ಬಿಹಾರದಲ್ಲಿ ಜಾತಿ ಗಣತಿ ಪ್ರಕ್ರಿಯೆ ಶೀಘ್ರ: ನಿತೀಶ್‌ ಕುಮಾರ್‌

ಬಿಹಾರ, ಜೂ. 2: ಬಿಹಾರ ಸರಕಾರ ಶೀಘ್ರದಲ್ಲೇ ರಾಜ್ಯದಲ್ಲಿ ಜಾತಿ ಆಧಾರಿತ ಜನಗಣತಿ ನಡೆಸಲಿದೆ. ಜೂನ್ 1 ರಂದು ನಡೆದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ವಪಕ್ಷ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ತಿಳಿಸಿದ್ದಾರೆ.

ಸರ್ವಪಕ್ಷ ಸಭೆಯ ನಂತರ ಮಾತನಾಡಿದ ಮುಖ್ಯಮಂತ್ರಿ ನಿತೀಶ್ ಕುಮಾರ್, ಜಾತಿ ಗಣತಿ ಮಾಡಲಾಗುವ ಈ ಪ್ರಕ್ರಿಯೆಯನ್ನು "ಜಾತಿ ಆಧಾರ ಗಣನಾ" ಎಂದು ಕರೆಯಲಾಗುವುದು. ಇದನ್ನು ಮುಂದುವರಿಸುವ ನಿರ್ಧಾರವನ್ನು ಬಿಜೆಪಿ ಸೇರಿದಂತೆ ಸಭೆಯಲ್ಲಿದ್ದ ಎಲ್ಲ ರಾಜಕೀಯ ಪಕ್ಷಗಳು ಸರ್ವಾನುಮತದಿಂದ ಕೈಗೊಂಡವು. ರಾಜ್ಯ ಸರ್ಕಾರವು ಸಂಪೂರ್ಣ ಈ ಪ್ರಕ್ರಿಯೆಯನ್ನು ನಿರ್ದಿಷ್ಟ ಸಮಯದೊಳಗೆ ಪೂರ್ಣಗೊಳಿಸುತ್ತದೆ ಎಂದು ಅವರು ಹೇಳಿದರು.

 ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಉದ್ದೇಶ

ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಉದ್ದೇಶ

ಎಲ್ಲ ಧರ್ಮ ಮತ್ತು ಜಾತಿಗೆ ಸೇರಿದ ಜನರ ಗಣತಿ ನಡೆಸಲಾಗುವುದು. ಅವಕಾಶ ವಂಚಿತ ಜನರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದು ಈ ಜಾತಿ ಗಣತಿಯ ಉದ್ದೇಶವಾಗಿದೆ. ರಾಜ್ಯದಲ್ಲಿ ಜಾತಿ ಆಧಾರಿತ ಜನಗಣತಿ ನಡೆಸಲು ಔಪಚಾರಿಕ ಪ್ರಸ್ತಾವನೆಯನ್ನು ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟದ ಮುಂದೆ ಅನುಮೋದನೆಗಾಗಿ ತರಲಾಗುವುದು. ನಂತರ ಪ್ರಕ್ರಿಯೆಯು ಪ್ರಾರಂಭವಾಗಲಿದೆ. ಜಾತಿ ಆಧಾರಿತ ಜನಗಣತಿ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವ ಜನರಿಗೆ ಸರಿಯಾದ ತರಬೇತಿಯನ್ನು ಸಹ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.

 ಬಿಟ್ಟುಹೋದರೆ ಅಧಿಕಾರಿಗಳನ್ನು ಸಂಪರ್ಕಿಸಿ

ಬಿಟ್ಟುಹೋದರೆ ಅಧಿಕಾರಿಗಳನ್ನು ಸಂಪರ್ಕಿಸಿ

ಗಣತಿಯ ದತ್ತಾಂಶವನ್ನು ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗುತ್ತದೆ. ರಾಜ್ಯ ಸರ್ಕಾರವು ಜನಗಣತಿಗೆ ಸಂಬಂಧಿಸಿದ ಮಾಹಿತಿಯನ್ನು ಪತ್ರಿಕೆಗಳಲ್ಲಿ ಜಾಹೀರಾತುಗಳ ಮೂಲಕ ಪ್ರಕಟಿಸುತ್ತದೆ. ಜಾತಿ ಗಣತಿ ಪ್ರಕ್ರಿಯೆಯಲ್ಲಿ ಎಲ್ಲಾ ವಿವರಗಳನ್ನು ಎಲ್ಲಾ ಪಾಲುದಾರರೊಂದಿಗೆ ಹಂಚಿಕೊಳ್ಳಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಿ ಮತ್ತು ಬಿಟ್ಟುಹೋದರೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಸಿಎಂ ಹೇಳಿದ್ದಾರೆ.

