮುಂದಾಗಿದೆ. ಎಲ್ ಜೆಪಿಗೆ ರಾಮ್ ವಿಲಾಸ್ ಪಾಸ್ವಾನ್ ಅವರು ಕೇಂದ್ರ ಸಚಿವರಾಗಿ ಉಳಿದುಕೊಳ್ಳಬೇಕಿದೆ. ಚುನಾವಣೆ ಹತ್ತಿರ ಇರುವುದರಿಂದ ಮೈತ್ರಿ ಉಳಿಸಿಕೊಳ್ಳುವುದು ಮೂರು ಪಕ್ಷಗಳಿಗೂ ಬೇಕಿದೆ. ಬಿಹಾರದಲ್ಲಿ ಶೇ 17ರಷ್ಟು ದಲಿತ ಮತಗಳಿವೆ. ಎಲ್ ಜೆಪಿ ಇಲ್ಲದೆ ಬಿಜೆಪಿಗೆ ಹೆಚ್ಚಿನ ಕ್ಷೇತ್ರದಲ್ಲಿ ಜಯ ಕಷ್ಟ ಎಂಬುದು ನಡ್ಡಾಗೂ ತಿಳಿದಿದೆ.

English summary
Bihar Election 2020: Chirag Paswan important suggestion to BJP on Seat sharing, that BJP should contest in more seats than JD(U) and there would be LJP candidates against each JD(U) candidate if seat sharing is acceptable
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X