ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರ ಫಲಿತಾಂಶಕ್ಕೆ ಪ್ರಧಾನಿ ಮೋದಿ ಕಾರಣ: ಸಂಸದ ತೇಜಸ್ವಿಸೂರ್ಯ

|
Google Oneindia Kannada News

ಪಾಟ್ನಾ, ನವೆಂಬರ್.10: ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶವು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತಕ್ಕೆ ಮತದಾರರೇ ನೀಡಿರುವ ಸಮರ್ಥನೆ ಎಂದು ಸಂಸದ ತೇಜಸ್ವಿ ಸೂರ್ಯ ಬಣ್ಣಿಸಿದ್ದಾರೆ.

ಭಾರತವು ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಸುಳಿಗೆ ಸಿಲುಕಿದ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಉತ್ತಮ ಕಾರ್ಯವೈಖರಿಯು ಬಡವರನ್ನು ರಕ್ಷಿಸಿದೆ. ಕೊರೊನಾವೈರಸ್ ಸಂದಿಗ್ಧ ಸ್ಥಿತಿಯಲ್ಲಿ ದೇಶವನ್ನು ಸಮರ್ಥವಾಗಿ ನಡೆಸಿಕೊಂಡು ಹೋಗಿದ್ದಕ್ಕಾಗಿ ಇಂದು ಮತದಾರರು ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪರವಾಗಿ ಮತ ಚಲಾಯಿಸಿದ್ದಾರೆ ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದಾರೆ.

Live Updates: ಬಿಹಾರದಲ್ಲಿ ಮಹಾಘಟಬಂಧನ್ ವಿರುದ್ಧ ಎನ್ ಡಿಎ ಮುನ್ನಡೆLive Updates: ಬಿಹಾರದಲ್ಲಿ ಮಹಾಘಟಬಂಧನ್ ವಿರುದ್ಧ ಎನ್ ಡಿಎ ಮುನ್ನಡೆ

ಬಿಹಾರದಲ್ಲಿ ಜನರು ಮತ್ತೊಮ್ಮೆ ಜಂಗಲ್ ರಾಜ್ ಸರ್ಕಾರವನ್ನು ಅಸ್ತಿತ್ವಕ್ಕೆ ತರಲು ಬಯಸುವುದಿಲ್ಲ. ಈ ನಿಟ್ಟಿನಲ್ಲಿ ಮತ ಚಲಾವಣೆ ಮಾಡಿರುವುದು ದೇಶದ ಹಿತದೃಷ್ಟಿಯಿಂದಲೂ ಉತ್ತಮ ಬೆಳವಣಿಗೆ ಆಗಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು ನಂಬಿರುವ ಬಿಹಾರದ ಪ್ರತಿಯೊಬ್ಬ ಮತದಾರರಿಗೂ ಧನ್ಯವಾದಗಳು ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದಾರೆ.

Bihar Election Results 2020: BJP’s Victory Is Vindication Of PM Modis Good Governance, SaysTejaswi Surya

ಏನ್ ಹೇಳುತ್ತೆ ಟ್ರೆಂಡ್:

ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಪೈಕಿ 9 ಕ್ಷೇತ್ರಗಳ ಚುನಾವಣಾ ಫಲಿತಾಂಶ ಪ್ರಕಟಿಸಲಾಗಿದೆ. ಬಿಜೆಪಿ 3, ಆರ್ ಜೆಡಿ 2, ಜೆಡಿಯು 2, ಕಾಂಗ್ರೆಸ್ 1 ಹಾಗೂ ವಿಕಾಸಶೀಲ ಇನ್ಸಾನ್ ಪಕ್ಷವು 1 ಕ್ಷೇತ್ರದಲ್ಲಿ ಗೆಲುವು ದಾಖಲಿಸಿದೆ ಎಂದು ಬಿಹಾರ ಚುನಾವಣಾ ಆಯೋಗವು ಮಾಹಿತಿ ನೀಡಿದೆ. ಬಿಹಾರದಲ್ಲಿ 9 ಕ್ಷೇತ್ರಗಳ ಸ್ಪಷ್ಟ ಚಿತ್ರಣ ಹೊರ ಬಿದ್ದಿದೆ. ಇದರ ಹೊರತಾಗಿ ಎನ್ ಡಿಎ ಮೈತ್ರಿಕೂಟವು 126 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮಹಾಘಟಬಂಧನ್ 107 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಎಐಎಂಐಎಂ 5 ಕಡೆಗಳಲ್ಲಿ ಮುನ್ನಡೆ ಕಂಡುಕೊಂಡಿದೆ. ಬಿಎಸ್ ಪಿ 2 ಹಾಗೂ ಪಕ್ಷೇತರ ಅಭ್ಯರ್ಥಿಗಳು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

English summary
Bihar Election Results 2020: BJP’s Victory Is Vindication Of PM Modi's Good Governance, SaysTejaswi Surya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X