 ಬಿಜೆಪಿಯಿಂದಾಗಿ ಯಾವುದೇ ನಿರ್ಧಾರ ಆಗುತ್ತಿಲ್ಲ

ಬಿಜೆಪಿಯಿಂದಾಗಿ ಯಾವುದೇ ನಿರ್ಧಾರ ಆಗುತ್ತಿಲ್ಲ

ಈ ಹಿಂದೆ ಮೇ ನಲ್ಲಿ ಬಿಹಾರದಲ್ಲಿ ಜನತಾ ದಳ ಯುನೈಟೆಡ್ (ಜೆಡಿಯು) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ನಡುವೆ ಜಾತಿ ಗಣತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ರಾಜಕೀಯವು ಸರಿಯಾಗಿ ನಡೆಯುತ್ತಿಲ್ಲ. ಭಿನ್ನಮತದಿಂದ ಬಿಜೆಪಿಯಿಂದಾಗಿ ಜಾತಿ ಗಣತಿ ಬಗ್ಗೆ ಯಾವುದೇ ನಿರ್ಧಾರ ಆಗುತ್ತಿಲ್ಲ ಎಂದು ಜೆಡಿಯು ನಾಯಕ ಉಪೇಂದ್ರ ಕುಶ್ವಾಹ ಹೇಳಿದ್ದರು.

 ನಿತೀಶ್ ಕುಮಾರ್ ಅವರಿಂದ ವಿಚಾರ ಬಹಿರಂಗ

ನಿತೀಶ್ ಕುಮಾರ್ ಅವರಿಂದ ವಿಚಾರ ಬಹಿರಂಗ

ಪ್ರತಿಪಕ್ಷ ನಾಯಕ ತೇಜಸ್ವಿ ಅವರ ಇಚ್ಛೆಯಂತೆ ಸರ್ಕಾರ ನಡೆಸಲು ಬಿಡುವುದಿಲ್ಲ ಎಂದು ಕೃಷಿ ಸಚಿವ ಅಮರೇಂದ್ರ ಪ್ರತಾಪ್ ಸಿಂಗ್ ಹೇಳಿದ ಒಂದು ದಿನದ ನಂತರ, ಉಪೇಂದ್ರ ಕುಶ್ವಾಹಾ ಈ ವಿಷಯದ ಬಗ್ಗೆ ಮಾತನಾಡಿದ್ದರು. ಈ ವಿಚಾರ ನಿತೀಶ್ ಕುಮಾರ್ ಅವರಿಂದ ಹೊರಬರುತ್ತದೆ ಎಂದಿದ್ದರು. ಈ ವಿಚಾರ ಬಿಜೆಪಿಗೆ ತಮ್ಮ ನಾಯಕರನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ ಎಂದು ವರದಿಯಾಗಿತ್ತು. ಅಲ್ಲದೆ ಕುಶ್ವಾಹ ಹೇಳಿದ್ದಕ್ಕೆ ವಿರುದ್ಧವಾಗಿ ಹೇಳಿಕೆಗಳನ್ನು ನೀಡಲಾಗಿತ್ತು. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದ ಉಪೇಂದ್ರ ಕುಶ್ವಾಹಾ, ಬಿಜೆಪಿಯಿಂದಲೇ ಜಾತಿ ಗಣತಿ ವಿಳಂಬವಾಗುತ್ತಿದೆ ಎಂದು ಹೇಳಿದ್ದರು. ಇದು ಹೇಳಿಕೆ ಬಿಜೆಪಿ ನಾಯಕರನ್ನು ಕೆರಳಿಸಿತ್ತು.

 ಉಪೇಂದ್ರ ಕುಶ್ವಾಹರಿಂದ ತಪ್ಪು ಮಾಹಿತಿ

ಉಪೇಂದ್ರ ಕುಶ್ವಾಹರಿಂದ ತಪ್ಪು ಮಾಹಿತಿ

ಬಿಜೆಪಿಯಿಂದಾಗಿ ಸರ್ವಪಕ್ಷಗಳ ಸಭೆ ನಡೆಯುತ್ತಿಲ್ಲ, ಜಾತಿ ಗಣತಿಗೆ ಸಂಬಂಧಿಸಿದಂತೆ ಯಾವುದೇ ತೀರ್ಮಾನ ಕೈಗೊಳ್ಳುತ್ತಿಲ್ಲ ಎಂದು ಅವರು ಹೇಳಿದ್ದ ಹಿನ್ನೆಲೆಯಲ್ಲಿ ಅವರ ಮಾತಿಗೆ ಪ್ರತಿಕ್ರಿಯಿಸಿದ್ದ ಬಿಜೆಪಿ ನಾಯಕರು, ಉಪೇಂದ್ರ ಕುಶ್ವಾಹ ಅವರು ಸಂಪೂರ್ಣವಾಗಿ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+