• search
 • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಜೆಪಿ ನಂತರ ಭಿನ್ನಮತೀಯರನ್ನು ಹೊರಹಾಕಿದ ಜೆಡಿಯು

|

ಪಾಟ್ನಾ, ಅ. 14: ಬಿಹಾರ ವಿಧಾನಸಭೆ ಚುನಾವಣೆ ಕಣದಲ್ಲಿ ಪಕ್ಷಗಳ ನಡುವೆ ವಾಕ್ಸಮರ, ಪಕ್ಷಾಂತರ ಜೋರಾಗಿರುವ ವೇಳೆಯಲ್ಲೇ ಭಿನ್ನಮತೀಯರ ಸಂಖ್ಯೆ ಹೆಚ್ಚಾಗುತ್ತಿದೆ. ಇಂಥ ಬಂಡಾಯಗಾರರು, ಭಿನ್ನಮತೀಯರನ್ನು ಬಿಜೆಪಿ ಪಕ್ಷದಿಂದ ಹೊರ ಹಾಕಿದ ಬೆನ್ನಲ್ಲೇ ಜೆಡಿಯು ಕೂಡಾ ಇದೇ ಹಾದಿ ಹಿಡಿದಿದೆ.

ಹಾಲಿ ಶಾಸಕರು, ಮಾಜಿ ಶಾಸಕರು ಸೇರಿದಂತೆ 9 ಮಂದಿ ಭಿನ್ನಮತೀಯರನ್ನು ಬಿಜೆಪಿ ಹೊರಹಾಕಿತ್ತು. ಇದರ ಬೆನ್ನಲ್ಲೇ ಜೆಡಿಯು 15 ಮಂದಿಯನ್ನು ಪಕ್ಷ ವಿರೋಧಿಗಳು ಎಂದು ಹೇಳಿ ಹೊರಹಾಕಿದೆ. ಈ ಪಟ್ಟಿಯಲ್ಲಿ ಹಾಲಿ ಶಾಸಕ, ಮಾಜಿ ಶಾಸಕ, ಮಾಜಿ ಸಚಿವರು ಇದ್ದಾರೆ.

ಮೈತ್ರಿಕೂಟಗಳಿಗೆ ಬೇಡವಾದ LJD, ಬಿಹಾರ ರಣಕಣದಲ್ಲಿ ಏಕಾಂಗಿ

ಪಕ್ಷದಿಂದ ಹೊರ ಹಾಕಲ್ಪಟ್ಟವರ ಪೈಕಿ ಅನೇಕರು ಪಕ್ಷದ ವರಿಷ್ಠರ ವಿರೋಧದ ನಡುವೆಯೂ ನಾಮಪತ್ರ ಸಲ್ಲಿಸಿದ್ದರು. ಈ ಮೂಲಕ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷಕ್ಕೆ ಅನುಕೂಲಕರ ವಾತವರಣ ನಿರ್ಮಿಸಲು ಯತ್ನಿಸಿದ್ದರು. ಅಕ್ಟೋಬರ್ 12 ನಾಮಪತ್ರ ಹಿಂಪಡೆಯಲು ಕೊನೆ ದಿನಾಂಕವಾಗಿತ್ತು. ಆದರೆ, ನಾಮಪತ್ರ ಹಿಂಪಡೆಯದ ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ 6 ವರ್ಷಗಳ ಅವಧಿಗೆ ಉಚ್ಚಾಟಿಸಲಾಗಿದೆ ಎಂದು ಪಕ್ಷದ ವಕ್ತಾರರಾದ ಸಂಜಯ್ ಜೈಸ್ವಾಲ್ ಹೇಳಿದ್ದಾರೆ.

ಉಚ್ಚಾಟನೆಗೊಂಡವರ ಪೈಕಿ ಹಾಲಿ ಶಾಸಕ ರವೀಂದ್ರ ಯಾದವ್, ನೋಖಾ ಕ್ಷೇತ್ರದ ರಮೇಶ್ವರ್ ಚೌರಾಸಿಯಾ, ಸಂಘ ಪರಿವಾರದಿಂದ ಬಂದಿರುವ ಒಂದು ಕಾಲದಲ್ಲಿ ಸಿಎಂ ಅಭ್ಯರ್ಥಿ ಎನಿಸಿಕೊಂಡಿದ್ದ ರಾಜೇಂದ್ರ ಸಿಂಗ್ ಅವರು ಈಗ ಎಲ್ ಜೆಪಿ ಅಭ್ಯರ್ಥಿಯಾಗಿ ದಿನಾರಾದಿಂದ ಕಣಕ್ಕಿಳಿಯಲಿದ್ದಾರೆ. ಜೆಡಿಯು ಶಾಸಕ, ಸಚಿವ ಜೈ ಕುಮಾರ್ ಸಿಂಗ್ ವಿರುದ್ಧ ಸೆಣಸಲಿದ್ದಾರೆ.

2015ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಜೆಡಿಯು ಅಭ್ಯರ್ಥಿಯನ್ನು ರವೀಂದ್ರ ಸೋಲಿಸಿದ್ದರು. ಎರಡು ಬಾರಿ ಶಾಸಕ, ಒಂದು ಬಾರಿ ಎಂಎಲ್ಸಿಯಾಗಿದ್ದು, ಕಾಂಗ್ರೆಸ್ ಟಿಕೆಟ್ ಪಡೆದು ಕೂಡಾ ಗೆಲುವು ಸಾಧಿಸಿದ್ದಾರೆ.

ಬಿಹಾರ ಚುನಾವಣೆ: ಬಿಜೆಪಿ ರೆಬೆಲ್‌ಗಳ ಆಶ್ರಯತಾಣವಾದ ಎಲ್‌ಜೆಪಿ

243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.

   Sriramulu ಎರಡು ವರುಷ ಇಂದ ಕೇಳ್ತಿದಿನಿ | Oneindia Kannada

   2015ರಲ್ಲಿ ರಾಷ್ಟ್ರೀಯ ಜನತಾ ದಳ 80 ಸ್ಥಾನ, ಜನತಾ ದಳ ಯುನೈಟೆಡ್ 71, ಕಾಂಗ್ರೆಸ್ 27 ಗಳಿಸಿದ್ದವು. ಬಿಜೆಪಿ 53 ಸ್ಥಾನ, ಎಲ್ ಜೆಪಿ 2 ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ ಸೆಕ್ಯುಲರ್ 1, ಇತರೆ 10 ಸ್ಥಾನ. ಬಿಜೆಪಿ ಶೇ 24ರಷ್ಟು ಮತಗಳಿಕೆ, ಅರ್ ಜೆ ಡಿ ಶೇ 18 ಹಾಗೂ ಜೆಡಿಯು ಶೇ 17ರಷ್ಟು, ಕಾಂಗ್ರೆಸ್ ಶೇ 7, ಎಲ್ ಜೆಪಿ ಶೇ 4.8ರಷ್ಟು ಮತ ಗಳಿಸಿದ್ದವು.

   English summary
   Ahead of the Bihar Elections, the Janata Dal (U) has expelled 15 of its leaders for anti-party activities.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X