ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರ ರಚನೆ ಖಚಿತ: ಆರ್‌ಜೆಡಿ
ಪಾಟ್ನಾ, ನವೆಂಬರ್ 10: ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ಈಗಾಗಲೇ ಶೇ.80 ರಷ್ಟು ಮತಗಳ ಎಣಿಕೆ ಪ್ರಕ್ರಿಯೆ ಮುಗಿದಿದೆ. ಎನ್‌ಡಿಎ ಹಾಗೂ ಮಹಾಘಟಬಂಧನ್ ನಡುವೆ ತೀವ್ರ ಪೈಪೋಟಿಯು ನಡೆಯುತ್ತಿದೆ.
Recommended Video
ಬಿಹಾರದ ಹಲವು ಕ್ಷೇತ್ರಗಳಲ್ಲಿ ನೆಕ್ ಟು ನೆಕ್ ಫೈಟ್ ನಡೆಯುತ್ತಿದ್ದು, ಅತ್ಯಂತ ಕಡಿಮೆ ಮತಗಳ ಅಂತರದೊಂದಿಗೆ ಹಲವು ಸ್ಥಾನಗಳಲ್ಲಿ ಗೆಲುವಿನ ಹಾವು-ಏಣಿ ಆಟ ಮುಂದುವರೆದಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಹಾರದ ಆರ್‌ಜೆಡಿ, ""ನಾವು ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಮತ್ತು ಎಲ್ಲಾ ಜಿಲ್ಲೆಗಳಿಂದ ಪಡೆದ ಮಾಹಿತಿಯು ನಮ್ಮ ಪರವಾಗಿದೆ'' ಎಂದು ಹೇಳಿದೆ.

ತಡರಾತ್ರಿಯವರೆಗೂ ಎಣಿಕೆ ಕಾರ್ಯ ನಡೆಯಲಿದ್ದು, ಮಹಾಘಟಬಂಧನ್ ಸರ್ಕಾರ ರಚನೆ ಖಚಿತವಾಗಿದೆ. ಬಿಹಾರ ಈಗ ಬದಲಾಗಿದೆ. ಮತಗಳ ಎಣಿಕೆ ಪೂರ್ಣಗೊಳ್ಳುವವರೆಗೆ ಎಲ್ಲಾ ಅಭ್ಯರ್ಥಿಗಳು ಮತ್ತು ಎಣಿಕೆಯ ಏಜೆಂಟ್‌ಗಳು ಎಣಿಕೆಯ ಸಭಾಂಗಣದಲ್ಲಿಯೇ ಇರುತ್ತಾರೆ ಎಂದು ತಿಳಿಸಿದೆ.
ಫಲಿತಾಂಶಗಳ ಎಣಿಕೆಯಲ್ಲಿ ಫೌಲ್ ಪ್ಲೇ ನಡೆಯುತ್ತಿದೆ. ನಾವು ಗೆದ್ದ ಸ್ಥಾನಗಳೇ ಹಲವು ಸ್ಥಾನಗಳಲ್ಲಿ ಮರುಕಳಿಸಬಹುದು ಎಂದು ಆರ್‌ಜೆಡಿ ನಾಯಕ ಮನೋಜ್ ಝಾ ಹೇಳಿದ್ದಾರೆ.
हम सभी क्षेत्रों के उम्मीदवारों और कार्यकर्ताओं से संपर्क में है और सभी जिलों से प्राप्त सूचना हमारे पक्ष में है। देर रात तक गणना होगी। महागठबंधन की सरकार सुनिश्चित है। बिहार ने बदलाव कर दिया है। सभी प्रत्याशी और काउंटिंग एजेंट मतगणना पूरी होने तक काउंटिंग हॉल में बने रहें।
— Rashtriya Janata Dal (@RJDforIndia) November 10, 2020
ಸದ್ಯದ ಚುನಾವಣಾ ಆಯೋಗದ ಟ್ರೆಂಡ್ ಪ್ರಕಾರ, ಬಿಜೆಪಿ 28 ಸ್ಥಾನಗಳಲ್ಲಿ ಜಯಿಸಿದ್ದರೆ, ಆರ್‌ಜೆಡಿ-25 ಸ್ಥಾನಗಳಲ್ಲಿ ಗೆಲುವಿನ ನಗೆ ಬೀರಿದೆ. ಇನ್ನು ಜೆಡಿ(ಯು) -17 ಸ್ಥಾನ ಗೆದ್ದಿದ್ದರೆ, ಕಾಂಗ್ರೆಸ್- 7 ಸ್ಥಾನಗಳಲ್ಲಿ ಜಯಿಸಿದೆ,
ಅದೇ ರೀತಿ ಎಡಪಕ್ಷಗಳಾದ ಸಿಪಿಐ(ಎಂಎಲ್) - 6 ಸ್ಥಾನ, ವಿಐಪಿ-2, ಎಐಎಂಐಎಂ-2, ಮತ್ತು ಸಿಪಿಐ, ಸಿಪಿಐ (ಎಂ), ಎಚ್‌ಎಎಂ (ಎಸ್) ಮತ್ತು ಸ್ವತಂತ್ರ 1 ಸ್ಥಾನದಲ್ಲಿ ಗೆದ್ದಿದ್ದಾರೆ. ಒಟ್ಟಾರೆ ಫಲಿತಾಂಶ ರಾತ್ರಿ ಗಂಟೆಯ ನಂತರ ಪ್ರಕಟವಾಗಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications