ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರದಲ್ಲಿ ಮತ್ತೆ ಅಧಿಕಾರಕ್ಕೆ ಎನ್‌ಡಿಎ

|
Google Oneindia Kannada News

ಪಟ್ನಾ, ನವೆಂಬರ್ 11:ಸುದೀರ್ಘ ಸಮಯದವರೆಗೆ ನಡೆದ ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕೊನೆಗೂ ಮುಕ್ತಾಯವಾಗಿದ್ದು, ಜೆಡಿಯು-ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮ್ಯಾಜಿಕ್ ಸಂಖ್ಯೆಯ ಗಡಿ ದಾಟುವ ಮೂಲಕ ಮತ್ತೊಮ್ಮೆ ಸರ್ಕಾರ ರಚಿಸುವ ಅವಕಾಶ ಪಡೆದಿದೆ.

ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ: ಇಲ್ಲಿದೆ ಕ್ಷಣಕ್ಷಣದ ಮಾಹಿತಿಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ: ಇಲ್ಲಿದೆ ಕ್ಷಣಕ್ಷಣದ ಮಾಹಿತಿ

ಆಡಳಿತಾರೂಢ ಎನ್‌ಡಿಎ ವಿರುದ್ಧದ ಅಲೆ, ನಿರುದ್ಯೋಗದ ಸಮಸ್ಯೆ ಮುಂತಾದವು ಜೆಡಿಯು-ಬಿಜೆಪಿ ಮೈತ್ರಿಕೂಟಕ್ಕೆ ಮುಳುವಾಗಲಿದೆ ಎಂದು ನಂಬಲಾಗಿತ್ತು. ಆದರೆ ಮತದಾರರು ಎನ್‌ಡಿಎಗೆ ಮತ್ತೊಂದು ಅವಕಾಶ ನೀಡಿದ್ದಾರೆ. ಈ ಮೂಲಕ ಬಿಹಾರದಲ್ಲಿ ಅಧಿಕಾರಕ್ಕೇರುವ ತೇಜಸ್ವಿ ಯಾದವ್ ನೇತೃತ್ವದ ಮಹಾ ಘಟಬಂಧನದ ಕನಸು ನುಚ್ಚುನೂರಾಗಿದೆ.

ಜಗತ್ತಿಗೆ ಪ್ರಜಾಪ್ರಭುತ್ವದ ಪಾಠ ಮಾಡಿದ ಬಿಹಾರದ ಜನತೆ: ಪ್ರಧಾನಿ ಮೋದಿಜಗತ್ತಿಗೆ ಪ್ರಜಾಪ್ರಭುತ್ವದ ಪಾಠ ಮಾಡಿದ ಬಿಹಾರದ ಜನತೆ: ಪ್ರಧಾನಿ ಮೋದಿ

ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ 74, ಜೆಡಿಯು 43, ಎಚ್‌ಎಎಂ-ಎಸ್ 4, ವಿಐಪಿ 4 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ 125 ಸೀಟುಗಳಲ್ಲಿ ಗೆಲುವು ಸಾಧಿಸಿ ವಿಜಯದ ನಗೆ ಬೀರಿದೆ. ಇನ್ನೊಂದೆಡೆ ಅದಕ್ಕೆ ತೀವ್ರ ಪೈಪೋಟಿ ನೀಡಿದ ಆರ್‌ಜೆಡಿ 75 ಸೀಟುಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ 19, ಸಿಪಿಐ ಎಂಎಲ್ಎಲ್ 12, ಸಿಪಿಐ 2, ಸಿಪಿಐ ಎಂ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಮಹಾಘಟಬಂಧನ ಮೈತ್ರಿಕೂಟವು 110 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ.

ಎಐಎಂಐಎಂ 5 ಕ್ಷೇತ್ರಗಳಲ್ಲಿ, ಬಿಎಸ್‌ಪಿ, ಎಲ್‌ಜೆಪಿ ಮತ್ತು ಪಕ್ಷೇತರರು ತಲಾ ಒಂದು ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆ.

NDA Wins Battle To Form Goverment

ಬಿಹಾರದ 243 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಮಂಗಳವಾರ ಬೆಳಿಗ್ಗೆ ಆರಂಭವಾದ ಮತ ಎಣಿಕೆ ತೀರಾ ನಿಧಾನಗತಿಯಲ್ಲಿ ಸಾಗಿದ್ದರಿಂದ ಅಂತಿಮ ಫಲಿತಾಂಶ ಹೊರಬೀಳುವುದು ವಿಳಂಬವಾಗಿದೆ. ಕೊರೊನಾ ವೈರಸ್ ಸೋಂಕಿನ ಕಾರಣದಿಂದ ಹೆಚ್ಚಿನ ಮುಂಜಾಗರೂಕತಾ ಕ್ರಮಗಳೊಂದಿಗೆ ಮತ ಎಣಿಕೆ ನಡೆಸಲಾಗಿತ್ತು. ಹೀಗಾಗಿ ಫಲಿತಾಂಶ ಪ್ರಕಟ ತಡವಾಗಿದೆ. ಸಾಮಾನ್ಯವಾಗಿ ಸಂಜೆಯ ವೇಳೆಗೆ ಸ್ಪಷ್ಟ ಚಿತ್ರಣ ದೊರಕುತ್ತಿತ್ತು. ಆದರೆ ಈ ಬಾರಿ ಫಲಿತಾಂಶ ಪ್ರಕಟವಾಗುವುದು ತಡರಾತ್ರಿಯಾಗಿರುವುದು ವಿಶೇಷ.

ಪಾಸ್ವಾನ್ ಪದಾರ್ಪಣೆಯ ಕ್ಷೇತ್ರದಲ್ಲಿಯೇ ಎಲ್‌ಜೆಪಿ ಕಳಪೆ ಸಾಧನೆಪಾಸ್ವಾನ್ ಪದಾರ್ಪಣೆಯ ಕ್ಷೇತ್ರದಲ್ಲಿಯೇ ಎಲ್‌ಜೆಪಿ ಕಳಪೆ ಸಾಧನೆ

Recommended Video

ಕುಷನ್ ಸೋಫಾ ಹಾಗೆ ಮಾತಾಡಸತ್ತೆ!! | DK Ravi Mother | Oneindia Kannada

ಈ ಗೆಲುವಿನೊಂದಿಗೆ ನಿತೀಶ್ ಕುಮಾರ್ ಐದನೇ ಬಾರಿಗೆ ಅಧಿಕಾರಕ್ಕೆ ಏರಲು ವೇದಿಕೆ ಸಿದ್ಧವಾಗಿದೆ. ಸರ್ಕಾರ ರಚಿಸಲು 122 ಸೀಟುಗಳ ಅಗತ್ಯವಿದ್ದು, ಎನ್‌ಡಿಎ ಮೈತ್ರಿಕೂಟ ಮೂರು ಹೆಚ್ಚುವರಿ ಸೀಟುಗಳನ್ನು ಪಡೆದುಕೊಂಡಿದೆ. ನಿತೀಶ್ ಕುಮಾರ್ ಅವರೇ ತಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ ಮುಂಚಿನಿಂದಲೂ ಪ್ರತಿಪಾದಿಸಿಕೊಂಡು ಬಂದಿದೆ. ಅದೇ ರೀತಿ ನಡೆದರೆ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಸರ್ಕಾರ ರಚಿಸಲಿದೆ.

English summary
Bihar Assembly Election Results 2020 Updates in Kannada: Election commission has announced that NDA has won the clear majority of seats.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X