ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರದ ಸ್ಟ್ರಾಂಗ್ ರೂಮ್ ಭದ್ರತೆಗೆ 19 ಕಂಪನಿ ಅರೆಸೇನಾಪಡೆ

|
Google Oneindia Kannada News

ಪಾಟ್ನಾ, ನವೆಂಬರ್.09: ಬಿಹಾರದ 243 ವಿಧಾನಸಭಾ ಕ್ಷೇತ್ರಗಳಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಕಾರ್ಯ ಆರಂಭವಾಗಲಿದೆ. ರಾಜ್ಯದ 38 ಜಿಲ್ಲೆಗಳ 55 ಕಡೆಗಳಲ್ಲಿ ಸರ್ಕಾರಿ ಕಚೇರಿಗಳು, ಸರ್ಕಾರಿ ಶಾಲೆ ಮತ್ತು ಖಾಸಗಿ ಶಾಲೆಗಳು ಮತ್ತು ಪಂಚಾಯತ್ ಕಚೇರಿಗಳಲ್ಲಿ ಮತಎಣಿಕೆಗೆ ಆಯೋಗವು ತಯಾರಿ ಮಾಡಿಕೊಂಡಿದೆ.

ಮತಎಣಿಕೆ ಕಾರ್ಯವನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಕ್ಕಾಗಿ 19 ಕಂಪನಿಗಳ ಪ್ಯಾರಾಮಿಲಿಟರಿ ಪೋರ್ಸ್ ಸಿಬ್ಬಂದಿಯನ್ನು ಸ್ಟ್ರಾಂಗ್ ರೂಮ್ ಬಳಿ ನಿಯೋಜಿಸಲಾಗುತ್ತದೆ ಎಂದು ಬಿಹಾರ ಚುನಾವಣಾ ಆಯೋಗದ ಮುಖ್ಯಸ್ಥ ಹೆಚ್. ಆರ್.ಶ್ರೀನಿವಾಸ್ ತಿಳಿಸಿದ್ದಾರೆ.

"ಜನ್ಮದಿನ ಶುಭಾಷಯ"ದ ಹಿಂದಿದೆಯಾ ರಾಜಕೀಯ ಲೆಕ್ಕಾಚಾರ?

ಮತಎಣಿಕೆ ಕೇಂದ್ರ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿರುತ್ತದೆ. ಇದರ ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮತಎಣಿಕೆ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ 59 ಕಂಪನಿಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿರುತ್ತದೆ ಎಂದು ಚುನಾವಣಾ ಆಯೋಗದ ಮುಖ್ಯಸ್ಥರು ತಿಳಿಸಿದ್ದಾರೆ.

Bihar Election Results 2020: 19 Companies Of Paramilitary Forces Guarding Strongrooms

38 ಜಿಲ್ಲೆಯ 55 ಕ್ಷೇತ್ರಗಳಲ್ಲಿ ಮತಎಣಿಕೆ ಕಾರ್ಯ:

ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ನಡದ ಚುನಾವಣೆಯಲ್ಲಿ 3755 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ರಾಜ್ಯದ 38 ಜಿಲ್ಲೆಗಳ 55 ಮತಎಣಿಕೆ ಕೇಂದ್ರಗಳಲ್ಲಿ ಮತಎಣಿಕೆ ನಡೆಸುವುದಕ್ಕೆ ಚುನಾವಣಾ ಆಯೋಗವು ಸಿದ್ಧತೆ ಮಾಡಿಕೊಂಡಿದೆ. ಪ್ರತಿಯೊಂದು ಮತಎಣಿಕೆ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮಾಡಲಿದ್ದು, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯು ಕಾನೂನು ಸುವ್ಯವಸ್ಥೆ ಮೇಲೆ ನಿಗಾ ವಹಿಸಿರುತ್ತಾರೆ. ಮತಎಣಿಕೆ ಪ್ರಕ್ರಿಯೆ ಆರಂಭದಲ್ಲಿ ಅಂಚೆ ಮತಗಳ ಎಣಿಕೆ ಕಾರ್ಯವನ್ನು ನಡೆಸಲಾಗುತ್ತದೆ. ಬೆಳಗ್ಗೆ 10 ಗಂಟೆಯ ನಂತರದಲ್ಲಿ 38 ಜಿಲ್ಲೆಗಳಲ್ಲಿನ 55 ಮತಎಣಿಕೆ ಕೇಂದ್ರಗಳಲ್ಲಿ ಇವಿಎಂ ಮತಗಳ ಎಣಿಕೆ ಕಾರ್ಯವು ಆರಂಭವಾಗಲಿದೆ.

2020ರ ವಿಧಾನಸಭಾ ಚುನಾವಣೆಗೆ ಈಗಾಗಲೇ ಮೂರು ಹಂತಗಳಲ್ಲಿ ಮತದಾನ ನಡೆದಿದೆ. ಅಕ್ಟೋಬರ್.28ರ ಮೊದಲ ಹಂತದಲ್ಲಿ ಶೇ.55.69ರಷ್ಟು ಮತದಾನ ನಡೆದಿದೆ. ನವೆಂಬರ್.03ರ ಎರಡನೇ ಹಂತದಲ್ಲಿ ಶೇ.53.51ರಷ್ಟು ಮತದಾನ ನಡೆದಿದೆ. ಶನಿವಾರ 3ನೇ ಹಂತದಲ್ಲಿ ಶೇ.51ರಷ್ಟು ಮತದಾನ ನಡೆದಿದೆ.

English summary
Bihar Election Results 2020: 19 Companies Of Paramilitary Forces Guarding Strongrooms.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X