ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರ ಪ್ರಚಾರದ ಅಖಾಡಕ್ಕೆ ಒಂದೇ ದಿನ ಪ್ರಧಾನಿ ಮೋದಿ, ರಾಹುಲ್ ಗಾಂಧಿ

|
Google Oneindia Kannada News

ನವದೆಹಲಿ, ಅಕ್ಟೋಬರ್.17: ಬಿಹಾರ ವಿಧಾನಸಭಾ ಚುನಾವಣೆ ಪ್ರಚಾರದ ಅಖಾಡಕ್ಕೆ ಧುಮುಕಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭರ್ಜರಿ ತಯಾರಿ ನಡೆಸಿದ್ದಾರೆ. ಅಕ್ಟೋಬರ್.23ರಂದು ಒಂದೇ ದಿನ ಉಭಯ ನಾಯಕರು ಮತಬೇಟೆ ಶುರು ಮಾಡಲಿದ್ದಾರೆ.
ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಒಂದೇ ದಿನ ಎರಡು ಕಡೆಗಳಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನೀತು ಸಿಂಗ್ ಪರವಾಗಿ ಹಿಸುವಾ ವಿಧಾನಸಭಾ ಕ್ಷೇತ್ರದಿಂದ ಸಂಸದ ರಾಹುಲ್ ಗಾಂಧಿ ಪ್ರಚಾರ ಆರಂಭಿಸಲಿದ್ದಾರೆ. ರಾಜ್ಯದಲ್ಲಿರುವ ಭೂಮಿಹರ್ ಸಮುದಾಯದ ಮತಗಳ ಮೇಲೆ ಕಾಂಗ್ರೆಸ್ ಈ ಬಾರಿ ಕಣ್ಣಿಟ್ಟಿದೆ.

ವಕ್ತಾರ ಸ್ಥಾನದಿಂದ ಖುಷ್ಬೂ ತೆಗೆದು ಹಾಕಿದ ಕಾಂಗ್ರೆಸ್!
ಕಳೆದ 2015ರ ವಿಧಾನಸಭಾ ಚುನಾವಣೆಯಲ್ಲಿ ಭೂಮಿಹರ್ ಪ್ರಾಬಲ್ಯವಿರುವ ಪ್ರದೇಶಗಳಲ್ಲೇ ಕಾಂಗ್ರೆಸ್ಸಿನ 9 ಮಂದಿ ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದರು. ಹೀಗಾಗಿ ಈ ಸಮುದಾಯದ ಮತದಾರರ ಓಲೈಕೆ ಕಾಂಗ್ರೆಸ್ ಮುಂದಾಗಿದೆ. ಭೂಮಿಹರ್ ಸಮುದಾಯದ ಜನರೇ ಹೆಚ್ಚಾಗಿರುವ ಮತ್ತೊಂದು ವಿಧಾನಸಭಾ ಕ್ಷೇತ್ರ ಕಹಲಗೋನ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುಕೇಶ್ ಸಿಂಗ್ ಪರವಾಗಿ ರಾಹುಲ್ ಗಾಂಧಿ ಪ್ರಚಾರ ಕೈಗೊಳ್ಳಲಿದ್ದಾರೆ.

ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿದ ಸದಾನಂದ್ ಸಿಂಗ್

ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿದ ಸದಾನಂದ್ ಸಿಂಗ್

ಕಾಂಗ್ರೆಸ್ಸಿನ ಸಿಎಲ್ ಪಿ ಮುಖಂಡ ಸದಾನಂದ್ ಸಿಂಗ್ ಅವರು ಕಹಲಗೋನ್ ವಿಧಾನಸಭಾ ಕ್ಷೇತ್ರದಿಂದಲೇ 9 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಬಾರಿ ತಮ್ಮ ಪುತ್ರ ಮುಕೇಶ್ ಸಿಂಗ್ ಗಾಗಿ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಮೂಲಗಳ ಪ್ರಕಾರ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಮಹಾಮೈತ್ರಿಕೂಟದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್ ಜಂಟಿ ರ್ಯಾಲಿ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಕಾರ್ಯಕ್ರಮದ ಬಗ್ಗೆ ಇನ್ನೂ ಅಂತಿಮವಾಗಿಲ್ಲ.

