ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರ: ಎಲ್ ಜೆಪಿ ಅಧಿಕಾರಕ್ಕೆ ಬಂದರೆ ನಿತೀಶ್ ಕುಮಾರ್ ಜೈಲಿಗೆ!

|
Google Oneindia Kannada News

ಪಾಟ್ನಾ, ಅಕ್ಟೋಬರ್.25: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಕಂಬಿ ಹಿಂದೆ ನಿಲ್ಲಿಸಾಗುವುದು ಎಂದು ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ಬಕ್ಸಾರ್ ವಿಧಾನಸಭಾ ಕ್ಷೇತ್ರದ ದಮ್ರೋನ್ ಪ್ರದೇಶದಲ್ಲಿ ಚುನಾವಣಾ ರ್ಯಾಲಿ ನಡೆಸಿದ ಸಂದರ್ಭದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು. ಎಲೆ ಜೆಡಿ ಪಕ್ಷವು ಅಧಿಕಾರಕ್ಕೆ ಬಂದಲ್ಲಿ ಸಿಎಂ ನಿತೀಶ್ ಕುಮಾರ್ ಹಾಗೂ ಅವರ ಅಧಿಕಾರಿಗಳು ಜೈಲಿಗೆ ಹೋಗುತ್ತಾರೆ ಎಂದು ಹೇಳಿದರು.

"ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರಾ ಸಿಎಂ ನಿತೀಶ್ ಕುಮಾರ್?"

ಬಿಹಾರದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಸರ್ಕಾರಕ್ಕೆ ಚಿರಾಗ್ ಪಾಸ್ವಾನ್ ಹಲವು ಪ್ರಶ್ನೆಗಳನ್ನು ಹಾಕಿದ್ದಾರೆ. ಮದ್ಯ ಮಾರಾಟ ನಿಷೇಧ ಕಾನೂನು ವಿಫಲವಾಗಿದೆ. ಅಕ್ರಮ ಮದ್ಯ ಮಾರಾಟವು ಯತೇಚ್ಛವಾಗಿ ನಡೆಯುತ್ತಿದ್ದು, ಸಿಎಂ ನಿತೀಶ್ ಕುಮಾರ್ ಅವರು ಲಂಚ ಪಡೆದು ಸುಮ್ಮನಾಗಿದ್ದಾರೆ ಎಂದು ಆರೋಪಿಸಿದ್ದಾರೆ.

 Bihar Election: Nitish Kumar Will Be Behind Jail If LJP Comes To Power: Chirag Paswan

ಬಿಹಾರ1st, ಬಿಹಾರಿ1st ಜಾರಿಗಾಗಿ ಎಲ್ ಜೆಪಿಗೆ ಮತ:

ನೀವು ಬಿಜೆಗೆ ಮತ ನೀಡಿದ್ದಲ್ಲಿ ನಿತೀಶ್ ಕುಮಾರ್ ಮುಖ್ಯಮಂತ್ರಿ ಆಗುತ್ತಾರೆ. ನಿತೀಶ್ ಮುಕ್ತ ಸರ್ಕಾರ ರಚನೆಯಾಗಬೇಕಿದ್ದಲ್ಲಿ ಎಲ್ ಜೆಪಿಗೆ ಮತ ನೀಡುವಂತೆ ನಾನು ನಿಮ್ಮನ್ನು ಪ್ರಾರ್ಥಿಸುತ್ತೇನೆ ಎಂದು ಚಿರಾಗ್ ಪಾಸ್ವಾನ್ ಮನವಿ ಮಾಡಿಕೊಂಡಿದ್ದಾರೆ. ಬಿಹಾರ ಫಸ್ಟ್, ಬಿಹಾರಿ ಫಸ್ಟ್ ಯೋಜನೆ ಜಾರಿಗೊಳ್ಳಬೇಕಿದ್ದಲ್ಲಿ ಲೋಕ ಜನಶಕ್ತಿ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಎಂದು ಅವರು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಬಿಹಾರದಲ್ಲಿ ಮೂರು ಹಂತಗಳಲ್ಲಿ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಕ್ಟೋಬರ್.28 ಮೊದಲ ಹಂತದ ಚುನಾವಣೆ, ನವೆಂಬರ್.03 ಎರಡನೇ ಹಂತದ ಚುನಾವಣೆ ಮತ್ತು ನವೆಂಬರ್.07ರಂದು ಮೂರನೇ ಹಂತದ ಚುನಾವಣೆ ನಡೆಯಲಿದೆ. ಖಾಲಿ ಆಗಿರುವ ವಾಲ್ಮೀಕಿ ನಗರ ಲೋಕಸಭಾ ಕ್ಷೇತ್ರಕ್ಕೂ ನವೆಂಬರ್.07ರಂದೇ ಮತದಾನ ನಡೆಯಲಿದೆ.

English summary
Bihar Election: Nitish Kumar Will Be Behind Jail If LJP Comes To Power: Chirag Paswan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X