• search
 • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಹಾರದ 18 ಕಡೆಗಳಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಪ್ರಚಾರ

|

ಪಾಟ್ನಾ, ಅಕ್ಟೋಬರ್.19: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಮಲ ಅರಳಿಸುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷದ ನಾಯಕರು ಭರ್ಜರಿ ಪ್ರಚಾರ ಶುರು ಮಾಡಿದ್ದಾರೆ. ಆರು ದಿನಗಳಲ್ಲೇ ಕೇಂದ್ರ ಸಚಿವ ರಾಜನಾಥ್ ಸಿಂಗ್ 18 ರ್ಯಾಲಿಗಳನ್ನು ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಬಿಹಾರದಲ್ಲಿ ನಡೆಯುವ ಮೂರು ಹಂತಗಳ ಚುನಾವಣೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಅಕ್ಟೋಬರ್.21ರಂದು ಬಧ್ ನೊಖಾ, ಮತ್ತು ಔರಂಗಾಬಾದ್ ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ.

ಬಿಹಾರ ಚುನಾವಣೆ: "ಬಿಹಾರಿ ಪುತ್ರ"ನಿಗಾಗಿ ಮತ ಕೇಳಿದ ಶತ್ರುಜ್ಞ ಸಿನ್ಹಾ

ಅಕ್ಟೋಬರ್.22ರಂದು ಬಂಕಾ, ಬರ್ಹರ್ ಮತ್ತು ರಾಮಘರ್ ನಲ್ಲಿ ಬಿಜೆಪಿ ಚುನಾವಣಾ ರ್ಯಾಲಿ ಮತ್ತು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ರಾಜನಾಥ್ ಸಿಂಗ್ ಮಾತನಾಡಲಿದ್ದಾರೆ ಎಂದು ಕೇಂದ್ರ ರಕ್ಷಣಾ ಸಚಿವರ ಕಚೇರಿ ಮೂಲಗಳಿಂದ ತಿಳಿದು ಬಂದಿದೆ.

ಬಿಹಾರದಲ್ಲಿ ಪ್ರಧಾನಿ ಮೋದಿ 12 ರ್ಯಾಲಿ:

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್ ಡಿಎ)ದ ಅಭ್ಯರ್ಥಿಗಳ ಪರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 12 ರ್ಯಾಲಿಗಳನ್ನು ನಡೆಸಲಿದ್ದಾರೆ. ಅಕ್ಟೋಬರ್.23ರಂದು ಸಸಾರಮ್, ಗಯಾ, ಭಗಲ್ಪುರ್ ನಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಅಕ್ಟೋಬರ್.28ರಂದು ದರ್ಭಂಗಾ, ಮುಜಾಫರ್ ಪುರ್ ಮತ್ತು ಪಾಟ್ನಾದಲ್ಲಿ ರ್ಯಾಲಿ ನಡೆಸಲಿದ್ದಾರೆ. ನವೆಂಬರ್.03ರಂದು ಛಪ್ರಾ, ಪೂರ್ವ ಚಂಪಾರಣ್, ಸಮಸ್ತಿಪುರ್ ನಲ್ಲಿ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.

   ಹುಷಾರು!! ಇನ್ನು 3 ದಿನ ಮಳೆರಾಯನ ತಡಿಯೋಕ್ ಆಗಲ್ಲ | Oneindia Kannada

   ಬಿಹಾರದಲ್ಲಿ ಮೂರು ಹಂತಗಳಲ್ಲಿ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಕ್ಟೋಬರ್.28 ಮೊದಲ ಹಂತದ ಚುನಾವಣೆ, ನವೆಂಬರ್.03 ಎರಡನೇ ಹಂತದ ಚುನಾವಣೆ ಮತ್ತು ನವೆಂಬರ್.07ರಂದು ಮೂರನೇ ಹಂತದ ಚುನಾವಣೆ ನಡೆಯಲಿದೆ. ಖಾಲಿ ಆಗಿರುವ ವಾಲ್ಮೀಕಿ ನಗರ ಲೋಕಸಭಾ ಕ್ಷೇತ್ರಕ್ಕೂ ನವೆಂಬರ್.07ರಂದೇ ಮತದಾನ ನಡೆಯಲಿದೆ.

   English summary
   Bihar Election: BJP Leader And Defence Minister Rajnath Singh To Address Over 18 Rallies.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X