ಬಿಹಾರದಲ್ಲಿ ಮತ್ತೆ ನಿತೀಶ್ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ:ಜೆಡಿಯು

ಪಾಟ್ನಾ, ನವೆಂಬರ್ 10: ಬಿಹಾರದಲ್ಲಿ ಮತ ಎಣಿಕೆ ಕಾರ್ಯ ಅರ್ಧದಷ್ಟು ಮುಗಿದಿದೆ. ಎನ್‌ಡಿಎ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. ಮುಖ್ಯಮಂತ್ರಿ ನಿತೀಶ್‌ಕುಮಾರ್‌ ನೇತೃತ್ವದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಜೆಡಿಯು ರಾಜ್ಯ ಘಟಕದ ಮುಖ್ಯಸ್ಥ ವಸಿಷ್ಠ ನಾರಾಯಣ್‌ ಸಿಂಗ್‌ ಹೇಳಿದ್ದಾರೆ.

Recommended Video

      BiharElectionResult : ತಮ್ಮನ ಪರವಾಗಿ ಟ್ವೀಟ್ ಮಾಡಿದ ತೇಜ್ | Oneindia Kannada

      ಚುನಾವಣಾ ಫಲಿತಾಂಶದ ಟ್ರೆಂಡ್ ನೋಡಿ ಮಾತನಾಡಿದ ಅವರು 'ಇದನ್ನು ನಾನು ಬಹಳ ದಿನಗಳಿಂದಲೂ ಹೇಳುತ್ತಿದ್ದೇನೆ. ರಾಜ್ಯದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ವಿರೋಧಪಕ್ಷಗಳು ಮತದಾರರನ್ನು ಓಲೈಸಲು ಪ್ರಚಾರ ಕಾರ್ಯವನ್ನು ದಾರಿ ತಪ್ಪಿಸಿದವು ಅಷ್ಟೆ' ಎಂದು ಹೇಳಿದರು.
      ಮಧ್ಯಾಹ್ನ 2.30ಕ್ಕೆ ಲಭ್ಯವಿದ್ದ ಮಾಹಿತಿ ಪ್ರಕಾರ ಎನ್‌ಡಿಎ 131 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು.ಮಹಾಘಟಬಂಧನ್ 101. ಈ ಪೈಕಿ ಬಿಜೆಪಿ 73, ಜೆಡಿಯು48, ಎಲ್‌ಜೆಪಿ 2, ಆರ್‌ಜೆಡಿ 67, ಕಾಂಗ್ರೆಸ್ 19, ಸಿಪಿಐ(ಎಂಎಲ್) 11, ಎಲ್‌ಜೆಪಿ 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು.

      ಸರ್ಕಾರವನ್ನು ಮುನ್ನಡೆಸುವುದು ಬಿಜೆಪಿಯೋ ಅಥವಾ ಜೆಡಿಯು ಪಕ್ಷವೋ ಎಂದು ಕೇಳಿದ್ದಕ್ಕೆ ಸರ್ಕಾರವನ್ನು ಯಾರು ಮುನ್ನಡೆಸಬೇಕೆಂಬ ಬಗ್ಗೆ ಪ್ರಧಾನಮಂತ್ರಿ ಮೋದಿ, ಗೃಹ ಸಚಿವ ಅಮಿತ್‌ಶಾ ಮತ್ತು ಬಿಜೆಪಿ ಅಧ್ಯಕ್ಷ ನಡ್ಡಾ ಈ ಹಿಂದೆಯೇ ಸ್ಪಷ್ಟಪಡಿಸಿದ್ದಾರೆ ಎಂದರು.

      Bihar Election Results 2020: NDA Will Again Form Govt Under Nitish

      ರಾಜ್ಯದಲ್ಲಿ ಎನ್‌ಡಿಎ ಜಯ ಸಾಧಿಸಿದರೆ ನಿತೀಶ್‌ಕುಮಾರ್‌ ಅವರೇ ಸರ್ಕಾರ ಮುನ್ನಡೆಸುವರು ಎಂದು ಮೂವರೂ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿಸಿದರು. 126 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 73 ಜೆಡಿಯು 47 ಮತ್ತು ವಿಐಪಿ ಆರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+