ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

|
Google Oneindia Kannada News

ಪಾಟ್ನಾ, ನವೆಂಬರ್.13: ಬಿಹಾರದ ಮುಂದಿನ ಮುಖ್ಯಮಂತ್ರಿ ಆಯ್ಕೆಗೆ ಭಾನುವಾರ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(NDA) ಸಭೆ ಕರೆಯಲಾಗಿದೆ. ಇದರ ನಡುವೆ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿದ್ದಾರೆ.

ಬಿಹಾರದಲ್ಲಿ ಪ್ರಸ್ತುತ ಸರ್ಕಾರದ ಅವಧಿಯು ನವೆಂಬರ್.29ಕ್ಕೆ ಅಂತ್ಯಗೊಳ್ಳಲಿದೆ. ಈ ಮಧ್ಯೆ ರಾಜ್ಯದಲ್ಲಿ ನೂತನ ಸರ್ಕಾರ ರಚನೆ ಪ್ರಕ್ರಿಯೆ ಚಾಲ್ತಿಯಲ್ಲಿ ಇರುವಾಗಲೇ ರಾಜ್ಯಪಾಲ ಫಾಗು ಚೌವ್ಹಾಣ್ ರನ್ನು ಭೇಟಿಯಾದ ನಿತೀಶ್ ಕುಮಾರ್, ಸಿಎಂ ಸ್ಥಾನಕ್ಕೆ ರಾಜೀನಾಮೆ ಪತ್ರ ನೀಡಿದ್ದಾರೆ.

ಕೇವಲ 12 ಮತಗಳ ಅಂತರದಿಂದ ಗೆದ್ದ ನಿತೀಶ್ ಕುಮಾರ್ ಪಕ್ಷಕೇವಲ 12 ಮತಗಳ ಅಂತರದಿಂದ ಗೆದ್ದ ನಿತೀಶ್ ಕುಮಾರ್ ಪಕ್ಷ

ನವೆಂಬರ್.15ರ ಭಾನುವಾರ ಬಿಹಾರದ ಮುಖ್ಯಮಂತ್ರಿ ಹಾಗೂ ಸರ್ಕಾರ ರಚನೆ ಕುರಿತು ಎನ್ ಡಿಎ ಮೈತ್ರಿಕೂಟದ ನಾಯಕರ ಸಭೆ ಸೇರಲಾಗುತ್ತದೆ. ಈ ವೇಳೆ ಬಿಜೆಪಿ, ಜೆಡಿಯು, ವಿಐಪಿ ಹಾಗೂ ಎಚ್ಎಎಂ ಪಕ್ಷದ ಶಾಸಕರು ಹಾಜರಾಗಲಿದ್ದಾರೆ. ಸರ್ಕಾರ ರಚಿಸುವುದಕ್ಕೂ ಮೊದಲು ಅಗತ್ಯ ರಾಜಕೀಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತಿದೆ.

Bihar Govt Formation: Nitish Kumar Tenders Resignation To Governor Ahead Of NDA Meet

ಬಿಹಾರದ 37ನೇ ಮುಖ್ಯಮಂತ್ರಿ:

ಬಿಹಾರದ 243 ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ 125 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಎನ್ ಡಿಎ ಸ್ಪಷ್ಟ ಬಹುಮತ ಪಡೆದುಕೊಂಡಿದಿದ್ದು, ರಾಜ್ಯದ 37ನೇ ಮುಖ್ಯಮಂತ್ರಿ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಜ್ಯದಲ್ಲಿ ಸ್ಪಷ್ಟ ಬಹುಮತಕ್ಕೆ 122 ಸ್ಥಾನಗಳ ಅಗತ್ಯವಿದ್ದು, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್ ಡಿಎ) 125 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದೆ. ಈ ಪೈಕಿ ಬಿಜೆಪಿ 74, ಜೆಡಿಯು 43, ವಿಐಪಿ 4 ಹಾಗೂ ಹಿಂದೂಸ್ಥಾನ್ ಅವಂ ಮೋರ್ಚಾ ಪಕ್ಷವು 4 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಮಹಾಘಟಬಂಧನ್ ಮೈತ್ರಿಕೂಟವು 110 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಅದರಲ್ಲಿ ರಾಷ್ಟ್ರೀಯ ಜನತಾ ದಳ 75, ಕಾಂಗ್ರೆಸ್ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಎಐಎಂಐಎಂ 5, ಲೋಕಜನಶಕ್ತಿ ಪಕ್ಷ 1 ಹಾಗೂ ಪಕ್ಷೇತರ ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದಾರೆ.

English summary
Bihar Govt Formation: Nitish Kumar Tenders Resignation To Governor Ahead Of NDA Meet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X