ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರದಲ್ಲಿ ಎನ್ ಡಿಎ ಮೈತ್ರಿಕೂಟದ ಪ್ರಣಾಳಿಕೆ ಬಿಡುಗಡೆಗೆ ದಿನಾಂಕ ಫಿಕ್ಸ್

|
Google Oneindia Kannada News

ಪಾಟ್ನಾ, ಅಕ್ಟೋಬರ್.21: ಬಿಹಾರದಲ್ಲಿ ಮತ್ತೊಮ್ಮೆ ಅಧಿಕಾರ ಸ್ಥಾಪಿಸುವುದಕ್ಕೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ತಂತ್ರಗಾರಿಕೆ ಹೆಣೆದಿದೆ. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ ಬೆನ್ನಲ್ಲೇ ಬಿಜೆಪಿ ತನ್ನ ಪಕ್ಷದ ಚುನಾವಣಾ ಪ್ರಣಾಳಿಕೆಗೆ ದಿನಾಂಕ ಫಿಕ್ಸ್ ಮಾಡಿದೆ.

ಪಾಟ್ನಾದಲ್ಲಿ ಅಕ್ಟೋಬರ್.22ರ ಗುರುವಾರವೇ ಬಿಹಾರ ವಿಧಾನಸಭಾ ಚುನಾವಣೆಗೆ ಎನ್ ಡಿಎ ಮೈತ್ರಿಕೂಟದ ಪ್ರಣಾಳಿಕೆ ಬಿಡುಗಡೆಯಾಗಲಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಸಿಎಂ ನಿತೀಶ್ ಕುಮಾರ್ ಎದುರಲ್ಲೇ ಲಾಲೂ ಜಿಂದಾಬಾದ್ ಘೋಷಣೆ! ಸಿಎಂ ನಿತೀಶ್ ಕುಮಾರ್ ಎದುರಲ್ಲೇ ಲಾಲೂ ಜಿಂದಾಬಾದ್ ಘೋಷಣೆ!

ಬಿಹಾರ ಚುನಾವಣೆಗೆ ಈಗಾಗಲೇ ಮಹಾಘಟಬಂಧನ್ ಮೈತ್ರಿಕೂಟವು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ರಾಜ್ಯದ ಕಾರ್ಮಿಕರಿಗೆ ಬಿಹಾರದಲ್ಲೇ ಉದ್ಯೋಗ ಸೃಷ್ಟಿಸುವುದಾಗಿ ಕಾಂಗ್ರೆಸ್ ಆಶ್ವಾಸನೆ ನೀಡಿದೆ. ರಾಜ್ಯದ ಕಾರ್ಮಿಕರಿಗೆ ಬಿಹಾರದಲ್ಲೇ ಉದ್ಯೋಗ ಸೃಷ್ಟಿಸುವುದಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ.

Bihar Election: Union Minister Nirmala Seetaraman Will Release BJP Manifesto

ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಸಹಾಯಧನ:

ಬಿಹಾರದಲ್ಲಿ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 1500 ರೂಪಾಯಿ ಸಹಾಯ ಧನವನ್ನು ನೀಡಲಾಗುತ್ತದೆ. ಇದರ ಜೊತೆಗೆ ಪಂಜಾಬ್ ಸರ್ಕಾರದ ಮಾದರಿಯಲ್ಲೇ ಬಿಹಾರದಲ್ಲೂ ಪ್ರತ್ಯೇಕವಾಗಿ ರೈತ ಕಾನೂನು ತಿದ್ದುಪಡಿ ಮಾಡಲಾಗುತ್ತದೆ ಎಂದು ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿಕೊಂಡಿದೆ.

ಪ್ರತಿ ತಿಂಗಳು 800 ರೂಪಾಯಿ ವೃದ್ಧಾಪ್ಯ ವೇತನ ಮತ್ತು ವಿಧವಾ ವೇತನವನ್ನು ನೀಡಲಾಗುತ್ತದೆ. ಇದರ ಜೊತೆಗೆ 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಪ್ರತಿ ತಿಂಗಳು 1000 ರೂಪಾಯಿ ಸಹಾಯ ಧನವನ್ನು ನೀಡಲಾಗುತ್ತದೆ. ರೈತರ ಕೃಷಿಗೆ ನೆರವಾಗುವಂತೆ ಉಚಿತವಾಗಿ ವಿದ್ಯುತ್ ಒದಗಿಸಲಾಗುತ್ತದೆ ಎಂದು ಪ್ರಣಾಳಿಕೆಯಲ್ಲಿ ಹೇಳಲಾಗಿದೆ.

ಬಿಹಾರದ ರೈತರಿಗೆ ಸಾಲಮನ್ನಾ ಬಗ್ಗೆ ಭರವಸೆ:

ಬಿಹಾರದಲ್ಲಿ ಮಹಾಘಟಬಂಧನ್ ಮೈತ್ರಿಕೂಟದ ಸರ್ಕಾರವು ಅಧಿಕಾರಕ್ಕೆ ಬಂದಲ್ಲಿ ರೈತರ ಸಾಲಮನ್ನಾ ಮಾಡಲಾಗುತ್ತದೆ. ಕೃಷಿಗೆ ಅಗತ್ಯವಿರುವ ಪ್ರಮಾಣದ ವಿದ್ಯುತ್ ಸಂಪರ್ಕವನ್ನು ಉಚಿತವಾಗಿ ನೀಡಲಾಗುತ್ತದೆ. ಎನ್ ಡಿಎ ಮೈತ್ರಿಕೂಟದ ಸರ್ಕಾರವು ಜಾರಿಗೊಳಿಸಿರುವ ಕೃಷಿ ಸಂಬಂಧಿತ ಕಾಯ್ದೆಗಳನ್ನು ಬಿಹಾರದಲ್ಲಿ ರದ್ದುಗೊಳಿಸಲಾಗುತ್ತದೆ. ಪಂಜಾಬ್ ಮಾದರಿಯಲ್ಲಿ ಹೊಸ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಲಾಗುತ್ತದೆ ಎಂದು ಚುನಾವಣೆ ಪ್ರಣಾಳಿಕೆ ಬಿಡುಗಡೆ ಬಳಿಕ ಶಕ್ತಿಸಿನ್ಹಾ ಗೋಹಿಲ್ ತಿಳಿಸಿದರು.

English summary
Bihar Election: Union Minister Nirmala Seetaraman Will Release BJP Manifesto.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X