• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಜೆಪಿ ಚಿಹ್ನೆಯುಳ್ಳ ಮಾಸ್ಕ್ ತೊಟ್ಟ ಸಚಿವರ ವಿರುದ್ಧ ಕೇಸ್!

|

ಪಾಟ್ನಾ, ಅಕ್ಟೋಬರ್.28: ಬಿಹಾರದ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಬಿಜೆಪಿಯ ಸಚಿವ ಪ್ರೇಮ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.

ಬುಧವಾರ ಬೆಳಗ್ಗೆ ಸೈಕಲ್ ಸವಾರಿ ಮೂಲಕ ಮತಗಟ್ಟೆಗೆ ಆಗಮಿಸಿದ ಸಚಿವ ಪ್ರೇಮಕುಮಾರ್ ತಮ್ಮ ವಿಭಿನ್ನ ಶೈಲಿಯ ಆಗಮನದಿಂದ ಗಮನ ಸೆಳೆದಿದ್ದರು. ಆದರೆ ಮತದಾನಕ್ಕೆ ತೆರಳುವ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಚಿಹ್ನೆಯುಳ್ಳ ಮಾಸ್ಕ್ ನ್ನು ಧರಿಸಿರುವುದು ಚುನಾವಣಾ ನೀತಿ ಸಂಹಿತೆಗೆ ವಿರುದ್ಧವಾಗಿದೆ.

Bihar Election 2020 Live Updates: ಮೊದಲ ಹಂತದ 50 ಕ್ಷೇತ್ರಗಳಲ್ಲಿ NDA ಗೆಲುವು- ಮಾಂಜಿ

ಗಯಾ ವಿಧಾನಸಭಾ ಕ್ಷೇತ್ರದ ಮತಗಟ್ಟೆಯಲ್ಲಿ ಮತದಾನದ ವೇಳೆಯಲ್ಲಿ ಒಂದು ನಿರ್ದಿಷ್ಟ ಪಕ್ಷಕ್ಕೆ ಸಂಬಂಧಿಸಿದ ಗುರುತುಳ್ಳ ಮಾಸ್ಕ್ ಧರಿಸಿದ ಹಿನ್ನೆಲೆಯಲ್ಲಿ ಸಚಿವ ಪ್ರೇಮ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.

ಬಿಹಾರದಲ್ಲಿ ಮೊದಲ ಹಂತದ ಚುನಾವಣೆ:

ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ 2.14 ಕೋಟಿ ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಈ ಪೈಕಿ 1.01 ಕೋಟಿ ಮಹಿಳೆಯರಾಗಿದ್ದು, 599 ತೃತೀಯ ಲಿಂಗದವರು ಸೇರಿದ್ದಾರೆ ಎಂದು ಚುನಾವಣಾ ಆಯೋಗವು ತಿಳಿಸಿದೆ. 71 ವಿಧಾನಸಭಾ ಕ್ಷೇತ್ರಗಳಲ್ಲಿ 952 ಪುರುಷ ಮತ್ತು 114 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸುಮಾರು 2 ಕೋಟಿಗೂ ಅಧಿಕ ಮತದಾರರು ಒಟ್ಟು 1066 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.

ಗಯಾ ವಿಧಾನಸಭಾ ಕ್ಷೇತ್ರದಲ್ಲಿ ಅತಿಹೆಚ್ಚು ಎಂದರೆ 27 ಅಭ್ಯರ್ಥಿಗಳು ಸ್ಪರ್ಧಿಸಿದ್ದರೆ ಕಾಟೋರಿಯಾ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಎಂದರೆ ಐವರು ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ ಎಂಬುದು ಚುನಾವಣಾ ಆಯೋಗವು ನೀಡಿದ ಅಂಕಿ-ಅಂಶಗಳಲ್ಲಿ ಉಲ್ಲೇಖಿಸಲಾಗಿದೆ.

English summary
Bihar Minister Prem Kumar Wears BJP Symbol Mask In Voting Time: FIR Registered.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X