ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿ ಹತ್ಯೆ, ಇಬ್ಬರ ಬಂಧನ

|
Google Oneindia Kannada News

ಪಾಟ್ನಾ, ಅ. 25: ಜನತಾ ದಳ ರಾಷ್ಟ್ರವಾದಿ ಅಭ್ಯರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಥ್ಸಾರ್ ಗ್ರಾಮದಲ್ಲಿ ಜನತಾದಳ ರಾಷ್ಟ್ರವಾದಿ ಪಕ್ಷದ ಅಭ್ಯರ್ಥಿ ಶ್ರೀನಾರಾಯಣ್ ಸಿಂಗ್ ಅವರನ್ನು ಶನಿವಾರದಂದು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದರು.

ಶ್ರೀನಾರಾಯಣ್ ಸಿಂಗ್ ಬೆಂಬಲಿಗರು ಎಂದು ಸುಳ್ಳು ಹೇಳಿಕೊಂಡು ಸಿಂಗ್ ಅವರ ಬಳಿ ಬಂದ ದುಷ್ಕರ್ಮಿಗಳು ಚುನಾವಣೆ ಪ್ರಚಾರ ಸಭೆಯಲ್ಲಿದ್ದಾಗಲೇ ಗುಂಡಿಕ್ಕಿ ಪರಾರಿಯಾಗಿದ್ದರು. ತಕ್ಷಣವೇ ಸಿಂಗ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಯತ್ನಿಸಲಾಗಿತ್ತು. ಆದರೆ, ತೀವ್ರ ರಕ್ತಸ್ರಾವದಿಂದ ನಿಧನರಾದರು ಎಂದು ಎಎನ್ಐ ವರದಿ ಮಾಡಿದೆ.

ಎಬಿಪಿ-ಸಿವೋಟರ್ ಸಂಸ್ಥೆ: ಬಿಹಾರದ ಅತಿದೊಡ್ಡ ಸಮೀಕ್ಷೆ ಅಪ್ಡೇಟ್ಎಬಿಪಿ-ಸಿವೋಟರ್ ಸಂಸ್ಥೆ: ಬಿಹಾರದ ಅತಿದೊಡ್ಡ ಸಮೀಕ್ಷೆ ಅಪ್ಡೇಟ್

"ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಐದಾರು ಮಂದಿ ಈ ಹತ್ಯೆಗೆ ಸಂಬಂಧಿಸಿದಂತೆ ಆರೋಪಿಗಳಿದ್ದು, ಉಳಿದವರ ಪತ್ತೆಗೆ ಶೋಧ ಕಾರ್ಯ ಆರಂಭವಾಗಿದೆ'' ಎಂದು ಉಪ ವಿಭಾಗ ಪೊಲೀಸ್ ಅಧಿಕಾರಿ ರಾಕೆಶ್ ಕುಮಾರ್ ಅವರು ತಿಳಿಸಿದ್ದಾರೆ.

Bihar Elections 2020: Two arrested in Janata Dal Rashtrawadi candidate murder case

243 ಸದಸ್ಯ ಬಲ ಹೊಂದಿರುವ ಬಿಹಾರ ವಿಧಾನಸಭೆ ಅವಧಿಯು ನವೆಂಬರ್ 29 ರಂದು ಕೊನೆಗೊಳ್ಳಲಿದೆ. ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 28ರಂದು 16 ಜಿಲ್ಲೆಗಳ 71 ಕ್ಷೇತ್ರಗಳಿಗೆ 31,000 ಮತಗಟ್ಟೆಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 03ರಂದು ಎರಡನೆಯ ಹಂತದಲ್ಲಿ 17 ಜಿಲ್ಲೆಗಳಲ್ಲಿ 94 ಕ್ಷೇತ್ರಗಳಿಗೆ 42,000 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 07ರಂದು ಮೂರನೇ ಹಂತದಲ್ಲಿ 78 ಕ್ಷೇತ್ರಗಳಿಗೆ 15 ಜಿಲ್ಲೆಗಳಲ್ಲಿ ಅಂದಾಜು 33,500 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಅಂತಿಮವಾಗಿ ನವೆಂಬರ್10ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶವು ಹೊರ ಬೀಳಲಿದೆ.

English summary
Patna, Oct 24: Just days ahead of Bihar polls, Janata Dal Rashtrawadi party candidate Shreenarayan Singh was shot dead on Saturday at Hathsar village. According to ANI, two people have been arrested in connection with the shooting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X