ಬಿಹಾರದಲ್ಲಿ ಮತ್ತೆ ಅಧಿಕಾರಕ್ಕೆ ಎನ್‌ಡಿಎ
ಪಟ್ನಾ, ನವೆಂಬರ್ 11:ಸುದೀರ್ಘ ಸಮಯದವರೆಗೆ ನಡೆದ ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕೊನೆಗೂ ಮುಕ್ತಾಯವಾಗಿದ್ದು, ಜೆಡಿಯು-ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮ್ಯಾಜಿಕ್ ಸಂಖ್ಯೆಯ ಗಡಿ ದಾಟುವ ಮೂಲಕ ಮತ್ತೊಮ್ಮೆ ಸರ್ಕಾರ ರಚಿಸುವ ಅವಕಾಶ ಪಡೆದಿದೆ.
ಆಡಳಿತಾರೂಢ ಎನ್‌ಡಿಎ ವಿರುದ್ಧದ ಅಲೆ, ನಿರುದ್ಯೋಗದ ಸಮಸ್ಯೆ ಮುಂತಾದವು ಜೆಡಿಯು-ಬಿಜೆಪಿ ಮೈತ್ರಿಕೂಟಕ್ಕೆ ಮುಳುವಾಗಲಿದೆ ಎಂದು ನಂಬಲಾಗಿತ್ತು. ಆದರೆ ಮತದಾರರು ಎನ್‌ಡಿಎಗೆ ಮತ್ತೊಂದು ಅವಕಾಶ ನೀಡಿದ್ದಾರೆ. ಈ ಮೂಲಕ ಬಿಹಾರದಲ್ಲಿ ಅಧಿಕಾರಕ್ಕೇರುವ ತೇಜಸ್ವಿ ಯಾದವ್ ನೇತೃತ್ವದ ಮಹಾ ಘಟಬಂಧನದ ಕನಸು ನುಚ್ಚುನೂರಾಗಿದೆ.
ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ 74, ಜೆಡಿಯು 43, ಎಚ್‌ಎಎಂ-ಎಸ್ 4, ವಿಐಪಿ 4 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ 125 ಸೀಟುಗಳಲ್ಲಿ ಗೆಲುವು ಸಾಧಿಸಿ ವಿಜಯದ ನಗೆ ಬೀರಿದೆ. ಇನ್ನೊಂದೆಡೆ ಅದಕ್ಕೆ ತೀವ್ರ ಪೈಪೋಟಿ ನೀಡಿದ ಆರ್‌ಜೆಡಿ 75 ಸೀಟುಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ 19, ಸಿಪಿಐ ಎಂಎಲ್ಎಲ್ 12, ಸಿಪಿಐ 2, ಸಿಪಿಐ ಎಂ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಮಹಾಘಟಬಂಧನ ಮೈತ್ರಿಕೂಟವು 110 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ.
ಎಐಎಂಐಎಂ 5 ಕ್ಷೇತ್ರಗಳಲ್ಲಿ, ಬಿಎಸ್‌ಪಿ, ಎಲ್‌ಜೆಪಿ ಮತ್ತು ಪಕ್ಷೇತರರು ತಲಾ ಒಂದು ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ.

ಬಿಹಾರದ 243 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಮಂಗಳವಾರ ಬೆಳಿಗ್ಗೆ ಆರಂಭವಾದ ಮತ ಎಣಿಕೆ ತೀರಾ ನಿಧಾನಗತಿಯಲ್ಲಿ ಸಾಗಿದ್ದರಿಂದ ಅಂತಿಮ ಫಲಿತಾಂಶ ಹೊರಬೀಳುವುದು ವಿಳಂಬವಾಗಿದೆ. ಕೊರೊನಾ ವೈರಸ್ ಸೋಂಕಿನ ಕಾರಣದಿಂದ ಹೆಚ್ಚಿನ ಮುಂಜಾಗರೂಕತಾ ಕ್ರಮಗಳೊಂದಿಗೆ ಮತ ಎಣಿಕೆ ನಡೆಸಲಾಗಿತ್ತು. ಹೀಗಾಗಿ ಫಲಿತಾಂಶ ಪ್ರಕಟ ತಡವಾಗಿದೆ. ಸಾಮಾನ್ಯವಾಗಿ ಸಂಜೆಯ ವೇಳೆಗೆ ಸ್ಪಷ್ಟ ಚಿತ್ರಣ ದೊರಕುತ್ತಿತ್ತು. ಆದರೆ ಈ ಬಾರಿ ಫಲಿತಾಂಶ ಪ್ರಕಟವಾಗುವುದು ತಡರಾತ್ರಿಯಾಗಿರುವುದು ವಿಶೇಷ.
ಈ ಗೆಲುವಿನೊಂದಿಗೆ ನಿತೀಶ್ ಕುಮಾರ್ ಐದನೇ ಬಾರಿಗೆ ಅಧಿಕಾರಕ್ಕೆ ಏರಲು ವೇದಿಕೆ ಸಿದ್ಧವಾಗಿದೆ. ಸರ್ಕಾರ ರಚಿಸಲು 122 ಸೀಟುಗಳ ಅಗತ್ಯವಿದ್ದು, ಎನ್‌ಡಿಎ ಮೈತ್ರಿಕೂಟ ಮೂರು ಹೆಚ್ಚುವರಿ ಸೀಟುಗಳನ್ನು ಪಡೆದುಕೊಂಡಿದೆ. ನಿತೀಶ್ ಕುಮಾರ್ ಅವರೇ ತಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ ಮುಂಚಿನಿಂದಲೂ ಪ್ರತಿಪಾದಿಸಿಕೊಂಡು ಬಂದಿದೆ. ಅದೇ ರೀತಿ ನಡೆದರೆ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಸರ್ಕಾರ ರಚಿಸಲಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications