• search
  • Live TV
ಪಟ್ನಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಹಾರ: ಮಗುವನ್ನು ಕಾಲುವೆಗೆ ತಳ್ಳಿ, ತಾಯಿ ಮೇಲೆ ಸಾಮೂಹಿಕ ಅತ್ಯಾಚಾರ

|

ಬಕ್ಸಾರ್, ಅಕ್ಟೋಬರ್ 12: ಮಗುವನ್ನು ಕಾಲುವೆಗೆ ತಳ್ಳಿ, ತಾಯಿಯ ಮೇಲೆ ಅತ್ಯಾಚಾರವಸಗಿರುವ ಘಟನೆ ಬಿಹಾರದ ಬಕ್ಸಾರ್‌ನಲ್ಲಿ ನಡೆದಿದೆ.

ಐದು ವರ್ಷ ಮಗು ಕಾಲುವೆಯಲ್ಲಿ ಮುಳುಗಿ ಮೃತಪಟ್ಟಿದೆ. ಏಳು ಮಂದಿ ಆರೋಪಿಗಳಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಹತ್ರಾಸ್ ಪ್ರಕರಣದ ಬೆನ್ನಲ್ಲೇ, ಉತ್ತರ ಪ್ರದೇಶದಲ್ಲಿ ಮತ್ತೋರ್ವ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಆ ಏಳು ಮಂದಿಯಲ್ಲಿ ಇಬ್ಬರ ಕುರಿತು ಮಾತ್ರ ಮಾಹಿತಿ ಲಭ್ಯವಾಗಿದೆ. ಸಂತ್ರಸ್ತೆಯ ಚಿಕಿತ್ಸೆಗಾಗಿ ಪಾಟ್ನಾದಿಂದ 135 ಕಿ.ಮೀ ದೂರಕ್ಕೆ ಕರೆತರಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಮಹಿಳೆಯ ದೂರಿನ ಮೇರೆಗೆ ಎಫ್ ಐಆರ್ ದಾಖಲಿಸಲಾಗಿದೆ. ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗೆಂದು ಕಳುಹಿಸಲಾಗಿದೆ.

ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ತಾಯಿ ಜೊತೆ ಹುಲ್ಲು ತರಲು ಹೋಗಿದ್ದ ದಲಿತ ಯುವತಿ ಮೇಲೆ ನಾಲ್ವರು ಅತ್ಯಾಚಾರವೆಸಗಿದ್ದರು.

ಬಳಿಕ ಆಕೆಯನ್ನು ಆಸ್ಪತ್ರೆಗೆ ಕರೆತರಲಾಗಿತ್ತ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಳು. ಆಕೆಯ ಅಂತ್ಯಸಂಸ್ಕಾರವನ್ನು ಪೊಲೀಸರು ಮಧ್ಯರಾತ್ರಿ ನಡೆಸಿದ್ದರು. ಇಂದು ಹತ್ರಾಸ್ ಕುಟುಂಬ ನ್ಯಾಯಾಲಯದ ಮುಂದೆ ಹಾಜರಾಗಬೇಕಿದೆ.

English summary
A Dalit woman in Bihar's Buxar district was allegedly gang raped and her child died after they were attacked and thrown in a canal, police said
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X