ಬಿಹಾರದಲ್ಲಿ ಆರು ಬಾರಿ ರಾಹುಲ್ ಗಾಂಧಿ ಪ್ರಚಾರ

ಬಿಹಾರದಲ್ಲಿ ಆರು ಬಾರಿ ರಾಹುಲ್ ಗಾಂಧಿ ಪ್ರಚಾರ

ಬಿಹಾರ ವಿಧಾನಸಭಾ ಚುನಾವಣೆ ಅಖಾಡದಲ್ಲಿ ಸಂಸದ ರಾಹುಲ್ ಗಾಂಧಿ ಕನಿಷ್ಠ ಆರು ರ್ಯಾಲಿಗಳನ್ನು ನಡೆಸುವುದಕ್ಕೆ ಪಕ್ಷವು ಯೋಜನೆ ಹಾಕಿಕೊಂಡಿದೆ. ಮೂರು ಹಂತಗಳಲ್ಲಿ ಚುನಾವಣೆ ನಡೆಯುವ ಹಿನ್ನೆಲೆ ಒಂದೊಂದು ಹಂತದಲ್ಲಿ ಎರಡು ಬಾರಿ ರ್ಯಾಲಿ ನಡೆಸುವುದಕ್ಕೆ ಯೋಜನೆ ರೂಪಿಸಲಾಗುತ್ತಿದೆ. ಬಿಹಾರದಲ್ಲಿ ಮೂರು ಹಂತಗಳಲ್ಲಿ 243 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಕ್ಟೋಬರ್.28 ಮೊದಲ ಹಂತದ ಚುನಾವಣೆ, ನವೆಂಬರ್.03 ಎರಡನೇ ಹಂತದ ಚುನಾವಣೆ ಮತ್ತು ನವೆಂಬರ್.07ರಂದು ಮೂರನೇ ಹಂತದ ಚುನಾವಣೆ ನಡೆಯಲಿದೆ. ಖಾಲಿ ಆಗಿರುವ ವಾಲ್ಮೀಕಿ ನಗರ ಲೋಕಸಭಾ ಕ್ಷೇತ್ರಕ್ಕೂ ನವೆಂಬರ್.07ರಂದೇ ಮತದಾನ ನಡೆಯಲಿದೆ.
ಶನಿವಾರವಷ್ಟೇ ಮಹಾಘಟಬಂಧನ್ ಮೈತ್ರಿಯು ರೂಪಿಸಿದ ಸಾಮಾನ್ಯ ಕನಿಷ್ಠ ಯೋಜನೆಗಳನ್ನು ಒಳಗೊಂಡ ಚುನಾವಣಾ ಪ್ರಣಾಳಿಕೆಯನ್ನು ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಮತ್ತು ಕಾಂಗ್ರೆಸ್ ಮುಖಂಡ ರಂದೀಪ್ ಸರ್ಜೆವಾಲಾ ಜಂಟಿಯಾಗಿ ಬಿಡುಗಡೆಗೊಳಿಸಿದರು.

ಬಿಹಾರದಲ್ಲಿ 12 ಕಡೆಗಳಲ್ಲಿ ಪ್ರಧಾನಿ ಮೋದಿ ರ್ಯಾಲಿ

ಬಿಹಾರದಲ್ಲಿ 12 ಕಡೆಗಳಲ್ಲಿ ಪ್ರಧಾನಿ ಮೋದಿ ರ್ಯಾಲಿ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್ ಡಿಎ)ದ ಅಭ್ಯರ್ಥಿಗಳ ಪರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 12 ರ್ಯಾಲಿಗಳನ್ನು ನಡೆಸಲಿದ್ದಾರೆ. ಅಕ್ಟೋಬರ್.23ರಂದು ಸಸಾರಮ್, ಗಯಾ, ಭಗಲ್ಪುರ್ ನಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಅಕ್ಟೋಬರ್.28ರಂದು ದರ್ಭಂಗಾ, ಮುಜಾಫರ್ ಪುರ್ ಮತ್ತು ಪಾಟ್ನಾದಲ್ಲಿ ರ್ಯಾಲಿ ನಡೆಸಲಿದ್ದಾರೆ. ನವೆಂಬರ್.03ರಂದು ಛಪ್ರಾ, ಪೂರ್ವ ಚಂಪಾರಣ್, ಸಮಸ್ತಿಪುರ್ ನಲ್ಲಿ ಜನರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಈ ಬಗ್ಗೆ ಬಿಹಾರ ಚುನಾವಣೆಯ ಬಿಜೆಪಿ ಉಸ್ತುವಾರಿ ವಹಿಸಿಕೊಂಡಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸ್ಪಷ್ಟನೆ ನೀಡಿದ್ದಾರೆ.

Recommended Video

Corona ರೋಗದ ಮೊದಲನೇ ಲಕ್ಷಣ ನೆಗಡಿ | Oneindia Kannada
ಬಿಹಾರ ಚುನಾವಣೆಗೆ 30 ಕಾಂಗ್ರೆಸ್ ಪ್ರಚಾರಕರು

ಬಿಹಾರ ಚುನಾವಣೆಗೆ 30 ಕಾಂಗ್ರೆಸ್ ಪ್ರಚಾರಕರು

ಬಿಹಾರ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಈಗಾಗಲೇ 30 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಗೊಳಿಸಿದೆ. ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸಂಸದ ರಾಹುಲ್ ಗಾಂಧಿ, ಮೀರಾ ಕುಮಾರ್, ಗುಲಾಮ್ ನಬಿ ಆಜಾದ್, ಪ್ರಿಯಾಂಕಾ ಗಾಂಧಿ ವಾದ್ರಾ, ರಂದೀಪ್ ಸಿಂಗ್ ಸರ್ಜೇವಾಲಾ ಸೇರಿದಂತೆ ಒಟ್ಟು 30 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆಗೊಳಿಸಿದೆ. ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್, ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರಿಗೂ ಸ್ಥಾನ ನೀಡಲಾಗಿದೆ.

English summary
Bihar Election: Rahul Gandhi And PM Narendra Modi Planned To Election Campaign Starts From Oct.23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X