ರೋಗ, ಸಾವಿನ ಭೀತಿಯನ್ನು ಮಾರುತ್ತಿರುವ ಬಿಜೆಪಿ: ಉಚಿತ ಲಸಿಕೆ ಭರವಸೆಗೆ ತೇಜಸ್ವಿ ಕಿಡಿ

ಪಟ್ನಾ, ಅಕ್ಟೋಬರ್ 22: ಬಿಹಾರದ ಪ್ರತಿಯೊಬ್ಬರಿಗೂ ಉಚಿತವಾಗಿ ಕೋವಿಡ್ ಲಸಿಕೆಯನ್ನು ಒದಗಿಸುವುದಾಗಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ನೀಡಿರುವ ಭರವಸೆಯನ್ನು ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಟೀಕಿಸಿದ್ದಾರೆ. ಲಸಿಕೆಯು ಇಡೀ ಭಾರತಕ್ಕೆ ಸೇರಿದ್ದೇ ಹೊರತು ಬಿಜೆಪಿಗೆ ಅಲ್ಲ ಎಂದು ಕಿಡಿಕಾರಿದ್ದಾರೆ.

'ಲಸಿಕೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ಅವರಿಗೆ ರೋಗ ಹಾಗೂ ಸಾವಿನ ಕುರಿತಾದ ಭೀತಿಯನ್ನು ಮಾರಾಟ ಮಾಡುವುದರ ಹೊರತಾಗಿ ಬೇರೆ ಆಯ್ಕೆ ಇಲ್ಲ ಎಂಬುದನ್ನು ತೋರಿಸುತ್ತದೆ. ಬಿಹಾರಿಗಳು ಆತ್ಮಗೌರವ ಉಳ್ಳವರು. ಸಣ್ಣ ಮೊತ್ತದ ಹಣಕ್ಕಾಗಿ ಅವರು ತಮ್ಮ ಮಕ್ಕಳ ಭವಿಷ್ಯವನ್ನು ಮಾರಾಟ ಮಾಡುವುದಿಲ್ಲ' ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಗುರುವಾರ ಬಿಹಾರ ವಿಧಾನಸಭೆ ಚುನಾವಣೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿ, ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬರಿಗೂ ಉಚಿತವಾಗಿ ಕೊರೊನಾ ವೈರಸ್ ಲಸಿಕೆ ಪೂರೈಸುವುದಾಗಿ ಹೇಳಿದೆ. ಜತೆಗೆ ಬಿಹಾರದ ಜನೆತೆಗೆ 19 ಲಕ್ಷ ಉದ್ಯೋಗ ಒದಗಿಸುವುದಾಗಿ ಭರವಸೆ ನೀಡಿದೆ.

Bihar Election: Tejashwi Yadav Slams BJP For Poll Promise Of Free Covid-19 Vaccine

'ಕೋವಿಡ್ 19 ಲಸಿಕೆ ದೊಡ್ಡ ಪ್ರಮಾಣದಲ್ಲಿ ಉತ್ಪಾದನೆಗೆ ಸಿಗುತ್ತಿದ್ದಂತೆಯೇ ಬಿಹಾರದ ಪ್ರತಿ ವ್ಯಕ್ತಿಯೂ ಉಚಿತವಾಗಿ ಲಸಿಕೆ ಪಡೆದುಕೊಳ್ಳಲಿದ್ದಾರೆ. ಇದು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಮಾಡಿರುವ ಮೊದಲ ಭರವಸೆ' ಎಂದು ಪ್ರಣಾಳಿಕೆ ಬಿಡುಗಡೆ ಮಾಡಿದ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+