• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೋದಿಗೆ ಬಲ ತುಂಬಲು 4 ಲಕ್ಷ ಸ್ಮಾರ್ಟ್ ಫೋನ್ ವಾರಿಯರ್ಸ್

|

ಪಾಟ್ನಾ, ಅ. 16: 2014ರಲ್ಲಿ ಸಾಮಾಜಿಕ ಜಾಲ ತಾಣಗಳ ಬಲದಿಂದ ಹೆಚ್ಚಿನ ಮತದಾರರನ್ನು ಸೆಳೆದಿದ್ದ ಭಾರತೀಯ ಜನತಾ ಪಕ್ಷ(ಬಿಜೆಪಿ) ಈಗ ಮತ್ತೊಮ್ಮೆ ಇದೇ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಕೊರೊನಾವೈರಸ್ ಹಿನ್ನಲೆಯಲ್ಲಿ ಚುನಾವಣಾ ಆಯೋಗವು ಬೃಹತ್ ಸಮಾವೇಶಕ್ಕೆ ಅನುಮತಿ ನೀಡಿಲ್ಲ. ಹೀಗಾಗಿ ಡಿಜಿಟಲ್ ವೇದಿಕೆ, ವರ್ಚುಯಲ್ ಸಮಾವೇಶಗಳನ್ನು ಯಶಸ್ವಿಗೊಳಿಸಲು ಬಿಜೆಪಿ ಸಜ್ಜಾಗಿದೆ.

ಈ ಮೊದಲು ಎರಡು ಮೂರು ಸಮಾವೇಶದಲ್ಲಿ ಮಾತ್ರ ಪಾಲ್ಗೊಳ್ಳಲು ಮುಂದಾಗಿದ್ದ ಪ್ರಧಾನಿ ಮೋದಿ ಈಗ ಸುಮಾರು 8 ವರ್ಚುಯಲ್ ಸಮಾವೇಶ ನಡೆಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ನಿತೀಶ್‌ಗೆ ಸವಾಲು ಹಾಕಿ, ಬಿಹಾರಕ್ಕೆ ಬಂದಿಳಿದ ಯುವತಿ ಪುಷ್ಪಂ

ಮೋದಿ ಬಲಕ್ಕೆ ಸೋಷಿಯಲ್ ಮೀಡಿಯಾ ಕಮಾಂಡೋಸ್:

ಪ್ರಧಾನಿ ಮೋದಿ ಅವರ ಸಮಾವೇಶಗಳನ್ನು ಯಶಸ್ವಿಗೊಳಿಸುವ ಜವಾಬ್ದಾರಿಯನ್ನು 4 ಲಕ್ಷ ಕಾರ್ಯಕರ್ತರಿಗೆ ವಹಿಸಲಾಗಿದೆ. ಈ ಕಾರ್ಯಕರ್ತರನ್ನು ಸ್ಮಾರ್ಟ್ ಫೋನ್ ವಾರಿಯರ್ಸ್ ಎಂದು ಕರೆಯಲಾಗುತ್ತಿದೆ. ಜೊತೆಗೆ 10, 000 ಸೋಷಿಯಲ್ ಮೀಡಿಯಾ ಕಮಾಂಡೋಸ್ ಬಳಸಿಕೊಂಡು ಸಮಾವೇಶವನ್ನು ಕ್ಷೇತ್ರದ ಪ್ರತಿ ಮತದಾರರಿಗೂ ತಲುಪಿಸುವ ಯೋಜನೆ ಹಾಕಿಕೊಳ್ಳಲಾಗಿದೆ.

ಬಿಹಾರದಲ್ಲಿ ನಿತೀಶ್ ಕುಮಾರ್ ಸರ್ಕಾರ ಮಾಡಿರುವ ಅಭಿವೃದ್ಧಿ, ನಿರುದ್ಯೋಗ ಸಮಸ್ಯೆ, ಇಂಡೋ-ಚೀನಾ ಗಡಿ ಸಮಸ್ಯೆ, ಆರ್ಥಿಕ ಬಿಕ್ಕಟ್ಟು ಮುಂತಾದ ವಿಷಯಗಳ ಬಗ್ಗೆ ಸಮಾವೇಶದಲ್ಲಿ ಮಾತನಾಡುವ ಸಾಧ್ಯತೆ ಹೆಚ್ಚಿದೆ. ಜೊತೆಗೆ ಎಂದಿನಂತೆ ಸರ್ಕಾರ ನೀಡುತ್ತಿರುವ ಆರ್ಥಿಕ ಪ್ಯಾಕೇಜ್, ಸಾರಿಗೆ, ರೈಲು ಸಂಪರ್ಕ ಯೋಜನೆಗಳ ಬಗ್ಗೆ ಮೋದಿ ಪ್ರಸ್ತಾವಿಸಲಿದ್ದಾರೆ. ಮೋದಿ ಭಾಷಣವನ್ನು ವಾರಿಯರ್ಸ್ ಹಂಚಿಕೆ ಮಾಡಿದರೆ, ಕಮಾಂಡೋಗಳು ನಿರ್ವಹಣೆ ಮಾಡಲಿದ್ದಾರೆ.

ಬಿಹಾರದಲ್ಲಿ ಬದಲಾವಣೆ ತಂದ ಐಎಎಸ್ ಅಧಿಕಾರಿ ಪತ್ನಿ ಚುನಾವಣಾ ಕಣಕ್ಕೆ

243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.

ಬಿಹಾರ ಚುನಾವಣೆ: ಬಿಜೆಪಿ ರೆಬೆಲ್‌ಗಳ ಆಶ್ರಯತಾಣವಾದ ಎಲ್‌ಜೆಪಿ

2015ರಲ್ಲಿ ರಾಷ್ಟ್ರೀಯ ಜನತಾ ದಳ 80 ಸ್ಥಾನ, ಜನತಾ ದಳ ಯುನೈಟೆಡ್ 71, ಕಾಂಗ್ರೆಸ್ 27 ಗಳಿಸಿದ್ದವು. ಬಿಜೆಪಿ 53 ಸ್ಥಾನ, ಎಲ್ ಜೆಪಿ 2 ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ ಸೆಕ್ಯುಲರ್ 1, ಇತರೆ 10 ಸ್ಥಾನ ಗಳಿಸಿದ್ದವು. ಬಿಜೆಪಿ ಶೇ 24ರಷ್ಟು ಮತಗಳಿಕೆ, ಅರ್ ಜೆ ಡಿ ಶೇ 18 ಹಾಗೂ ಜೆಡಿಯು ಶೇ 17ರಷ್ಟು, ಕಾಂಗ್ರೆಸ್ ಶೇ 7, ಎಲ್ ಜೆಪಿ ಶೇ 4.8ರಷ್ಟು ಮತ ಗಳಿಸಿದ್ದವು.

English summary
Bihar elections 2020: BJP plans over 4 lakh smartphone warriors for Prime Minister Modi's virtual rallies.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X