ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ರಿಗೆ ಕೊರೊನಾ ಭೀತಿ!

|
Google Oneindia Kannada News

ಪಾಟ್ನಾ, ಏಪ್ರಿಲ್.28: ನನ್ನ ತಂದೆ ಹಾಗೂ ಬಿಹಾರ ಮಾಜಿ ಮುಖ್ಯಮಂತ್ರಿ ಆಗಿರುವ ಲಾಲೂ ಪ್ರಸಾದ್ ಯಾದವ್ ಅವರಿಗೆ ಕೊರೊನಾ ವೈರಸ್ ಸೋಂಕು ತಗಲುವ ಭೀತಿಯಿದ್ದು ತೀವ್ರ ಎಚ್ಚರಿಕೆ ವಹಿಸಬೇಕಿದೆ ಎಂದು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ತಿಳಿಸಿದ್ದಾರೆ.

ಇಳಿವಯಸ್ಸಿನಲ್ಲಿರುವ ತಮ್ಮ ತಂದೆಗೆ ಕೊರೊನಾ ವೈರಸ್ ಮಹಾಮಾರಿಯು ಅಂಟಿಕೊಳ್ಳುವ ಭೀತಿ ಹೆಚ್ಚಾಗಿದೆ. ಸೋಂಕು ಹರಡದಂತೆ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಕೊರೊನಾ ಕಾಟದಿಂದ ಭಾರತದಲ್ಲಿ ಮುಂದುವರಿಯುತ್ತಾ ಲಾಕ್ ಡೌನ್?ಕೊರೊನಾ ಕಾಟದಿಂದ ಭಾರತದಲ್ಲಿ ಮುಂದುವರಿಯುತ್ತಾ ಲಾಕ್ ಡೌನ್?

ಕೊರೊನಾ ವೈರಸ್ ಹರಡುವ ಭೀತಿ ಎಲ್ಲರನ್ನೂ ಕಾಡುತ್ತಿದೆ. ಇದರ ಮಧ್ಯೆ 72 ವರ್ಷ ವಯಸ್ಸಿನ ತಮ್ಮ ತಂದೆ ದೀರ್ಘಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದವರು. ಹೀಗಿರುವಾಗ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ವಹಿಸಬೇಕು ಎಂದು ತೇಜಸ್ವಿ ಯಾದವ್ ಟ್ವೀಟ್ ಮಾಡಿದ್ದಾರೆ.

 Bihar Ex-CM Lalu Prasad Yadav Risk From Coronavirus: Tejashwi Yadav

ಲಾಲೂ ಜೊತೆಗಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್:

ರಾಂಚಿಯ ರಾಜೇಂದ್ರ ಇನ್ಸ್ ಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಚಿಕಿತ್ಸೆ ಪಡೆಯುತ್ತಿದ್ದರು. ಅದೇ ಘಟಕದಲ್ಲಿ ಮೂರು ವಾರಗಳ ಹಿಂದೆ ಚಿಕಿತ್ಸೆ ಪಡೆಯಲು ದಾಖಲಾದ ವ್ಯಕ್ತಿಗೆ ಕೊರೊನಾ ವೈರಸ್ ಪಾಸಿಟಿವ್ ಎಂದು ತಿಳಿದು ಬಂದಿದೆ. ಲಾಲೂ ಪ್ರಸಾದ್ ಯಾದವ್ ರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯ ಡಾ.ಉಮೇಶ್ ಪ್ರಸಾದ್ ಅವರೇ ಆ ವ್ಯಕ್ತಿಗೂ ಚಿಕಿತ್ಸೆ ನೀಡುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಲಾಲೂ ಪ್ರಸಾದ್ ಯಾದವ್ ಅವರಿಗೂ ಕೊರೊನಾ ವೈರಸ್ ಸೋಂಕು ಅಂಟಿಕೊಳ್ಳುವ ಅಪಾಯವಿದೆ ಎಂದು ತೇಜಸ್ವಿ ಯಾದವ್ ಆತಂಕ ವ್ಯಕ್ತಪಡಿಸಿದ್ದಾರೆ.

ಇದೀಗ ರಾಜೇಂದ್ರ ಇನ್ಸ್ ಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯ ಎಲ್ಲ ಸಿಬ್ಬಂದಿಯ ರಕ್ತ ಮತ್ತು ಗಂಟಲು ದ್ರವ್ಯದ ಮಾದರಿಯನ್ನು ಸಂಗ್ರಹಿಸಲಾಗಿದ್ದು, ಕೊವಿಡ್-19 ಸೋಂಕಿತನಿಗೆ ಚಿಕಿತ್ಸೆ ನೀಡಿದ ವೈದ್ಯ ಡಾ.ಉಮೇಶ್ ಪ್ರಸಾದ್ ರನ್ನು ಗೃಹ ದಿಗ್ಬಂಧನದಲ್ಲಿ ಇರಿಸಲಾಗಿದೆ.

English summary
Bihar Ex-CM Lalu Prasad Yadav Risk From Coronavirus- Tejashwi Yadav.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X