ಬಿಹಾರದಲ್ಲಿ ಎನ್ ಡಿಎ ಮುನ್ನಡೆ: ಪಾಟ್ನಾದ ಬಿಜೆಪಿ ಕಚೇರಿಯಲ್ಲಿ ಸಂಭ್ರಮ

ಪಾಟ್ನಾ, ನವೆಂಬರ್.10: ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ ಸಮೀಕ್ಷೆಗಳೆಲ್ಲ ಉಲ್ಟಾ ಹೊಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಮಹಾಘಟಬಂಧನ್ ಮೈತ್ರಿಕೂಟದ ಎದುರಿಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಭರ್ಜರಿ ಮುನ್ನಡೆ ಸಾಧಿಸಿದೆ.

Recommended Video

      ಎಲ್ಲಾಕಡೆ ಅರಳಿದ ಕಮಲ!! | BJP | Oneindia Kannada

      ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ 127 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 73, ಜೆಡಿಯು 47, ವಿಐಪಿ 7 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಪಾಟ್ನಾದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.

      ಮಹಾಘಟಬಂಧನ್ 100 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆರ್ ಜೆಡಿ 61, ಕಾಂಗ್ರೆಸ್ 20, ಎಡಪಕ್ಷ 19, ಬಿಎಸ್ ಪಿ 1, ಎಐಎಂಐಎಂ 2, ಎಲ್ ಜೆಪಿ 5, ಪಕ್ಷೇತರರು 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಬಗ್ಗೆ ಬಿಹಾರ ಚುನಾವಣಾ ಆಯೋಗದಿಂದ ಮಾಹಿತಿ ನೀಡಿದೆ.

      Bihar Election Results 2020: BJP Workers Will Start Celebration In Patna Party Office


      ಆರಂಭಿಕ ಹಂತದಲ್ಲಿ ಮಹಾಘಟಬಂಧನ್ ಮುನ್ನಡೆ:

      ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಚುನಾವಣಾ ಮತಎಣಿಕೆಯ ಆರಂಭಿಕ ಹಂತದಲ್ಲಿ ಮಹಾಘಟಬಂಧನ್ ಮೈತ್ರಿಕೂಟವೇ ಮುನ್ನಡೆ ಸಾಧಿಸಿತ್ತು. ಅಂಚೆ ಮತಪತ್ರಗಳ ಎಣಿಕೆಯಲ್ಲಿ ಎನ್ ಡಿಎ ಮೈತ್ರಿಕೂಟವು ತೀವ್ರ ಹಿನ್ನಡೆ ಅನುಭವಿಸಿತ್ತು. ಬದಲಾದ ರಾಜಕೀಯ ಚಿತ್ರಣದಲ್ಲಿ ಇವಿಎಂ ಮತಗಳ ಎಣಿಕೆ ಆರಂಭವಾಗುತ್ತಿದ್ದಂತೆ ಫಲಿತಾಂಶದ ಚಹರೆ ಬದಲಾಗಿದೆ. ಮಹಾಘಟಬಂಧನ್ ಎದುರು ಎನ್ ಡಿಎ ಮೈತ್ರಿಕೂಟವು ಭರ್ಜರಿ ಮುನ್ನಡೆ ಸಾಧಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+