• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಹಾರ: ಶರದ್ ಯಾದವ್ ಪುತ್ರಿ ಸುಭಾಷಿಣಿಗೆ ಕಾಂಗ್ರೆಸ್ ಟಿಕೆಟ್

|

ಪಾಟ್ನ, ಅ. 16: ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಗೊಂಡ ಹಿರಿಯ ರಾಜಕಾರಣಿ ಶರದ್ ಯಾದವ್ ಅವರ ಪುತ್ರಿ, ಸಾಮಾಜಿಕ ಕಾರ್ಯಕರ್ತೆ ಸುಭಾಷಿಣಿ ಹಾಗೂ ಮಾಜಿ ಸಂಸದ ಕಾಳಿ ಪಾಂಡೆ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಕೇಂದ್ರದ ಮಾಜಿ ಸಚಿವ, ಹಿಂದಿ ಚಿತ್ರರಂಗದ ಹಿರಿಯ ನಟ ಶತ್ರುಘ್ನ ಸಿನ್ಹಾ ಅವರ ಪುತ್ರ ಲವ್ ಸಿನ್ಹಾ ಅವರಿಗೆ ಪಾಟ್ನಾ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.

ಸುಭಾಷಿಣಿ ಅವರು ಬಿಹಾರಿಗಂಜ್, ಕಾಳಿ ಪಾಂಡೆ ಅವರು ಕುಚೈಕೋಟೆ ವಿಧಾನಸಭೆ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ. ಪಾಟ್ನಾ ಸಾಹೀಬ್ ಕ್ಷೇತ್ರದ ವ್ಯಾಪ್ತಿಯ ಬಂಕಿಪೋರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು 37 ವರ್ಷ ವಯಸ್ಸಿನ ಲವ್ ಸಿನ್ಹಾಗೆ ಟಿಕೆಟ್ ನೀಡಲಾಗಿದೆ. ಈ ಕ್ಷೇತ್ರದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 03 ರಂದು ಮತದಾನ ಹಾಗೂ ನವೆಂಬರ್ 10ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಇದರ ಜೊತೆಗೆ ವಾಲ್ಮಿಕಿ ನಗರ ಲೋಕಸಭೆ ಉಪ ಚುನಾವಣೆ ಕ್ಷೇತ್ರಕ್ಕೆ ಪ್ರವೇಶ್ ಕುಮಾರ್ ಮಿಶ್ರಾ ಅಭ್ಯರ್ಥಿ ಎಂದು ಘೋಷಿಸಲಾಗಿದೆ.

ನಿತೀಶ್‌ಗೆ ಸವಾಲು ಹಾಕಿ, ಬಿಹಾರಕ್ಕೆ ಬಂದಿಳಿದ ಯುವತಿ ಪುಷ್ಪಂ

243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ನವೆಂಬರ್ 03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.

ಮೈತ್ರಿಕೂಟಗಳಿಗೆ ಬೇಡವಾದ LJD, ಬಿಹಾರ ರಣಕಣದಲ್ಲಿ ಏಕಾಂಗಿ

2015ರಲ್ಲಿ ರಾಷ್ಟ್ರೀಯ ಜನತಾ ದಳ 80 ಸ್ಥಾನ, ಜನತಾ ದಳ ಯುನೈಟೆಡ್ 71, ಕಾಂಗ್ರೆಸ್ 27 ಗಳಿಸಿದ್ದವು. ಬಿಜೆಪಿ 53 ಸ್ಥಾನ, ಎಲ್ ಜೆಪಿ 2 ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ ಸೆಕ್ಯುಲರ್ 1, ಇತರೆ 10 ಸ್ಥಾನ ಗಳಿಸಿದ್ದವು. ಬಿಜೆಪಿ ಶೇ 24ರಷ್ಟು ಮತಗಳಿಕೆ, ಅರ್ ಜೆ ಡಿ ಶೇ 18 ಹಾಗೂ ಜೆಡಿಯು ಶೇ 17ರಷ್ಟು, ಕಾಂಗ್ರೆಸ್ ಶೇ 7, ಎಲ್ ಜೆಪಿ ಶೇ 4.8ರಷ್ಟು ಮತ ಗಳಿಸಿದ್ದವು.

English summary
The Congress on Thursday released its second list of 49 candidates for the Bihar Assembly elections, fielding Shatrughan Sinha''s son Luv Sinha from Bankipur and Sharad Yadav''s daughter Subhashini Yadav from Bihariganj seats.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X