ಬಿಹಾರ ಅಂಚೆ ಮತಗಳ ಎಣಿಕೆಯಲ್ಲಿ ಮಹಾಘಟಬಂಧನ್ ಮುನ್ನಡೆ

ಪಾಟ್ನಾ, ನವೆಂಬರ್.10: ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಮತಎಣಿಕೆ ಕಾರ್ಯ ಆರಂಭವಾಗಿದೆ. ಬೆಳಗ್ಗೆ 8 ಗಂಟೆಗೆ ಮೊದಲ ಹಂತದಲ್ಲಿ ಅಂಚೆ ಮತಪತ್ರಗಳ ಎಣಿಕೆ ನಡೆಸಲಾಗಿದ್ದು, ಆರಂಭಿಕ ಹಂತದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಮೈತ್ರಿಕೂಟಕ್ಕಿಂತ ಮಹಾಘಟಬಂದನ್ ಮುನ್ನಡೆ ಸಾಧಿಸಿದೆ.

Recommended Video

      ಎಲ್ಲಾಕಡೆ ಅರಳಿದ ಕಮಲ!! | BJP | Oneindia Kannada

      ಅಂಚೆ ಮತಪತ್ರಗಳ ಎಣಿಕೆಯಲ್ಲಿ ಆರ್ ಜೆಡಿ ಮತ್ತು ಕಾಂಗ್ರೆಸ್ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. 78 ವಿಧಾನಸಭಾ ಕ್ಷೇತ್ರಗಳಲ್ಲಿ ಮಹಾಘಟಬಂಧನ್ ಮುನ್ನಡೆ ಸಾಧಿಸಿದ್ದರೆ, ಎನ್ ಡಿಎ ಮೈತ್ರಿಕೂಟವು 74 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬೆಳಗ್ಗೆ 10 ಗಂಟೆಯ ನಂತರದಲ್ಲಿ ಇವಿಎಂ ಮತಯಂತ್ರಗಳಲ್ಲಿನ ಮತಗಳ ಎಣಿಕೆ ಕಾರ್ಯವು ಆರಂಭವಾಗಲಿದೆ.

      ರಾಜ್ಯದ 38 ಜಿಲ್ಲೆಗಳ 55 ಕಡೆಗಳಲ್ಲಿ ಸರ್ಕಾರಿ ಕಚೇರಿಗಳು, ಸರ್ಕಾರಿ ಶಾಲೆ ಮತ್ತು ಖಾಸಗಿ ಶಾಲೆಗಳು ಮತ್ತು ಪಂಚಾಯತ್ ಕಚೇರಿಗಳಲ್ಲಿ ಮತಎಣಿಕೆ ಕಾರ್ಯ ನಡೆಸಲಾಗುತ್ತಿದೆ. ಮತಎಣಿಕೆ ಕೇಂದ್ರ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿರುತ್ತದೆ. ಇದರ ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮತಎಣಿಕೆ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ 59 ಕಂಪನಿಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿರುತ್ತದೆ.

      Bihar Election Results 2020: Mahaghatabandhan Lead In Postal Ballots Counting


      38 ಜಿಲ್ಲೆಯ 55 ಕ್ಷೇತ್ರಗಳಲ್ಲಿ ಮತಎಣಿಕೆ ಕಾರ್ಯ:

      ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ನಡದ ಚುನಾವಣೆಯಲ್ಲಿ 3755 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಪ್ರತಿಯೊಂದು ಮತಎಣಿಕೆ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮಾಡಲಿದ್ದು, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯು ಕಾನೂನು ಸುವ್ಯವಸ್ಥೆ ಮೇಲೆ ನಿಗಾ ವಹಿಸಿದ್ದಾರೆ.

      2020ರ ವಿಧಾನಸಭಾ ಚುನಾವಣೆಗೆ ಈಗಾಗಲೇ ಮೂರು ಹಂತಗಳಲ್ಲಿ ಮತದಾನ ನಡೆದಿದೆ. ಅಕ್ಟೋಬರ್.28ರ ಮೊದಲ ಹಂತದಲ್ಲಿ ಶೇ.55.69ರಷ್ಟು ಮತದಾನ ನಡೆದಿದೆ. ನವೆಂಬರ್.03ರ ಎರಡನೇ ಹಂತದಲ್ಲಿ ಶೇ.53.51ರಷ್ಟು ಮತದಾನ ನಡೆದಿದೆ. ಶನಿವಾರ 3ನೇ ಹಂತದಲ್ಲಿ ಶೇ.51ರಷ್ಟು ಮತದಾನ ನಡೆದಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+