• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

NDA ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ್ದಕ್ಕೆ 9 ಬಿಜೆಪಿ ನಾಯಕರ ಅಮಾನತು

|

ಪಾಟ್ನಾ, ಅಕ್ಟೋಬರ್.12: ಬಿಹಾರ ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲೇ ಭಾರತೀಯ ಜನತಾ ಪಕ್ಷದ ವಿರುದ್ಧ 9 ಮಂದಿ ನಾಯಕರು ಬಂಡಾಯದ ಬಾವುಟ ಹಾರಿಸಿದ್ದಾರೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿದ 9 ನಾಯಕರನ್ನು ಬಿಜೆಪಿ ಅಮಾನತುಗೊಳಿಸಿದೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಗಳ ವಿರುದ್ಧ ನಾಮಪತ್ರ ಸಲ್ಲಿಸುತ್ತಿದ್ದಂತೆ ಬಿಜೆಪಿ ಈ ಕ್ರಮವನ್ನು ತೆಗೆದುಕೊಂಡಿದೆ. "ನೀವು ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸುತ್ತಿದ್ದು, ಇದು ನಮ್ಮ ಒಪ್ಪಂದಕ್ಕೆ ವಿರುದ್ಧವಾಗಿದೆ. ಪಕ್ಷದ ತತ್ವಗಳಿಗೂ ಈ ನಡೆಯು ವಿರುದ್ಧವಾಗಿದ್ದು, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ನಿಮ್ಮನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸಲಾಗುತ್ತದೆ ಎಂದು ಬಿಹಾರದ ಬಿಜೆಪಿ ರಾಜ್ಯಾಧ್ಯಕ್ಷ ಸಂಜಯ್ ಜೈಸ್ವಾಲ್ ನೋಟಿಸ್ ನಲ್ಲಿ ತಿಳಿಸಿದ್ದಾರೆ.

ಬಿಹಾರದಲ್ಲಿ ಬದಲಾವಣೆ ತಂದ ಐಎಎಸ್ ಅಧಿಕಾರಿ ಪತ್ನಿ ಚುನಾವಣಾ ಕಣಕ್ಕೆ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ಬಿಜೆಪಿ ಮತ್ತು ಜೆಡಿಯು ಪಕ್ಷಗಳು ಸರಿ ಸಮಾನ ಸೀಟು ಹಂಚಿಕೆಯ ಒಪ್ಪಂದ ಮಾಡಿಕೊಂಡಿದ್ದವು. ಬಿಜೆಪಿ 121 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಜೆಡಿಯು 122 ಸ್ಥಾನಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಿತ್ತು. ಇನ್ನೊಂದು ಕಡೆ ಜೆಡಿಯು ಪಡೆದ 122 ಕ್ಷೇತ್ರಗಳ ಪೈಕಿ 7 ವಿಧಾನಸಭಾ ಕ್ಷೇತ್ರಗಳಲ್ಲಿ ಜಿತನ್ ರಾಮ್ ಮಾಂಜೆ ನೇತೃತ್ವದ ಹಿಂದೂಸ್ತಾನಿ ಅವಂ ಮೋರ್ಚಾಕ್ಕೆ ನೀಡಿದ್ದರು.

ಬಿಜೆಪಿಯಿಂದ ಅಮಾನತುಗೊಂಡ ನಾಯಕರ ಪಟ್ಠಿ:

ನಾಯಕನ ಹೆಸರು - ಕ್ಷೇತ್ರ

ರಾಜೇಂದ್ರ ಸಿಂಗ್ - ಸಸಾರಾಮ್

ರಾಮೇಶ್ವರ ಚೌರಾಸಿಯಾ - ಸಸಾರಾಮ್

ಉಷಾ ವಿದ್ಯಾರ್ಥಿ - ಪಾಟ್ನಾ ಗ್ರಾಮಾಂತರ

ರವೀಂದ್ರ ಯಾದವ್ - ಝಝಾ

ಶ್ವೇತಾ ಸಿಂಗ್ - ಭೋಜ್ಪುರ್

ಇಂದು ಕಶ್ಯಪ್ - ಜೆಹನಾಬಾದ್

ಅನಿಲ್ ಕುಮಾರ್ - ಪಾಟ್ನಾ ಗ್ರಾಮಾಂತರ

ಮೃನಾಲ್ ಶೇಖರ್ - -

ಅಜಯ್ ಪ್ರತಾಪ್ - ಜಾಮುವಾ

ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ:

ಕಳೆದ ಸಪ್ಟೆಂಬರ್.25ರಂದು ಕೇಂದ್ರ ಚುನಾವಣಾ ಆಯೋಗವು ಬಿಹಾರದಲ್ಲಿ ಮೂರು ಹಂತಗಳಲ್ಲಿ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಿಸಿತು. ಅಕ್ಟೋಬರ್.28 ಮೊದಲ ಹಂತದ ಚುನಾವಣೆ, ನವೆಂಬರ್.03 ಎರಡನೇ ಹಂತದ ಚುನಾವಣೆ ಮತ್ತು ನವೆಂಬರ್.07ರಂದು ಮೂರನೇ ಹಂತದ ಚುನಾವಣೆ ನಡೆಯಲಿದೆ. ಖಾಲಿ ಆಗಿರುವ ವಾಲ್ಮೀಕಿ ನಗರ ಲೋಕಸಭಾ ಕ್ಷೇತ್ರಕ್ಕೂ ನವೆಂಬರ್.07ರಂದೇ ಮತದಾನ ನಡೆಯಲಿದೆ.

English summary
Bihar Election: BJP Expels 9 Leaders For Contesting Polls Against NDA Candidates.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X