ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೈಂಗಿಕ ಕಿರುಕುಳ: 3 ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರಕ್ಕೆ ತಡೆ

|
Google Oneindia Kannada News

ಪಾಟ್ನಾ, ಅ.7: ಬಿಹಾರ ವಿಧಾನಸಭೆ ಚುನಾವಣೆ ಬಿಸಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎನ್ಡಿಎ ವಿರುದ್ಧ ಈ ಬಾರಿ ಉತ್ತಮ ಪ್ರದರ್ಶನ ನೀಡುವ ಉತ್ಸಾಹದಲ್ಲಿರುವ ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಗೆ ಆಘಾತವಾಗಿದೆ. ಮೂವರು ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಭಾರಿ ಆಕ್ಷೇಪ ಕೇಳಿ ಬಂದಿದೆ. ಹೀಗಾಗಿ ನಾಮಪತ್ರ ಖಚಿತಪಡಿಸಿಕೊಂಡಿದ್ದ ಮೂವರು ಕಾಂಗ್ರೆಸ್ಸಿಗರಿಗೆ ಹಿನ್ನಡೆಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಮೂವರ ನಾಮಪತ್ರವನ್ನು ತಡೆ ಹಿಡಿದಿದೆ.

ಆದಷ್ಟು ಕ್ರಿಮಿನಲ್ ಹಿನ್ನೆಲೆ ಇಲ್ಲದ ಅಭ್ಯರ್ಥಗಳನ್ನು ಈ ಬಾರಿ ಚುನಾವಣಾ ಕಣದಲ್ಲಿ ಇಳಿಸಲು ಕಾಂಗ್ರೆಸ್ ಮುಂದಾಗಿದೆ. ಕೆಲವರು ಮುಖಂಡರ ಮೇಲೆ ಲೈಂಗಿಕ ಕಿರುಕುಳ ಕೇಸ್ ಗಳು ದಾಖಲಾಗಿವೆ. ಅಭ್ಯರ್ಥಗಳ ಪಟ್ಟಿಯನ್ನು ಅಳೆದು ತೂಗಿ ಅಂತಿಮ ಗೊಳಿಸಲಾಗುತ್ತಿದ್ದು, ರಾಜ್ಯ ಉಸ್ತುವಾರಿಗಳ ಕೈಗೆ ತಲುಪಿಸಲಾಗಿದೆ.

ಬಿಹಾರ ಚುನಾವಣೆ: ಅತ್ಯಾಚಾರ ಆರೋಪಿ ಶಾಸಕರ ಬದಲು ಅವರ ಪತ್ನಿಯರಿಗೆ ಆರ್‌ಜೆಡಿ ಟಿಕೆಟ್ಬಿಹಾರ ಚುನಾವಣೆ: ಅತ್ಯಾಚಾರ ಆರೋಪಿ ಶಾಸಕರ ಬದಲು ಅವರ ಪತ್ನಿಯರಿಗೆ ಆರ್‌ಜೆಡಿ ಟಿಕೆಟ್

ಅತ್ಯಾಚಾರಿಗಳಿಗೆ ಪಕ್ಷಗಳು ಟಿಕೆಟ್ ನೀಡಬಾರದು ಹಾಗೂ ಸ್ಪರ್ಧಿಸಲು ಬಿಡಬಾರದು ಎಂದು ಕಾಂಗ್ರೆಸ್ ಮುಖಂಡರಾದ ಸುಷ್ಮಿತಾ ದೇವ್ ಹೇಳಿದ್ದನ್ನು ಇಲ್ಲಿಸ್ಮರಿಸಬಹುದು. ಇಂಥ ಅಭ್ಯರ್ಥಿಗಳ ಆಯ್ಕೆ ವಿರುದ್ಧ ದನಿಯೆತ್ತಲು ವಿಟೋ ಶಕ್ತಿಯನ್ನು ನೀಡಬೇಕು ಎಂದಿದ್ದರು. ಅದರಂತೆ, ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ ಮೂವರು ಅಭ್ಯರ್ಥಿಗಳ ವಿರುದ್ಧ ಇಂಥ ಪ್ರಕರಣಗಳಿದ್ದು ಅವರ ಹೆಸರನ್ನು ಅಭ್ಯರ್ಥಿಗಳ ಅಂತಿಮ ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಹೆಚ್ಚಿದೆ.

Bihar Elections 2020: Nominations of 3 Congress leaders on hold

ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ನಲ್ಲಿ ಆರ್ ಜೆಡಿ, ಕಾಂಗ್ರೆಸ್ ಅಲ್ಲದೆ ಎಡಪಕ್ಷಗಳಿವೆ, ಕ್ರಮವಾಗಿ 144, 70 ಹಾಗೂ 29 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ.

243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.

ಶಿರಾ, ಆರ್. ಆರ್. ನಗರ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಶಿರಾ, ಆರ್. ಆರ್. ನಗರ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

2015ರಲ್ಲಿ ರಾಷ್ಟ್ರೀಯ ಜನತಾ ದಳ 80 ಸ್ಥಾನ, ಜನತಾ ದಳ ಯುನೈಟೆಡ್ 71, ಕಾಂಗ್ರೆಸ್ 27 ಗಳಿಸಿದ್ದವು. ಬಿಜೆಪಿ 53 ಸ್ಥಾನ, ಎಲ್ ಜೆಪಿ 2 ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ ಸೆಕ್ಯುಲರ್ 1, ಇತರೆ 10 ಸ್ಥಾನ. ಬಿಜೆಪಿ ಶೇ 24ರಷ್ಟು ಮತಗಳಿಕೆ, ಅರ್ ಜೆ ಡಿ ಶೇ 18 ಹಾಗೂ ಜೆಡಿಯು ಶೇ 17ರಷ್ಟು, ಕಾಂಗ್ರೆಸ್ ಶೇ 7, ಎಲ್ ಜೆಪಿ ಶೇ 4.8ರಷ್ಟು ಮತ ಗಳಿಸಿದ್ದವು.

English summary
The Congress has put on hold three names as party candidates for the Bihar Elections 2020 following objections by some leaders over their alleged involvement in sexual exploitation cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X