ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಬಿಹಾರದ ಇಬ್ಬರು ಆರ್‌ಜೆಡಿ ನಾಯಕರ ಮೇಲೆ ಸಿಬಿಐ ದಾಳಿ

|
Google Oneindia Kannada News

ಪಾಟ್ನಾ, ಆಗಸ್ಟ್‌ 24: ರೈಲ್ವೆ ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಆರ್‌ಜೆಡಿಯ ರಾಜ್ಯಸಭಾ ಸಂಸದ ಅಹ್ಮದ್ ಅಶ್ಫಾಕ್ ಕರೀಂ ಮತ್ತು ಬಿಹಾರದ ವಿಧಾನ ಪರಿಷತ್ ಸದಸ್ಯ ಸುನಿಲ್ ಸಿಂಗ್ಅವರ ನಿವಾಸದ ಮೇಲೆ ಕೇಂದ್ರೀಯ ತನಿಖಾ ದಳ ಬುಧವಾರ ದಾಳಿ ನಡೆಸಿದೆ.

ಇದನ್ನು ಉದ್ದೇಶಪೂರ್ವಕವಾಗಿ ಮಾಡಲಾಗುತ್ತಿದೆ. ಅದರಲ್ಲಿ ಯಾವುದೇ ಅರ್ಥವಿಲ್ಲ. ಅವರು ಭಯದಿಂದ ಇದನ್ನು ಮಾಡುತ್ತಿದ್ದಾರೆ ಎಂದು ಆರ್‌ಜೆಡಿ ನಾಯಕ ಸುನೀಲ್‌ ಸಿಂಗ್‌ ಹೇಳಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಮಹಾಘಟಬಂಧನ್ ಎರಡು ದಿನಗಳ ವಿಶೇಷ ಅಧಿವೇಶನ ಇಂದು ಆರಂಭವಾಗುತ್ತಿದ್ದಂತೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಜ್ಜಾಗಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ಈ ವರ್ಷದ ಮೇ ತಿಂಗಳಲ್ಲಿ ಸಿಬಿಐ ಮಾಜಿ ರೈಲ್ವೇ ಸಚಿವ ಲಾಲು ಪ್ರಸಾದ್, ಅವರ ಪತ್ನಿ ರಾಬ್ರಿ ದೇವಿ, ಇಬ್ಬರು ಪುತ್ರಿಯರು ಮತ್ತು ಇತರ 12 ಮಂದಿ ವಿರುದ್ಧ ಹೊಸ ಪ್ರಕರಣವನ್ನು ದಾಖಲಿಸಿದ್ದು, ಭೂಕಂದಾಯಕ್ಕೆ ಬದಲಾಗಿ ಉದ್ಯೋಗಗಳನ್ನು ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಸಿಬಿಐ ದಾಳಿಗಳು ನಡೆಯುತ್ತಿವೆ.

CBI Raids on Two RJD Leaders From Bihar

ಪಾಟ್ನಾದಲ್ಲಿರುವ ಆರ್‌ಜೆಡಿ ಎಂಎಲ್‌ಸಿ ಸುನೀಲ್ ಸಿಂಗ್ ಅವರ ನಿವಾಸದ ಮೇಲೆ ಈಗ ಸಿಬಿಐ ದಾಳಿ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ. ಲಾಲು ಪ್ರಸಾದ್ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಯ ಹಿರಿಯ ನಾಯಕರ ಮನೆಗಳ ಮೇಲೆ ಕೇಂದ್ರ ತನಿಖಾ ದಳ (ಸಿಬಿಐ) ಇಂದು ದಾಳಿ ನಡೆಸಿದೆ.

CBI Raids on Two RJD Leaders From Bihar

ಜನತಾ ದಳ (ಯುನೈಟೆಡ್) ಬಿಜೆಪಿಯಿಂದ ಬೇರ್ಪಟ್ಟು ಆರ್‌ಜೆಡಿಯೊಂದಿಗೆ ಕೈಜೋಡಿಸಿ ಎರಡು ವಾರಗಳ ನಂತರ, ಆರ್‌ಜೆಡಿ ಬೆಂಬಲಿತ ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡುವ ದಿನದಂದು ಈ ದಾಳಿಗಳನ್ನು ನಡೆಸಲಾಗಿದೆ.

Recommended Video

POP ಗಣೇಶ ಮೂರ್ತಿನ ಬ್ಯಾನ್ ಮಾಡಿದ್ರೂ ಸೇಲ್ ಮಾಡ್ತಾರೆ | Oneindia Kannada

English summary
The Central Investigation Department on Wednesday raided the residences of RJD Rajya Sabha MP Ahmed Ashfaq Karim and Bihar Legislative Council member Sunil Singh this morning in connection with the railway jobs land scam case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X