ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರ: 2ನೇ ಹಂತಕ್ಕೆ 46 ಅಭ್ಯರ್ಥಿಗಳನ್ನು ಹೆಸರಿಸಿದ ಬಿಜೆಪಿ

|
Google Oneindia Kannada News

ಪಾಟ್ನಾ, ಅ. 11: ಬಿಹಾರದಲ್ಲಿ ಎರಡನೇ ಹಂತದ ಚುನಾವಣೆಯಲ್ಲಿ ಸ್ಪರ್ಧಿಸಲು 46 ಅಭ್ಯರ್ಥಿಗಳನ್ನು ಭಾರತೀಯ ಜನತಾ ಪಕ್ಷ(ಬಿಜೆಪಿ) ಇಂದು ಆಯ್ಕೆ ಮಾಡಿ, ಪಟ್ಟಿ ಪ್ರಕಟಿಸಿದೆ.

ಭಾರತೀಯ ಜನತಾ ಪಕ್ಷ ಮತ್ತು ಜೆಡಿಯು 50:50 ಅನುಪಾತದಂತೆ ಸೀಟು ಹಂಚಿಕೆ ಮಾಡಿಕೊಂಡು ವಿಧಾನಸಭೆ ಚುನಾವಣೆ ಕಣಕ್ಕಿಳಿಯಲು ಸಜ್ಜಾಗಿರುವುದು ಗೊತ್ತಿರಬಹುದು. ಈ ನಿಟ್ಟಿನಲ್ಲಿ ಮೊದಲ ಹಂತದ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಕಳೆದ ವಾರವೇ ಬಿಜೆಪಿ ಪ್ರಕಟಿಸಿದೆ.

ಬಿಹಾರ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಬಿಹಾರ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

2ನೇ ಹಂತಕ್ಕಾಗಿ ಇಂದು ಪ್ರಕಟವಾದ ಪಟ್ಟಿಯಲ್ಲಿ ಇಬ್ಬರು ಮಹಿಳಾ ಆಕಾಂಕ್ಷಿಗಳಿಗೆ ಟಿಕೆಟ್ ಸಿಕ್ಕಿದೆ. ರೇಣು ದೇವಿ ಅವರು ಬೆಟ್ಟಿಯಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಆಶಾ ಸಿನ್ಹಾ ಅವರು ದನಾಪುರ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಮಿಕ್ಕಂತೆ ಮಿತಿಲೇಶ್ ತಿವಾರಿ ಅವರು ಬೈಕುಂತ್ ಪುರ್ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆ ಮಾಡುತ್ತಿದ್ದಾರೆ.

Bihar Elections 2020: BJP releases 46 candidates for second phase

ಜೆಡಿಯು ಪಡೆದ 122 ವಿಧಾನಸಭಾ ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳನ್ನು ಜಿತನ್ ರಾಮ್ ಮಾಂಜಿ ನೇತೃತ್ವದ ಹಿಂದೂಸ್ತಾನಿ ಅವಂ ಮೋರ್ಚಾ ಪಕ್ಷಕ್ಕೆ ಬಿಟ್ಟು ಕೊಡಲಾಗಿದೆ. ಬಿಜೆಪಿ ಪಡೆದುಕೊಂಡ 121 ವಿಧಾನಸಭಾ ಕ್ಷೇತ್ರಗಳ ಪೈಕಿ ಕೆಲವು ಕ್ಷೇತ್ರಗಳನ್ನು ವಿಕಾಸಶೀಲ ಇನ್ಸಾನ್ ಪಕ್ಷಕ್ಕೆ ಬಿಟ್ಟುಕೊಡಲಿದೆ ಎಂದು ನಿತೀಶ್ ಕುಮಾರ್ ತಿಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್,28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್.03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್.07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್.10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.

ಸಮೀಕ್ಷೆ ಫಲಿತಾಂಶ: 4ನೇ ಬಾರಿಗೆ ನಿತೀಶ್ ನೇತೃತ್ವದ ಎನ್ಡಿಎ ಕ್ಲೀನ್ ಸ್ವೀಪ್ಸಮೀಕ್ಷೆ ಫಲಿತಾಂಶ: 4ನೇ ಬಾರಿಗೆ ನಿತೀಶ್ ನೇತೃತ್ವದ ಎನ್ಡಿಎ ಕ್ಲೀನ್ ಸ್ವೀಪ್

2015ರಲ್ಲಿ ರಾಷ್ಟ್ರೀಯ ಜನತಾ ದಳ 80 ಸ್ಥಾನ, ಜನತಾ ದಳ ಯುನೈಟೆಡ್ 71, ಕಾಂಗ್ರೆಸ್ 27 ಗಳಿಸಿದ್ದವು. ಬಿಜೆಪಿ 53 ಸ್ಥಾನ, ಎಲ್ ಜೆಪಿ 2 ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ ಸೆಕ್ಯುಲರ್ 1, ಇತರೆ 10 ಸ್ಥಾನ ಗಳಿಸಿತ್ತು. ಬಿಜೆಪಿ ಶೇ 24ರಷ್ಟು ಮತಗಳಿಕೆ, ಅರ್ ಜೆ ಡಿ ಶೇ 18 ಹಾಗೂ ಜೆಡಿಯು ಶೇ 17ರಷ್ಟು, ಕಾಂಗ್ರೆಸ್ ಶೇ 7, ಎಲ್ ಜೆಪಿ ಶೇ 4.8ರಷ್ಟು ಮತ ಗಳಿಸಿದ್ದವು.

English summary
BJP releases a list of 46 candidates for the second phase of #BiharElections2020. Renu Devi to contest from Bettiah, Mithilesh Tiwari from Baikunthpur and Asha Sinha from Danapur Assembly Constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X