ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಆ. 24 ರಂದು ನಿತೀಶ್ ಕುಮಾರ್ ವಿಶ್ವಾಸಮತ ಯಾಚನೆ

|
Google Oneindia Kannada News

ಪಾಟ್ನಾ, ಆಗಸ್ಟ್ 11: ಬಿಹಾರ ವಿಧಾನಸಭೆಯಲ್ಲಿ ನಿತೀಶ್ ಕುಮಾರ್ ನೇತೃತ್ವದ 'ಮಹಾಘಟಬಂಧನ್' ಸರ್ಕಾರದ ವಿಶ್ವಾಸಮತ ಯಾಚನೆ ಆಗಸ್ಟ್ 24 ರಂದು ನಡೆಯಲಿದೆ.

ಜನತಾ ದಳ-ಯುನೈಟೆಡ್ (ಜೆಡಿ-ಯು) ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ್ (ಎನ್‌ಡಿಎ) ಜೊತೆಗಿನ ಸಂಬಂಧವನ್ನು ಕಡಿದುಕೊಂಡಿರುವ ನಿತೀಶ್ ಕುಮಾರ್, ಆರ್‌ಜೆಡಿ, ಕಾಂಗ್ರೆಸ್ ಮತ್ತು ಇತರ ಪಕ್ಷಗಳ ಜೊತೆಗೆ ಸೇರಿ 'ಮಹಾಘಟಬಂಧನ್' ಸರ್ಕಾರವನ್ನು ರಚಿಸಿದ್ದಾರೆ.

ಬುಧವಾರ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದರು. ಆರ್‌ಜೆಡಿಯ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜೆಡಿಯು, ಆರ್‌ಜೆಡಿ, ಕಾಂಗ್ರೆಸ್ ಮತ್ತು ಇತರ ಪಕ್ಷಗಳ ನಾಯಕರನ್ನು ಒಳಗೊಂಡ ಸಚಿವ ಸಂಪುಟ ಶೀಘ್ರದಲ್ಲೇ ವಿಸ್ತರಣೆಯಾಗುವ ಸಾಧ್ಯತೆಯಿದೆ.

CM Nitish Kumar Mahagathbandhan govt to prove majority on August 24

ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ರಾಜೀನಾಮೆ ನೀಡಲು ನಿರಾಕರಿಸಿದ್ದರಿಂದ, ಹೊಸ 'ಮಹಾಘಟಬಂಧನ್' (ಮಹಾಮೈತ್ರಿಕೂಟ)ದ 55 ಶಾಸಕರು ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ.

ನಿತೀಶ್ ಕುಮಾರ್ ಅವರನ್ನು ಉಪರಾಷ್ಟ್ರಪತಿ ಮಾಡದ ಕಾರಣ ಬಿಜೆಪಿ ಮತ್ತು ಜೆಡಿ(ಯು) ನಡುವಿನ ಜಟಾಪಟಿಗೆ ಕಾರಣ ಎಂಬ ಬಿಜೆಪಿ ನಾಯಕ ಸುಶೀಲ್ ಮೋದಿ ಅವರ ಹೇಳಿಕೆ ನೀಡಿದ್ದರು.

ಈ ಹೇಳಿಕೆ ಸಂಪೂರ್ಣ ಬೋಗಸ್ ಎಂದು ಬಣ್ಣಿಸಿದ ನಿತೀಶ್ ಕುಮಾರ್, "ಇದು ತಮಾಷೆಯೇ? ನನಗೆ ಅಂತಹ ಆಸೆ ಇಲ್ಲ. ನಾವು ರಾಷ್ಟ್ರಪತಿ ಮತ್ತು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳನ್ನು ಬೆಂಬಲಿಸಿದ್ದೇವೆ. ನಾನು ಉಪರಾಷ್ಟ್ರಪತಿಯಾಗಲು ಬಯಸುವುದು ತಮಾಷೆಯಾಗಿದೆ" ಎಂದು ಹೇಳಿದ್ದಾರೆ.

ಮಹಾಮೈತ್ರಿಕೂಟವು ವಿಧಾನಸಭೆಯಲ್ಲಿ ಒಟ್ಟು 164 ಸದಸ್ಯರನ್ನು ಹೊಂದಿದ್ದರೆ, ಬಿಜೆಪಿ 77 ಶಾಸಕರನ್ನು ಹೊಂದಿದೆ.

English summary
Bihar Chief Minister Nitish Kumar led Mahagathbandhan government to prove majority in the Bihar Legislative Assembly on August 24. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X