ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಹಾರ: ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ

|
Google Oneindia Kannada News

ಪಾಟ್ನಾ, ಅಕ್ಟೋಬರ್.26: ಬಿಹಾರ ವಿಧಾನಸಭಾ ಚುನಾವಣೆ ರಣಕಣದಲ್ಲಿ ರಾಜಕೀಯ ಪಕ್ಷಗಳ ಅಬ್ಬರಕ್ಕೆ ಸೋಮವಾರ ತೆರೆ ಬೀಳಲಿದೆ. ಮೊದಲ ಹಂತದ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ಇಂದು ಅಂತ್ಯಗೊಳ್ಳಲಿದೆ.

ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆಸುವುದಕ್ಕೆ ತೀರ್ಮಾನಿಸಲಾಗಿದೆ. ಅಕ್ಟೋಬರ್.28ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ಮತದಾನ ಪ್ರಕ್ರಿಯೆಗೂ 48 ಗಂಟೆಗಳಿಗೆ ಮೊದಲು ಬಹಿರಂಗ ಪ್ರಚಾರಕ್ಕೆ ತೆರೆ ಎಳೆಯಲಾಗುತ್ತದೆ.

ಬಿಹಾರದಲ್ಲಿ ನಿರುದ್ಯೋಗ ನೀಗಿಸುವ ಪಕ್ಷಗಳಿಗೆ ಶಾಕಿಂಗ್ ನ್ಯೂಸ್! ಬಿಹಾರದಲ್ಲಿ ನಿರುದ್ಯೋಗ ನೀಗಿಸುವ ಪಕ್ಷಗಳಿಗೆ ಶಾಕಿಂಗ್ ನ್ಯೂಸ್!

ಮುಂದಿನ 24 ಗಂಟೆಗಳಲ್ಲಿ ರಾಜಕೀಯ ಪಕ್ಷಗಳ ನಾಯಕರು ಮನೆ ಮನೆ ಪ್ರಚಾರ ನಡೆಸಲಿದ್ದು, ಮತದಾರರ ಓಲೈಕೆಗೆ ಕಸರತ್ತು ಮುಂದುವರಿಸಲಿದ್ದಾರೆ. ಉಳಿದಂತೆ ನವೆಂಬರ್.03 ಎರಡನೇ ಹಂತದ ಚುನಾವಣೆ ಮತ್ತು ನವೆಂಬರ್.07ರಂದು ಮೂರನೇ ಹಂತದ ಚುನಾವಣೆ ನಡೆಯಲಿದೆ. ಖಾಲಿ ಆಗಿರುವ ವಾಲ್ಮೀಕಿ ನಗರ ಲೋಕಸಭಾ ಕ್ಷೇತ್ರಕ್ಕೂ ನವೆಂಬರ್.07ರಂದೇ ಮತದಾನ ನಡೆಯಲಿದೆ. ನವೆಂಬರ್.10ರಂದು ಎಲ್ಲಾ ಕ್ಷೇತ್ರಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ.

Campaigning For The First Phase Of Bihar Elections 2020 Will End On Oct.26

ಉದ್ಯೋಗ ಸೃಷ್ಟಿ ಮತ್ತು ಅಭಿವೃದ್ಧಿ ಮಂತ್ರ:

2020ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಹುತೇಕ ಎಲ್ಲಾ ರಾಜಕೀಯ ಪಕ್ಷಗಳದ್ದೂ ಒಂದೇ ಧ್ಯೇಯವಾಗಿದೆ. ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಮತ್ತು ಅಭಿವೃದ್ಧಿ ಮಂತ್ರವನ್ನು ಜಪಿಸುತ್ತಾ ಮತದಾರರ ಪ್ರಭುಗಳನ್ನು ಮೆಚ್ಚಿಸುವುದಕ್ಕೆ ಹೊರಟಿವೆ. ಬಿಜೆಪಿ ಮತ್ತು ಜೆಡಿಯು, ವಿಐಪಿ ಮೈತ್ರಿಕೂಟವು ಒಂದಾಗಿ ಚುನಾವಣೆ ಅಖಾಡದಲ್ಲಿ ಕೈ ಜೋಡಿಸಿವೆ. ಎನ್ ಡಿಎ ಮೈತ್ರಿಕೂಟದ ವಿರುದ್ಧ ಕಾಂಗ್ರೆಸ್ ಮತ್ತು ಆರ್ ಜೆಡಿ ಮಹಾಘಟಬಂಧನ್ ರಚಿಸಿಕೊಂಡಿದೆ. ಸಿಎಂ ನಿತೀಶ್ ಕುಮಾರ್ ಆಡಳಿತದ ವಿರುದ್ಧ ಬೇಸತ್ತು ಎನ್ ಡಿಎ ಮೈತ್ರಿಕೂಟದಿಂದ ಹೊರ ನಡೆದ ಲೋಕ ಜನಶಕ್ತಿ ಪಕ್ಷವು ಬಿಹಾರ ಫಸ್ಟ್, ಬಿಹಾರಿ ಫಸ್ಟ್ ಎಂಬ ಘೋಷವಾಕ್ಯದೊಂದಿಗೆ ಚುನಾವಣೆ ಅಖಾಡದಲ್ಲಿ ಮಿಂಚಿನ ಸಂಚಲನ ಸೃಷ್ಟಿಸುತ್ತಿದೆ.

English summary
Campaigning For The First Phase Of Bihar Elections 2020 Will Ended Before 48 Hours From Voting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X