ಕೊರೊನಾ ವೈರಸ್: ಏಕಾಂಗಿಯಾಗಿ ಪತಿಯ ಅಂತ್ಯಕ್ರಿಯೆ ನೆರವೇರಿಸಿದ ಪತ್ನಿ
ಪಾಟ್ನಾ, ಮೇ 17: ಕೊರೊನಾ ವೈರಸ್‌ನಿಂದ ಮೃತಪಟ್ಟ ಪತಿಯ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬದ ಯಾರೊಬ್ಬರೂ ಮುಂದೆ ಬಾರದ ಕಾರಣ ಪತ್ನಿಯೇ ಏಕಾಂಗಿಯಾಗಿ ಅಂತಿಮ ವಿಧಿವಿಧಾನವನ್ನು ನಡೆಸಿದ ಘಟನೆ ಬಿಹಾರದ ದರ್ಬಂಗಾ ಜಿಲ್ಲೆಯಲ್ಲಿ ನಡೆದಿದೆ.
ಕಾನ್ಪುರದ ನಿವಾಸಿಯಾದ ಹರಿಕಾಂತ್ ರಾಯ್ ಎಂಬವರು ಗ್ರಾಮದಲ್ಲಿ ನಡೆದ ಅಷ್ಟ್ಯಂ ಎಂಬ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ನಂತರ ಕೊರೊನಾ ವೈರಸ್‌ಗೆ ತುತ್ತಾಗಿದ್ದರು. ಆ ಬಳಿಕ ರಾಯ್ ಅವರ ಆರೋಗ್ಯ ಭಾರೀ ಪ್ರಮಾಣದಲ್ಲಿ ಹದಗೆಟ್ಟು ರೋಸರಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾದ ನಂತರ ಅವರನ್ನು ದರ್ಬಂಗಾ ಮೆಡಿಕಲ್ ಕಾಲೇಜ್‌ಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಆದರೆ ರಾಯ್ ಈ ಆಸ್ಪತ್ರೆಯಲ್ಲಿಯೇ ತಮ್ಮ ಕೊನೆಯುಸಿರು ಎಳೆದರು.
ಹರಿಕಾಂತ್ ರಾಯ್ ಕೊರೊನಾ ವೈರಸ್‌ನಿಂದ ಮೃತಪಟ್ಟಿದ್ದಾರೆ ಎಂಬ ಕಾರಣದಿಂದಾಗಿ ಬಹುತೇಕ ಅವರ ಸಂಬಂಧಿಕರು ಈ ಕುಟುಂಬದಿಂದ ಅಂತರ ಕಾಯ್ದುಕೊಂಡಿದ್ದರು. ಆದರೆ ಅವರಿಂದ ನೆರವಿಗಾಗಿ ಹರಿಕಾಂತ್ ರಾಯ್ ಅವರ ಪತ್ನಿ ಬೇಡಿಕೊಳ್ಳುತ್ತಲೇ ಇದ್ದರು. ಶುಕ್ರವಾರ ರಾಯ್ ಮೃತಪಟ್ಟ ನಂತರ 18 ಗಂಟೆಗಳ ಕಾಲ ಆಸ್ಪತ್ರೆಯ ಶವಾಗಾರದಲ್ಲಿ ಅವರ ಶವವನ್ನು ಇರಿಸಲಾಗಿತ್ತು. ಆದರೆ ಅಂತಿಮ ಕ್ರಿಯೆ ನಡೆಸಲು ಕುಟುಂಬದ ಯಾರೊಬ್ಬರು ಅವರ ಪತ್ನಿಗೆ ಸಾಥ್ ನೀಡಲಿರಲಿಲ್ಲ.

ಈ ವಿಚಾರ ತಿಳಿದ ಕಬೀರ್ ಸೇವಾ ಸಂಸ್ಥಾನ್ ಎಂಬ ಸಂಸ್ಥೆಯ ಸಾಮಾಜಿಕ ಕಾರ್ಯಕರ್ತರು ಹರಿಕಾಂತ್ ರಾಯ್ ಅವರ ಪತ್ನಿಯ ನೆರವಿಗೆ ಬಂದರು. ಈ ಕಾರ್ಯಕರ್ತರ ನೆರವಿನಿಂದಿಗೆ ರಾಯ್ ಅವರ ಪತ್ನಿ ದೇವಿ ಪಿಪಿಇ ಕಿಟ್ ಧರಿಸಿ ಪತಿಯ ದೇಹವನ್ನು ಕೊವಿಡ್ ನಿಯಮದ ರೀತಿಯಲ್ಲಿ ಪಡೆದುಕೊಂಡರು
ಈ ಸಾಮಾಜಿಕ ಕಾರ್ಯರ್ತರ ನೆರವಿನೊಂದಿಗೆ ದೇವಿ ಅವರು ಸ್ವತಃ ಎಲ್ಲಾ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿ ಪತಿಯ ಅಂತಿಮ ಸಂಸ್ಕಾರವನ್ನು ನೆರವೇರಿಸಿದ್ದಾರೆ. ಮೃತ ಹರಿಕಾಂತ್ ರಾಯ್ ಪತ್ನಿಯ ಜೊತೆಗೆ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications